Homeಕರ್ನಾಟಕಸರ್ಕಾರದ ನಡೆಗೆ ಸ್ವಾಗತ, ಆದರೆ ಸಂಪುಟ ನಿರ್ಣಯ ಗೊಂದಲದ ಗೂಡಾಗಿದೆ: ಒಳಮೀಸಲಾತಿ ಹೋರಾಟ ವೇದಿಕೆ

ಸರ್ಕಾರದ ನಡೆಗೆ ಸ್ವಾಗತ, ಆದರೆ ಸಂಪುಟ ನಿರ್ಣಯ ಗೊಂದಲದ ಗೂಡಾಗಿದೆ: ಒಳಮೀಸಲಾತಿ ಹೋರಾಟ ವೇದಿಕೆ

‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ ವತಿಯಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಹೋರಾಟವನ್ನು ಶನಿವಾರ ಕೈಬಿಡಲಾಯಿತು.

- Advertisement -
- Advertisement -

“ಒಳಮೀಸಲಾತಿ ಜಾರಿಗೊಳಿಸುವ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಆದರೆ ಸರ್ಕಾರದ ನಿರ್ಣಯ ಗೊಂದಲದ ಗೂಡಾಗಿದೆ” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಎಸ್.ಮಾರಪ್ಪ ಹೇಳಿದರು.

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಮಿತಿಯು ಕಳೆದ 111 ದಿನಗಳಿಂದ ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ನಡೆಸುತ್ತಿದ್ದ ಹೋರಾಟವನ್ನು ಶನಿವಾರ ತಾತ್ಕಾಲಿಕವಾಗಿ ಕೈಬಿಡಲಾಯಿತು. ಸಮಾರೋಪ ಸಮಾರಂಭದ ವೇಳೆ ಮಾಧ್ಯಮಗಳೊಂದಿಗೆ ಮಾರಪ್ಪನವರು ಮಾತನಾಡಿದರು.

“ಮೀಸಲಾತಿ ವರ್ಗೀಕರಣವನ್ನು ಗೊಂದಲದ ಗೂಡಾಗಿಸಲಾಗಿದೆ. ಮೂಲ ಸಮುದಾಯಗಳನ್ನು ಶೈಕ್ಷಣಿಕ, ಸಾಮಾಜಿಕ ಹಿನ್ನೆಲೆಯಲ್ಲಿ ಗುಂಪುಗಳಾಗಿ ವರ್ಗೀಕರಿಸಬೇಕೇ ಹೊರತು, ತಮಗೆ ಬೇಕಾದಂತೆ ಪಲ್ಲಟ ಮಾಡಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಸರ್ಕಾರ ಮಾಡಿರುವ ಆದೇಶದಲ್ಲಿ ಆದಿಕರ್ನಾಟಕ (ಎ.ಕೆ.) ಮತ್ತು ಆದಿದ್ರಾವಿಡ (ಎ.ಡಿ.) ವರ್ಗೀಕರಣ ಅವೈಜ್ಞಾನಿಕವಾಗಿದೆ. ನಿರ್ದಿಷ್ಟ ಸಮುದಾಯವೇ ಎ.ಕೆ. ಅಥವಾ ಎ.ಡಿ. ಎಂದು ತಿಳಿಸುವುದಕ್ಕೆ ಇವರೇನು ತಜ್ಞರಾ? ಸರ್ಕಾರ ನೇಮಿಸಿದ ಸಚಿವ ಸಂಪುಟ ಉಪಸಮಿತಿಯಲ್ಲಿ ಯಾರಾದರೂ ತಜ್ಞರು ಇದ್ದರಾ?” ಎಂದು ಪ್ರಶ್ನಿಸಿದರು.

“ಮೈಸೂರು ಭಾಗದಲ್ಲಿ ಹೊಲೆಯ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಎ.ಕೆ.ಯಲ್ಲಿದೆ, ಬೆಂಗಳೂರಿನಿಂದ ಕೊಪ್ಪಳದವರೆಗೂ ಮಾದಿಗರು ಎ.ಕೆ.ಯಲ್ಲಿದ್ದಾರೆ. ಒಂದಿಷ್ಟು ಭಾಗದಲ್ಲಿ ಎ.ಡಿ.ಯಲ್ಲಿ ಹೊಲೆಯರಿದ್ದರೆ, ಮತ್ತೊಂದಿಷ್ಟು ಭಾಗದಲ್ಲಿ ಮಾದಿಗರಿದ್ದಾರೆ. ಆದರೆ ಆದಿಕರ್ನಾಟಕದವರೆಲ್ಲ ಹೊಲೆಯರು, ಆದಿ ದ್ರಾವಿಡರೆಲ್ಲ ಮಾದಿಗರು ಎಂದು ಸರ್ಕಾರ ಅವೈಜ್ಞಾನಿಕವಾಗಿ ನಿಲುವು ತಾಳಿದೆ” ಎಂದು ಟೀಕಿಸಿದರು.

“ಅಭಿವೃದ್ಧಿ ಹೊಂದಿದ ಕೆಲವು ಸಮುದಾಯಗಳನ್ನು ಗ್ರೂಪ್‌ 4ರಲ್ಲಿ ಸೇರಿಸಲಾಗಿದೆ. ಅಲ್ಲಿ ಅತ್ಯಂತ ಹಿಂದುಳಿದ ಅಲೆಮಾರಿ ಸಮುದಾಯಗಳಿವೆ. ಬಲಾಢ್ಯರೊಂದಿಗೆ ಈ ಅಲೆಮಾರಿಗಳು ಸ್ಪರ್ಧೆ ಮಾಡಲು ಸಾಧ್ಯವೇ? ಈ ರೀತಿಯ ತೊಡಕುಗಳಿವೆ. ಇವು ಆಡಳಿತಾತ್ಮಕವಾಗಿ ಸರಿಪಡಿಸುವುದು ಕಷ್ಟವೇನಲ್ಲ” ಎಂದು ಅಭಿಪ್ರಾಯಪಟ್ಟರು.

“ಸಂವಿಧಾನದ ವಿಧಿ 341ಕ್ಕೆ ತಿದ್ದುಪಡಿಯಾಗುವವರೆಗೂ, ಲೋಕಸಭಾ ಚುನಾವಣೆಯವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಈಗ ನಿರಂತರವಾಗಿ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಕೇಂದ್ರ ಸಚಿವ ಅಮಿತ್ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ನಮ್ಮ ಬೇಡಿಕೆಗಳನ್ನು ಇಡುತ್ತೇವೆ. ಸದ್ಯಕ್ಕೆ ಚುನಾವಣೆಯ ಹಿನ್ನೆಲೆಯಲ್ಲಿ ಹೋರಾಟವನ್ನು ಮೊಟಕುಗೊಳಿಸುತ್ತಿದ್ದೇವೆ, ಆದರೆ ಚುನಾವಣೆ ಮಧ್ಯದಲ್ಲಿ ನಮ್ಮ ಹೋರಾಟ ಆರಂಭಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.

