Homeರಾಜಕೀಯಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

- Advertisement -
- Advertisement -

ತಮಿಳುನಾಡಿನ ಚೆನ್ನೈನಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ‘ತಮಿಳುನಾಡು ವಾಲ್‌ಗ’ (ತಮಿಳುನಾಡು ಚಿರಾಯುವಾಗಲಿ) ಎಂದು ಬರೆದಿರುವ ಬೃಹತ್ ಬ್ಯಾನರ್‌‌ನ ಟ್ಯಾಬ್ಲೋ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ತಮಿಳುನಾಡನ್ನು ‘ತಮಿಳಗಂ’ ಎಂದು ಕರೆಯಬೇಕು ಎಂದು ಆಗ್ರಹಿಸಿ ರಾಜ್ಯಪಾಲ ಆರ್‌.ಎನ್‌. ರವಿ ಸೃಷ್ಟಿಸಿದ್ದ ವಿವಾದದ ನಡುವೆ ಟ್ಯಾಬ್ಲೋ ಭಾರಿ ರಾಜಕೀಯ ಮಹತ್ವ ಪಡೆದುಕೊಂಡಿದೆ.

ಜನವರಿ ಮೊದಲ ವಾರದಲ್ಲಿ, ರಾಜ್ಯಪಾಲ ರವಿ ಅವರು ತಮಿಳುಬನಾಡು ರಾಜಭವನದಲ್ಲಿ ಮಾಡಿದ ಭಾಷಣದಲ್ಲಿ ರಾಜ್ಯಕ್ಕೆ ‘ತಮಿಳಗಂ’ ಎಂಬ ಹಸರು ಹೆಚ್ಚು ಸೂಕ್ತವಾಗಿದೆ ಎಂದು ಸೂಚಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಇಷ್ಟೆ ಅಲ್ಲದೆ ರಾಜಭವನದ ‘ಪೊಂಗಲ್’ ಆಚರಣೆಯ ಆಹ್ವಾನ ಪತ್ರದಲ್ಲಿ ಕೂಡಾ ರಾಜ್ಯವನ್ನು ‘ತಮಿಳಗಂ’ ಎಂದು ಉಲ್ಲೇಖಿಸಲಾಗಿತ್ತು. ಈ ಘಟನೆಯು ತಮಿಳುನಾಡಿನಲ್ಲಿ ಭಾರಿ ಪ್ರತಿಭಟನೆ ಹುಟ್ಟು ಹಾಕಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಣರಾಜ್ಯೋತ್ಸವದ ಹಿಂದಿನ ದಿನವಾದ ಬುಧವಾರ ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ರಾಜ್ಯಪಾಲ ರವಿ ಅವರು, ತಮ್ಮ ಭಾಷಣದ ಕೊನೆಯಲ್ಲಿ ‘ವಾಲ್‌ಗ ತಮಿಳುನಾಡು’ (ತಮಿಳುನಾಡುಗೆ ಚಿರಾಯುವಾಗಲಿ) ಮತ್ತು ‘ವಾಲ್‌ಗ ಭಾರತಂ’ (ಭಾರತ ಚಿರಾಯುವಾಗಲಿ) ಎಂಬ ಘೋಷಣೆಗಳೊಂದಿಗೆ ತಮ್ಮ ಭಾಷಣವನ್ನು ಕೊನೆಗೊಳಿಸಿದ್ದರು.

ಜನವರಿ 18ರಂದು ಮಾತನಾಡಿದ್ದ ಅವರು, “ತಮಿಳುನಾಡಿನ ಹೆಸರನ್ನು ಬದಲಾಯಿಸಬೇಕು ಎಂದು ನನ್ನ ಸಲಹೆಯನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ. ನನ್ನ ಭಾಷಣದ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳದೆ, ರಾಜ್ಯಪಾಲರು ತಮಿಳುನಾಡು ಪದಕ್ಕೆ ವಿರುದ್ಧವಾಗಿದ್ದಾರೆ ಎಂಬ ವಾದಗಳು ಚರ್ಚೆಯ ವಿಷಯವಾಗಿದೆ. ಹಾಗಾಗಿ ಇದಕ್ಕೆ ಅಂತ್ಯ ಹಾಡಲು ಈ ಸ್ಪಷ್ಟನೆ ನೀಡುತ್ತಿದ್ದೇನೆ” ಎಂದು  ಹೇಳಿದ್ದರು.

