Homeಕರ್ನಾಟಕಗ್ರಾಮ ಪಂಚಾಯತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಿ - ಸಚಿವ ಪ್ರಿಯಾಂಕ್‌ ಖರ್ಗೆ...

ಗ್ರಾಮ ಪಂಚಾಯತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಿ – ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

- Advertisement -
- Advertisement -

ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆಯು ಇ-ಸ್ವತ್ತು ಕಡ್ಡಾಯಗೊಳಿಸಿರುವುದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಿ, ಆಸ್ತಿ ತೆರಿಗೆ ಸಂಗ್ರಹ ಅಭಿಯಾನವನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ (Minister Priyank Kharge) ಸೋಮವಾರ ಸೂಚಿಸಿದ್ದಾರೆ. ಗ್ರಾ ಮ ಪಂಚಾಯತಿ ವ್ಯಾಪ್ತಿಯ Gram Panchayat e-property

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್‌ ರಾಜ್‌) ಉಮಾ ಮಹದೇವನ್‌ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಖರ್ಗೆ, ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ನೀಡದಿರಲು ಸೂಚಿಸಿದರಲ್ಲದೆ, ಹೊಸ ಬಡಾವಣೆಗಳ ನಿರ್ಮಾಣವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಖಾತಾ ಇಲ್ಲದ ಬಹಳಷ್ಟು ಆಸ್ತಿಗಳ ಸಂಬಂಧ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಹಾಗೂ ಮನೆಗಳನ್ನು ನೋಂದಣಿ ಮಾಡುವ ಬಗ್ಗೆ ವರದಿಗಳು ಬರುತ್ತಿದ್ದು, ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು ಎಂದು ಅವರು ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಇಂತಹ ಪ್ರಕರಣಗಳನ್ನು ತಡೆಯಬೇಕೆಂದು ಅವರು ನಿರ್ದೇಶನ ನೀಡಿದ್ದಾರೆ.

ಮುಖ್ಯಮಂತ್ರಿ ಇ-ಸ್ವತ್ತು ವಿತರಣೆಗೆ ಸಂಬಂಧಿಸಿದಂತೆ ದಿನಾಂಕ 06.01.2025ರಂದು ನೋಂದಣಿ ಮತ್ತು ಮುದ್ರಾಂಕ ವಿಷಯಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಪೌರಾಡಳಿತ ಇಲಾಖೆಗಳ ಸಭೆ ನಡೆಸಿದ್ದರು. ಈ ವೇಳೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸುಮಾರು 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿಯಾನದ ರೂಪದಲ್ಲಿ ನಿಯಮಬದ್ಧವಾದ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವ ಮೂಲಕ ತೆರಿಗೆ ಸಂಗ್ರಹವನ್ನು ಮಾಡುವಂತೆ ಅವರು ಸೂಚಿಸಿದ್ದರು. ಗ್ರಾಮ ಪಂಚಾಯತಿ ವ್ಯಾಪ್ತಿಯ

ಮುಖ್ಯಮಂತ್ರಿಯ ಸೂಚನೆಗಳನ್ನು ಅನುಷ್ಟಾನಗೊಳಿಸುವಂತೆ ಹಾಗೂ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಮತ್ತು ಆಸ್ತಿ ತೆರಿಗೆ ಸಂಗ್ರಹಣೆ ಅಭಿಯಾನ ನಡೆಸಲು ಎಲ್ಲಾ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಿಗೆ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಇದನ್ನೂಓದಿ:  ಅವಧಿ ಮೀರಿದ ಔಷಧ ಬಳಕೆ – 1 ಸಾವು; ಮೂವರು ಬಾಣಂತಿಯರು ಗಂಭೀರ

ಅವಧಿ ಮೀರಿದ ಔಷಧ ಬಳಕೆ – 1 ಸಾವು; ಮೂವರು ಬಾಣಂತಿಯರು ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...