Homeಮುಖಪುಟವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP...

ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಇತ್ತೀಚಿಗಷ್ಟೇ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಂದ ಶಿಕ್ಷಣ ಕಿತ್ತುಕೊಂಡು ಪೂರ್ವಾಶ್ರಮಕ್ಕೆ ಕರೆದೊಯ್ಯುವ ಹುನ್ನಾರವಿದು - ಡಾ.ವಿ.ಪಿ ನಿರಂಜನಾರಾಧ್ಯ

- Advertisement -
- Advertisement -

ರಾಜ್ಯದ ಹಲವಾರು ಶಾಲೆಗಳಲ್ಲಿನ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯ್ತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ. ಅದಕ್ಕಾಗಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಗಳಲ್ಲಿನ SCSP TSP ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 5 ರಿಂದ 8ನೇ ತರಗತಿವರೆಗಿನ 25 ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಿತ ವೇದಗಣಿತ ತರಬೇತಿ ನೀಡುವ ಜವಾಬ್ದಾರಿಯನ್ನು ಹಿರಿಯೂರಿನ ಎ.ವಿ.ಎಂ ಅಕಾಡೆಮಿಗೆ ವಹಿಸಲಾಗಿದೆ. ಆ ಸಂಸ್ಥೆಯು ಸರ್ಕಾರಿ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದು, ಅವರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ.

ಇನ್ನು ಶಿಕ್ಷಕರಿಗೆ ತರಬೇತಿ, ಕಲಿಕಾ ಕಿಟ್ ಮತ್ತು ಸಮವಸ್ತ್ರ ನೀಡುವ ಸರ್ಕಾರೇತರ ಸಂಸ್ಥೆಗೆ ಪ್ರತಿ ಗ್ರಾಮ ಪಂಚಾಯ್ತಿಗಳು ಸಹ ತಲಾ ಒಂದೊಂದು ಲಕ್ಷ ಹಣ ನೀಡುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

“ಎಲ್ಲೆಲ್ಲಿ ಸರ್ಕಾರದ ಹಣವಿದೆಯೊ ಅದನ್ನು ತಮ್ಮನ್ನು ಬೆಂಬಲಿಸುವ ಅಗಸ್ತ್ಯ ಫೌಂಡೇಶನ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಥರಹದ ಸರ್ಕಾರೇತರ ಸಂಘಟನೆಗಳಿಗೆ, ಅದರಲ್ಲಿಯೂ ಬ್ರಾಹ್ಮಣ ಒಡೆತನದ ಸಂಸ್ಥೆಗಳಿಗೆ ಸುರಿಯಲಾಗುತ್ತಿದೆ. ಅದರ ಭಾಗವಾಗಿ ಎ.ವಿ.ಎಂ ಸಂಸ್ಥೆಗೂ ಅನಗತ್ಯವಾಗಿ ಹಣ ವ್ಯಯಿಸಲಾಗುತ್ತಿದೆ” ಎಂದು ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರು ಕಿಡಿಕಾರಿದ್ದಾರೆ.

ನಮ್ಮ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಮೇಲೆ ಮಾಟ, ಮಂತ್ರ, ಮ್ಯಾಜಿಕ್‌ನಂತಹ ಪಾಠಗಳನ್ನು ಹೇರುವುದು ಏಕೆ? ಇದರಿಂದ ಮಕ್ಕಳಿಗೆ ಬಹಳ ಗೊಂದಲವಾಗುತ್ತದೆ. ಆ ಗಣಿತ ಕಲಿಯಬೇಕಾ, ಈ ಗಣಿತ ಕಲಿಯಬೇಕಾ ಎಂದು ತಳಮಳಗೊಳ್ಳುತ್ತಾರೆ. ಈ ವೇದಗಣಿತ ಕಲಿಸುವ ಪ್ರಯೋಗಕ್ಕೆ ನಮ್ಮ ಸರ್ಕಾರಿ ಶಾಲಾ ಮಕ್ಕಳನ್ನೆ ಏಕೆ ಬಲಿಪಶು ಮಾಡಲಾಗುತ್ತಿದೆ? ಈ ಪ್ರಯೋಗಳನ್ನು ಅವರದೇ ಸಂಸ್ಥೆಗಳಿವೆಯಲ್ಲ ಅಲ್ಲಿ ಬೇಕಾದರೆ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನರ ಹಣವನ್ನು ಸರ್ಕಾರೇತರ ಸಂಘಟನೆಗಳಿಗೆ ಕೊಡುವುದು ಅಕ್ಷಮ್ಯ ಅಪರಾಧ. ಇವರ ಸಿದ್ಧಾಂತಗಳನ್ನು ಹೇರಲು ಸರ್ಕಾರಿ ಶಾಲೆಗಳನ್ನೆ ಆಯ್ಕೆ ಮಾಡಿಕೊಳ್ಳುವುದು ತಪ್ಪಬೇಕು. ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣದ ಗುಣಮಟ್ಟಕ್ಕೆ ಕತ್ತರಿಯಾಡಿಸಲಾಯಿತು. ಆದರೆ ಐಸಿಎಸ್‌ಸಿ, ಸಿಬಿಎಸ್‌ಸಿ ಹೆಸರಿನಲ್ಲಿ ಖಾಸಗಿ ಶಾಲೆಗಳ ಮಕ್ಕಳಿಗೆ ಯಾವುದೇ ತೊಂದರೆಯಾಗುತ್ತಿಲ್ಲ. ಈಗ ಮತ್ತೊಂದು ಪ್ರಯೋಗ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದು ನಿರಂಜನಾರಾಧ್ಯರು ಅಭಿಪ್ರಾಯಪಟ್ಟಿದ್ದಾರೆ.

