Homeಕರ್ನಾಟಕರಾಜ್ಯ ಬಜೆಟ್: ಸುಳ್ಳು ಸುದ್ದಿ ತಡೆಗೆ ಸತ್ಯ ಶೋಧನಾ ತಂಡ ರಚನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯ ಬಜೆಟ್: ಸುಳ್ಳು ಸುದ್ದಿ ತಡೆಗೆ ಸತ್ಯ ಶೋಧನಾ ತಂಡ ರಚನೆ: ಸಿಎಂ ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ಶೋಧನಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ಡೀಫ್​ ಫೇಕ್​​ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್​ ಸಿಇಎನ್​ ಠಾಣೆ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ರಾಜ್ಯದ ಅಸ್ಮಿತೆ ಮತ್ತು ಸಂಸ್ಕೃತಿಗೆ ಅನುಗುಣವಾಗಿ, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡನ್ನು ಸಿದ್ಧಪಡಿಸಲು ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ರಚಿಸಲಾಗಿದೆ. ಆಯೋಗವು ಶೀಘ್ರದಲ್ಲಿಯೇ ವರದಿಯನ್ನು ಸಲ್ಲಿಸಲಿದ್ದು, ಅದರಂತೆ ಪರಿಶೀಲಿಸಿ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ವಲಸೆ ಹೋದ ಸಂದರ್ಭದಲ್ಲಿ ಅವರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲು ಆಯ್ದ 10 ಜಿಲ್ಲೆಗಳಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ನಿರ್ಮಿಸಲಾಗುವುದು. ಗಿಗ್ ಕಾರ್ಮಿಕರ ಬದುಕಿನ ಭದ್ರತೆಗಾಗಿ Platform-Based Gig Workers Fund and Welfare Fee Bill ಎಂಬ ಹೊಸ ವಿಧೇಯಕವನ್ನು ಜಾರಿಗೆ ತರಲಾಗುವುದು. ಈ ಮೂಲಕ ಅರ್ಹ ಆನ್-ಲೈನ್ ವಹಿವಾಟುಗಳ ಮೇಲೆ ಸೆಸ್ ವಿಧಿಸಿ ಗಿಗ್ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

‘ಅನ್ನ ಸುವಿಧಾ’ ಯೋಜನೆಯಡಿ ಹೋಮ್​ ಡೆಲಿವರಿ ಆ್ಯಪ್​ ​ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಆಹಾರ ತಲುಪಿಸುವ ಯೋಜನೆ ಜಾರಿಗೊಳಿಸಲಾಗುವುದು. ಸರ್ಕಾರದಿಂದ 50 ಕೆಫೆ ಹೋಟೆಲ್ ಸ್ಥಾಪಿಸಲಾಗುವುದು. ಇದಕ್ಕಾಗಿ, 7.5 ಕೋಟಿ ರೂ. ಮೀಸಲಿಡಲಾಗಿದೆ. ಕೈಗೆಟುಕುವ ದರದಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಒದಗಿಸಲು ‘ನಮ್ಮ ಮಿಲ್ಲೆಟ್’ ಎಂಬ ಹೊಸ ಕಾರ್ಯಕ್ರಮ ಪ್ರಾರಂಭಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಇದನ್ನೂ ಓದಿ : ಬಜೆಟ್ ಮಂಡನೆ ವೇಳೆ ಕೇಂದ್ರದ ಆರ್ಥಿಕ ತಾರತಮ್ಯ ಪ್ರಸ್ತಾಪಿಸಿದ ಸಿಎಂ: ಸದನದಿಂದ ಹೊರ ನಡೆದ ಬಿಜೆಪಿ ಶಾಸಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್ ತೆಗೆದುಕೊಂಡ ಬಳಿಕ ನಮ್ಮ ಮಕ್ಕಳು ಸಾವನ್ನಪ್ಪಿದ್ದಾರೆ: ಪೋಷಕರ ಆರೋಪ

0
ಕೋವಿಶೀಲ್ಡ್ ಲಸಿಕೆ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್ ಕಡಿಮೆಯಂತಹ ಅಡ್ಡಪರಿಣಾಮಕ್ಕೆ ಕಾರಣವಾಗುತ್ತದೆ ಎಂದು ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಟಿಷ್ ಫಾರ್ಮಾ ದೈತ್ಯ 'ಅಸ್ಟ್ರಾಜೆನೆಕಾ' ಯುಕೆ ಕೋರ್ಟ್‌ನಲ್ಲಿ ಒಪ್ಪಿಕೊಂಡ ಬೆನ್ನಲ್ಲಿ ಕೋವಿಶೀಲ್ಡ್‌ ತೆಗೆದುಕೊಂಡ...