Homeಮುಖಪುಟ'ಸ್ತನ ಹಿಡಿಯುವುದು ಅತ್ಯಾಚಾರವಲ್ಲ'; ಅಲಹಾಬಾದ್ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ

‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ಅಲಹಾಬಾದ್ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

“ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಅಲ್ಲ” ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ಬುಧವಾರ (ಮಾ.26) ತಡೆ ನೀಡಿದೆ.

ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾದ ಹೈಕೋರ್ಟ್‌ನ ಆದೇಶದ ವಿರುದ್ಧ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಸುಪ್ರೀಂ ಕೋರ್ಟ್ ಪೀಠ, ಹೈಕೋರ್ಟ್‌ನ ಅಭಿಪ್ರಾಯಕ್ಕೆ ತನ್ನ ಬಲವಾದ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದೆ. ಹೈಕೋರ್ಟ್‌ನ ಆದೇಶವು ‘ಆಘಾತಕಾರಿ’ ಎಂದು ಹೇಳಿದೆ.

“ಹೈಕೋರ್ಟ್‌ನಲ್ಲಿ ತೀರ್ಪಿನಲ್ಲಿ ಮಾಡಲಾದ ಕೆಲವೊಂದು ಅವಲೋಕನಗಳು, ವಿಶೇಷವಾಗಿ ಪ್ಯಾರಾ 21, 24 ಮತ್ತು 26 ರಲ್ಲಿ ಸೂಕ್ಷ್ಮತೆಯ ಕೊರತೆ ಕಂಡು ಬಂದಿದೆ ಎಂದು ಹೇಳಲು ನಮಗೆ ಬೇಸರವಾಗುತ್ತಿದೆ” ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

“ತೀರ್ಪನ್ನು ಆಕಸ್ಮಿಕವಾಗಿ ನೀಡಲಾಗಿಲ್ಲ, ಬದಲಿಗೆ ಸುಮಾರು ನಾಲ್ಕು ತಿಂಗಳು ಕಾಯ್ದಿರಿಸಿದ ನಂತರ ಪ್ರಕಟಿಸಲಾಗಿದೆ ಎಂಬುವುದನ್ನು ಗಮನಿಸಿದ ಪೀಠ, ಇದರರ್ಥ ನ್ಯಾಯಾಧೀಶರು ಸರಿಯಾದ ಪರಿಶೀಲನೆ ಮಾಡಿ ತಮ್ಮ ಮನಸ್ಸಿಗೆ ತೋಚಿದಂತೆ ತೀರ್ಪು ನೀಡಿದ್ದಾರೆ. ಈ ಅವಲೋಕನಗಳು ಕಾನೂನಿನ ತತ್ವಗಳಿಗೆ ಸಂಪೂರ್ಣವಾಗಿ ವಿರುದ್ದವಾಗಿದೆ ಮತ್ತು ಸಂವೇದನಾರಹಿತವಾಗಿದೆ” ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ, ಉತ್ತರ ಪ್ರದೇಶ ರಾಜ್ಯ ಸರ್ಕಾರ ಮತ್ತು ಇತರ ಪಕ್ಷಕಾರರಿಗೆ ನೋಟಿಸ್ ಜಾರಿ ಮಾಡಿದೆ. ಕೇಂದ್ರ ಸರ್ಕಾರದ ಪರ ಇಂದು ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೈಕೋರ್ಟ್‌ನ ತೀರ್ಪನ್ನು ಖಂಡಿಸಿದ್ದು, ಆಫಾತಕಾರಿ ಎಂದಿದ್ದಾರೆ.

‘ವಿ ದಿ ವುಮೆನ್ ಆಫ್ ಇಂಡಿಯಾ’ ಎಂಬ ಸರ್ಕಾರೇತರ ಸಂಸ್ಥೆಯ ಪರವಾಗಿ ಹಿರಿಯ ವಕೀಲೆ ಶೋಭಾ ಗುಪ್ತಾ ಅವರು ಕಳುಹಿಸಿದ ಪತ್ರದ ಆಧಾರದ ಸುಪ್ರೀಂ ಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದೆ.

ಮಾರ್ಚ್ 17ರಂದು ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರು “ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ. ಅದು ವಿವಸ್ತ್ರಗೊಳಿಸಿ ಹಲ್ಲೆ ನಡೆಸುವ ಅಪರಾಧ” ಎಂದು ಹೇಳಿದ್ದರು.

ಕೋಟಾ| ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಜನವರಿ ಬಳಿಕ ಒಂಬತ್ತನೇ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...