ಈ ವೇದಗಣಿತದಿಂದ ಯಾವುದೇ ಪ್ರಯೋಜನವಾಗುವುದಿಲ್ಲವೆಂದು ಈ ಹಿಂದೆಯೇ ಹಲವಾರು ಗಣಿತಜ್ಞರು ವಾದಿಸಿದ್ದಾರೆ. ಅದು ವೈಜ್ಞಾನಿಕವೂ ಅಲ್ಲ, ಆಧುನಿಕ ಶಿಕ್ಷಣಕ್ಕೆ ಹೊಂದಿಕೊಳ್ಳುವುದು ಇಲ್ಲ. ನಮ್ಮಲ್ಲಿ ರಾಷ್ಟ್ರೀಯ ಪಠ್ಯಕ್ರವ ಚೌಕಟ್ಟಿಗೆ ಅನುಗುಣವಾಗಿ ಗಣಿತ ಕಲಿಸುವ ಒಂದು ವಿಧಾನವಿದೆ. ಇಂತ ಸಂದರ್ಭದಲ್ಲಿ ರಾಷ್ಟ್ರೀಯ ಪಠ್ಯಕ್ರವ ಚೌಕಟ್ಟಿನಲ್ಲಿ ಇಲ್ಲದ ವಿಷಯವನ್ನು ಏಕೆ ಕಲಿಸುತ್ತಿದ್ದಾರೆ? ಇದುವರೆಗೂ ಒಂದು ವಿಧಾನದಲ್ಲಿ ಗಣಿತ ಪಾಠ ಕಲಿತಿದ್ದ ಮಕ್ಕಳಿಗೆ ಏಕಾಏಕಿ ಈ ವಿಧಾನ ಹೇಳಿಕೊಟ್ಟರೆ ಆ ಚಿಕ್ಕ ಮಕ್ಕಳು ಎಷ್ಟರ ಮಟ್ಟಿಗೆ ಗಲಿಬಿಲಿಗೊಳ್ಳುತ್ತಾರೆ ಎಂಬ ಅರಿವು ಸರ್ಕಾರಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ

ಒಂದು ವೇಳೆ ಸರ್ಕಾರ ಯಾವುದೇ ಹೊಸ ಕಲಿಕೆ ಅಥವಾ ಕಾರ್ಯಕ್ರಮವನ್ನು ಆರಂಭಿಸಿದರೆ ಅದನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಪ್ರಾರಂಭಿಸಬೇಕಲ್ಲವೇ? ಏಕೆ ಕೇವಲ ಪರಿಶಿಷ್ಟ ಜಾತಿಯ ಮಕ್ಕಳನ್ನು ಆಯ್ಕೆ ಮಾಡಿ ಕಲಿಸಲಾಗುತ್ತಿದೆ? ಈ ಮಕ್ಕಳು ತೀರಾ ಇತ್ತೀಚಿಗಷ್ಟೇ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕ ಶಿಕ್ಷಣ ಕಲಿಯುತ್ತಿದ್ದಾರೆ. ಇದರ ಹಿಂದೆ ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆ, ಅಂಬೇಡ್ಕರ್‌ರಂತಹ ಹಲವಾರು ಮಹನೀಯರ ಹೋರಾಟದ ಇತಿಹಾಸವಿದೆ. ಇಂತಹ ಸಂದರ್ಭದಲ್ಲಿ ಆ ಮಕ್ಕಳಿಂದ ಆಧುನಿಕ ಶಿಕ್ಷಣವನ್ನು ಕಿತ್ತುಕೊಂಡು ಪೂರ್ವಾಶ್ರಮಕ್ಕೆ ಕರೆದುಕೊಂಡು ಹೋಗುವು ಹುನ್ನಾರವನ್ನು ಪ್ರಜ್ಞಾವಂತರೆಲ್ಲರೂ ಬಲವಾಗಿ ವಿರೋಧಿಸಬೇಕು ಎಂದರು.

ವೇದಗಣಿತ ವೈಜ್ಞಾನಿಕವಾದುದು, ಉತ್ತಮವಾದುದು ಅಂದರೆ ಇಷ್ಟು ವರ್ಷ ಏಕೆ ಬೋಧಿಸಲಿಲ್ಲ? ನಮ್ಮದೇ ಆದ ಶಿಕ್ಷಣ ವ್ಯವಸ್ಥೆ ಕಟ್ಟಿಕೊಂಡು 75 ವರ್ಷ ಆದರೂ ಏಕೆ ಅದನ್ನು ಅಳವಡಿಸಲಿಲ್ಲ? ಈ ಹಿಂದಿನ ