Homeಕರ್ನಾಟಕಗ್ರಾಮ ಪಂಚಾಯತ್‌ ಚುನಾವಣಾ ಫಲಿತಾಂಶ - ಯಾರಿಗೆ ಗೆಲುವು?

ಗ್ರಾಮ ಪಂಚಾಯತ್‌ ಚುನಾವಣಾ ಫಲಿತಾಂಶ – ಯಾರಿಗೆ ಗೆಲುವು?

- Advertisement -
- Advertisement -

ರಾಜ್ಯದಲ್ಲಿ ನಡೆದ ಎರಡು ಹಂತದ ಗ್ರಾಮ ಪಂಚಾಯತ್‌ ಚುನಾವಣೆಗಳ ಮತ ಎಣಿಕೆ ಇಂದು ರಾಜ್ಯ ವ್ಯಾಪಿ ನಡೆಯುತ್ತಿದ್ದು, ಭಾರಿ ಕುತೂಹಲ ಮೂಡಿಸಿದೆ. ರಾಜ್ಯದ 5,728 ಗ್ರಾಮ ಪಂಚಾಯತ್‌ಗಳಲ್ಲಿ ಒಟ್ಟು 91,339 ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದ್ದು, ಈ ಪೈಕಿ 8,074 ಸ್ಥಾನಗಳಿಗೆ ಅವಿರೋಧವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಒಟ್ಟು 2 ಲಕ್ಷಕ್ಕೂ ಹೆಚ್ಚಿನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮತ ಎಣಿಕೆ ಮುಂಜಾನೆ 8 ಗಂಟೆಗೆ ಪ್ರಾರಂಭವಾಗಿದ್ದು, ಸಂಜೆಯೊಳಗೆ ಮತದಾರರು ಯಾರನ್ನು ಆಯ್ಕೆ ಮಾಡಿದ್ದಾರೆ ಎಂಬುವುದು ತಿಳಿದು ಬರಲಿದೆ. 82,265 ಸ್ಥಾನಗಳಲ್ಲಿ 9 ಸಾವಿರ ಸ್ಥಾನಗಳ ಫಲಿತಾಂಶ ಈಗಾಗಲೇ ಹೊರಬಿದ್ದಿದೆ.

ಇದನ್ನೂ ಓದಿ:ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ಪ್ರತಿಯೊಂದು ಮತ ಎಣಿಕೆ ಕೇಂದ್ರದಲ್ಲೂ ಮತ ಎಣಿಕೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯತ್‌ನ ಮತ ಎಣಿಕೆಗೆ ಟೇಬಲ್‍ಗಳನ್ನು ನಿಗದಿಪಡಿಸಲಾಗಿದೆ. ಕೊರೋನ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದಲ್ಲೂ ನಿಯಮಗಳನ್ನು ಪಾಲಿಸಲಾಗುತ್ತಿದ್ದು, ಮತ ಎಣಿಕೆ ಕೇಂದ್ರದ ಬಳಿ ಜನ ಗುಂಪುಗೂಡದಂತೆ, ಎಚ್ಚರಿಕೆ ವಹಿಸಲಾಗಿದೆ. ಗೆದ್ದ ಅಭ್ಯರ್ಥಿಯ ವಿಜಯೋತ್ಸವ ಆಚರಣೆಗೂ ನಿರ್ಬಂಧ ಹೇರಲಾಗಿದೆ.

ರಾಜ್ಯದಲ್ಲಿ ಎರಡು ಹಂತದ ಚುನಾವಣೆ ನಡೆದಿದ್ದು, ಮೊದಲ ಹಂತದ ಚುನಾವಣೆ ಡಿಸೆಂಬರ್‌ 22 ರಂದು ನಡೆದಿತ್ತು. ಎರಡನೇ ಹಂತದ ಚುನಾವಣೆ ಡಿಸೆಂಬರ್‌ 27 ರಂದು ನಡೆದಿತ್ತು. ಮೊದಲ ಹಂತದ ಚುನಾವಣೆಯಲ್ಲಿ 82.04% ಮತದಾನವಾಗಿದ್ದರೆ, ಎರಡನೇ ಹಂತದ ಚುನಾವಣೆಯಲ್ಲಿ 80.71% ರಷ್ಟು ಮತದಾನ ಆಗಿತ್ತು.

ಇದನ್ನೂ ಓದಿ: ಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ

0
ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯ್ಕೆ ಅಸಿಂಧುಗೊಳಿ, ಮರು ಚುನಾವಣೆ ನಡೆಸಲು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಸಕಾರಣವಿಲ್ಲದೆ ತನ್ನ ನಾಮಪತ್ರ...