“ಜಾರಿಯೇ ಆಗದಿರುವ 17 % ಮೀಸಲಾತಿಯಲ್ಲಿ ಒಳಮೀಸಲಾತಿ ನೀಡಲಾಗಿದೆ, ಮಾದಿಗ ಸಮುದಾಯವನ್ನು ಮತ್ತೆ ದಿಕ್ಕು ತಪ್ಪಿಸಲಾಗಿದೆ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಗೊಂದಲ ಆಗಿರುವುದು ನಿಜ. ಆದರೆ ಇದನ್ನು ಸರಿಪಡಿಸಬಹುದು. ಒಳಮೀಸಲಾತಿಯನ್ನು ಒಪ್ಪಿಕೊಂಡಿದ್ದಾರೆ. ಛತ್ತೀಸ್‌ಘಡದಲ್ಲಿ ಶೇ.82ರಷ್ಟು ಮೀಸಲಾತಿ ಇದ್ದರೆ, ಕೆಲವು ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಶೇ.60ನ್ನು ಮೀರಿದೆ. ಹೀಗಾಗಿ ಕರ್ನಾಟಕದಲ್ಲಿ ಮೀಸಲಾತಿ ಹೆಚ್ಚಿಸುವುದು ಸಮಸ್ಯೆಯಾಗುವುದಿಲ್ಲ. ಎಸ್‌ಸಿ, ಎಸ್‌ಟಿಗಳೆಲ್ಲರೂ ಮೀಸಲಾತಿ ಹೆಚ್ಚಳಕ್ಕೆ ಒಕ್ಕೊರಲಿನಿಂದ ಆಗ್ರಹಿಸಬೇಕಿದೆ” ಎಂದರು.

“ಸದ್ಯಕ್ಕೆ ಒಂದು ಮಟ್ಟಿಗಿನ ಗೆಲುವು ನಮಗಾಗಿದೆ. ಆದರೆ ಸ್ಪೃಶ್ಯ ಜಾತಿಗಳಿಗೆ ಹೆಚ್ಚಿನ ಮೀಸಲಾತಿ ನೀಡಿರುವುದು ತಪ್ಪು. ಹೊಲೆಯ ಸಹೋದರರಿಗೆ ಇನ್ನರ್ಧ ಪರ್ಸೆಂಟ್ ಹೆಚ್ಚಿನ ಪಾಲು ನೀಡಬಹುದಿತ್ತು, ಮತ್ತೊಂದರ್ಧ ಅಲೆಮಾರಿಗಳಿಗೆ ನೀಡಬಹುದಿತ್ತು. ಹೆಚ್ಚಿಗೆ ನೀಡಿರುವುದಕ್ಕೆ ಯಾವುದೇ ಕಾರಣ ಕಾಣಿಸುತ್ತಿಲ್ಲ” ಎಂದು ತಿಳಿಸಿದರು.

‘ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿದಿರಿ’

“ಒಳಮೀಸಲಾತಿ ಜಾರಿಗೊಳಿಸಿದ ಮೋದಿ ಮತ್ತು ಅಮಿತ್ ಷಾ ಅವರಿಗೆ ಅಭಿನಂದನೆ” ಎಂಬ ರೀತಿ ಜಾಹೀರಾತುಗಳನ್ನು ನೀಡುತ್ತಿರುವ ಸಂಬಂಧ ಪ್ರತಿಕ್ರಿಯಿಸಿರುವ ಎಸ್.ಮಾರಪ್ಪ ಅವರು, “ಈ ನಡೆ ತಪ್ಪು. ವಿಜಯೋತ್ಸವ ಆಚರಿಸಿಕೊಳ್ಳುವುದಕ್ಕೆ ತಕರಾರು ಇಲ್ಲ. ಆದರೆ ಒಳಮೀಸಲಾತಿ ಇನ್ನೂ ಜಾರಿಯಾಗಿಲ್ಲ. ವಿಜಯೋತ್ಸವ ಮಾಡಿಕೊಳ್ಳುವ ಸಮಯ ಇದಲ್ಲ. ನಮ್ಮ ಕೆಲಸ ಇನ್ನೂ ಇದೆ. ಏನೇ ಹೇಳಿದರೂ ಜನಾಂಗಕ್ಕೆ ಸತ್ಯವನ್ನೇ ಹೇಳಬೇಕು. ರಾಜಕೀಯ ಮೈಲೇಜ್‌ಗಾಗಿ ಸುಳ್ಳುಗಳನ್ನು ಹೇಳಬಾರದು. ಈಗ ಆಗಿರುವ ಬೆಳವಣಿಗೆಗಳಲ್ಲಿ ವಿಜಯೋತ್ಸವ ಆಚರಿಸಿಕೊಳ್ಳುವಂತಹದ್ದು ಏನೂ ಇಲ್ಲ” ಎಂದು ಎಚ್ಚರಿಸಿದರು.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಶಿವರಾಯ ಅಕ್ಕರಕಿ ಮಾತನಾಡಿ, “ನಮ್ಮ ವೇದಿಕೆಯ ವತಿಯಿಂದ ಯಾವುದೇ ರಾಜಕೀಯ ನಿಲುವುಗಳನ್ನು ತೆಗೆದುಕೊಂಡಿಲ್ಲ. ತಟಸ್ಥ ನೀತಿ ನಮ್ಮದಾಗಿದೆ. ಸಮುದಾಯದ ಜನತೆ ತಮಗೆ ಇಷ್ಟವಾದವರಿಗೆ ಬೆಂಬಲ ನೀಡಲಿದ್ದಾರೆ” ಎಂದು ಸ್ಪಷ್ಟಪಡಿಸಿದರು.