ಆದಾಗ್ಯೂ, ಎರಡು ಎಡ ಪಕ್ಷಗಳು ಸೇರಿದಂತೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನ ನಾಲ್ಕು ಮಿತ್ರಪಕ್ಷಗಳು ಬುಧವಾರ ರಾಜ್ಯಪಾಲ ರವಿ ಆಯೋಜಿಸಿದ್ದ ಗಣರಾಜ್ಯೋತ್ಸವದ ಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದವು. ಈ ಹಿಂದೆ ಕೂಡಾ ಆಡಳಿತರೂಢ ಮಿತ್ರಪಕ್ಷಗಳು ಪೊಂಗಲ್‌ ಆಚರಣೆಯ ಸಭೆಯನ್ನು ಬಹಿಷ್ಕರಿಸಿದ್ದರು.

ಆಡಳಿತರೂಢ ಮಿತ್ರಪಕ್ಷಗಳಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ -ಮಾರ್ಕ್ಸ್‌ವಾದಿ (ಸಿಪಿಐ-ಎಂ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ತೋಲ್ ತಿರುಮವಳವನ್ ನೇತೃತ್ವದ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮತ್ತು ತಮಿಳಗ ವಾಳ್ವುರಿಮೈ ಕಚ್ಚಿ (ಟಿವಿಕೆ) ಗುರುವಾರ ನಡೆಯಲಿರುವ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ.

ಸಿಪಿಐ ರಾಜ್ಯ ಕಾರ್ಯದರ್ಶಿ ಆರ್. ಮುತರಸನ್ ನೀಡಿರುವ ಹೇಳಿಕೆಯಲ್ಲಿ, “ಕಾರ್ಯಕ್ರಮದ ಆಹ್ವಾನ ಪತ್ರದಲ್ಲಿ ರವಿಯನ್ನು ‘ತಮಿಳುನಾಡು ರಾಜ್ಯಪಾಲ’ ಎಂದು ಉಲ್ಲೇಖಿಸಿದ್ದರೂ, ಅವರು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ಮಾಡಿಲ್ಲ. ತಮಿಳುನಾಡು ವಿಧಾನಸಭೆಯಿಂದ 20 ಕ್ಕೂ ಹೆಚ್ಚು ಮಸೂದೆಗಳನ್ನು ಅಂಗೀಕರಿಸಲಾಗಿದ್ದು, ಆದರೆ ರಾಜ್ಯಪಾಲರು ಅವುಗಳನ್ನು ಹಾಗೆ ಇಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದಷ್ಟೆ ಅಲ್ಲದೆ, ಅವರು ಆರ್‌ಎಸ್‌ಎಸ್‌ ಪರ ಹೇಳಿಕೆಗಳನ್ನು ನೀಡುವುದನ್ನು ಮುಂದುವರೆಸಿದ್ದಾರೆ. ಆದ್ದರಿಂದ, ಗುರುವಾರ ರಾಜಭವನದಲ್ಲಿ ಆಯೋಜಿಸಲಾದ ‘ಅಟ್ ಹೋಮ್’ ಕಾರ್ಯಕ್ರಮವನ್ನು ಬಹಿಷ್ಕರಿಸಲು ಪಕ್ಷ ನಿರ್ಧರಿಸಿದೆ” ಎಂದು ಎಂದು ಮುತರಸನ್ ಹೇಳಿದ್ದಾರೆ.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕೆ. ಬಾಲಕೃಷ್ಣನ್ ಅವರ ಹೇಳಿಕೆಯಲ್ಲಿ, ರಾಜ್ಯಪಾಲರು ಬಾಕಿ ಉಳಿಸಿರುವ ಮಸೂದೆಗಳು ಸೇರಿದಂತೆ ಸದನದಿಂದ ಹೊರನಡೆದ ಬಗ್ಗೆ ರಾಜ್ಯದ ಜನರಲ್ಲಿ ಕ್ಷಮೆಯಾಚಿಸಿಲ್ಲ ಜೊತೆಗೆ ಅದರ ಬಗ್ಗೆ ವಿಷಾದ ಕೂಡಾ ವ್ಯಕ್ತಪಡಿಸಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಸಿಪಿಐ(ಎಂ) ರಾಜಭವನದ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಲೋಕಸಭಾ ಸದಸ್ಯರಾದ ವಿಸಿಕೆ ಸಂಸ್ಥಾಪಕ ತಿರುಮಾವಲವನ್ ಅವರು ಕೂಡಾ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಜಭವನದ ಕಾರ್ಯಕ್ರಮವನ್ನು ಬಹಿಷ್ಕರಿಸುವ ತಮ್ಮ ಪಕ್ಷದ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಟಿವಿಕೆ ಕೂಡ ‘ಅಟ್ ಹೋಮ್’ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಅದರ ಸಂಸ್ಥಾಪಕ ಮತ್ತು ಪಂರುತಿ ಶಾಸಕ ಟಿ ವೇಲು ಮುರುಗನ್‌ ಘೋಷಿಸಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...