“ಒಂದು ಕಾಲದಲ್ಲಿ ಮಾದಿಗ ಸಮುದಾಯದ 24 ಶಾಸಕರು ಇದ್ದರು. ಇಂದು ನಮ್ಮ ಸಂಖ್ಯೆ ಕೇವಲ 5ಕ್ಕೆ ಬಂದು ನಿಂತಿದೆ. ರಾಜಕೀಯ ಪ್ರಾತಿನಿಧ್ಯದ ಕೊರತೆ ಆಗಿದೆ. ನಮ್ಮ ಸಮುದಾಯ ಹೆಚ್ಚಿನ ಸಂಖ್ಯೆ ಇರುವಲ್ಲಿ ನಮ್ಮವರನ್ನು ಗೆಲ್ಲಿಸಿಕೊಳ್ಳುವ ಕೆಲಸವನ್ನು ಮಾಡುತ್ತೇವೆ. ಜೊತೆಗೆ ಅಸ್ಪೃಶ್ಯ ಜನಾಂಗದ ಹೊಲೆಯ, ತ್ರಿಮಸ್ಥ ಚರ್ಮಕಾರ, ಮಾದಿಗ ಸಂಬಂಧಿತ ಯಾವುದೇ ಅಭ್ಯರ್ಥಿಯನ್ನು ಗೆಲ್ಲಿಸಲು ತೀರ್ಮಾನ ಮಾಡಿದ್ದೇವೆ” ಎಂದು ವಿವರಿಸಿದರು.

ಮುಖಂಡರಾದ ಕರಿಯಪ್ಪ ಗುಡಿಮನಿ, ನಂದಕುಮಾರ್‌, ಜೆ.ಡಿ.ರಾಜು, ಹನುಮೇಶ್ ಗುಂಡೂರು, ಪ್ರೊ.ಸಿ.ಕೆ.ಮಹೇಶ್‌, ವೆಂಕಟೇಶ್‌ ದೀಪಾಂಜಲಿನಗರ ಮೊದಲಾದವರು ಸಮಾರೋಪ ಸಮಾರಂಭದಲ್ಲಿ ಹಾಜರಿದ್ದರು.

ಸಮಿತಿ ತೆಗೆದುಕೊಂಡ ನಿರ್ಣಯಗಳು 

1. ಗ್ರೂಪ್ ನಂಬರ್ ಒಂದು ಹಾಗೂ ಎರಡಕ್ಕೆ ಸಂಬಂಧಿಸಿದ ಸಮುದಾಯಗಳಾದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಉಪಜಾತಿ ಪದಗಳನ್ನು ಮತ್ತೆ ಮಾದಿಗ ಮತ್ತು ಹೊಲೆಯ ಸಂಬಂಧಿತ ಜಾತಿಗಳ ಗುಂಪುಗಳಿಗೆ ಯಥಾವತ್ತಾಗಿ ಸೇರಿಸಬೇಕು.

2. ನಾಲ್ಕನೇ ಗುಂಪಿನಲ್ಲಿರುವ ಅಲೆಮಾರಿಗಳು ಮತ್ತು ಅರೆ ಅಲೆಮಾರಿಗಳ ಜೊತೆ ಯಾವುದೇ ಕಾರಣಕ್ಕೂ ಮಾದಿಗ, ಹೊಲೆಯ, ತ್ರಿಮತಸ್ಥ ಚರ್ಮಕಾರರು, ಮೊಗೇರ ಇನ್ನಿತರ ಸಮುದಾಯಗಳನ್ನು ಸೇರಿಸದೆ ಮೇಲೆ ತಿಳಿಸಿದ ಸಮುದಾಯಗಳನ್ನು ಅವರ ಮೂಲ ಸಮುದಾಯಗಳ ಗುಂಪಿಗೆ ಸೇರಿಸಬೇಕು.

3. ಈಗ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ತೆಗೆದುಕೊಂಡ ತೀರ್ಮಾನವನ್ನು ಹಾಗೂ ಅದರ ಶಿಫಾರಸ್ಸನ್ನು ಕೂಡಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಸಂವಿಧಾನದ ಅನುಚ್ಛೇಧ 341(3)ಗೆ ತಿದ್ದುಪಡಿ ಮಾಡಬೇಕು.

4. ತ್ರ‍್ರಿಮತಸ್ಥರಿಗೆ, ಚರ್ಮಕಾರರಿಗೆ (ಮೋಚಿ, ಡೋಹರ, ಸಮಗಾರ) ಅಭಿವೃದ್ಧಿ ನಿಗಮ ಸ್ಥಾಪಿಸಬೇಕು.

5. ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಗಳಲ್ಲಿ ಬಹುಸಂಖ್ಯಾತರಾಗಿರುವ ಮಾದಿಗ ಮತ್ತು ಛಲವಾದಿ ಸಮುದಾಯಗಳ ಜನಸಂಖ್ಯೆಗೆ ತಕ್ಕಂತೆ ತಲಾ 15 ಶಾಸನಸಭಾ ಪ್ರಾತಿನಿಧ್ಯ ಕಲ್ಪಿಸಬೇಕು.

6. ಕರ್ನಾಟಕ ರಾಜ್ಯದಲ್ಲಿರುವ 43,000 ಪೌರಕಾರ್ಮಿಕ ಹಾಗೂ ವಾಹನ ಚಾಲಕರನ್ನು ಖಾಯಂಗೊಳಿಸಬೇಕು.

7. ರಾಜ್ಯದಲ್ಲಿ ಪಿಟಿಸಿಎಲ್ ಕಾಯ್ದೆಗೆ ಕೂಡಲೇ ತಿದ್ದುಪಡಿ ತಂದು ದಲಿತರಿಗೆ ಭೂ ಹಂಚಿಕೆ ಮಾಡಬೇಕು.

8. ಒಳ ಮೀಸಲಾತಿ ಹೋರಾಟಗಾರರ ಮೇಲೆ ದಾಖಲಿಸಿರುವ ಅಪರಾಧ ಮೊದ್ದಮೆಗಳನ್ನು ಈ ಕೂಡಲೇ ರದ್ದುಪಡಿಸಬೇಕು.

9. ಪರಿಶಿಷ್ಟ ಜಾತಿಗಳ ಉಪ ಹಂಚಿಕೆ (ಎಸ್‌ಸಿಎಸ್‌ಎ) ಅನುದಾನವನ್ನು ಒಳಮೀಸಲಾತಿ ಶೇಕಡ 6+5.5+4.5+1 ಅನುಪಾತದಂತೆ ಹಂಚಿಕೆ ಮಾಡಬೇಕು. ಎಸ್‌ಸಿಎಸ್‌ಎ ಅನುದಾನ ದುರುಪಯೋಗಕ್ಕೆ ಕಾರಣವಾದ 7(ಡಿ) ಯನ್ನು ರದ್ದುಪಡಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...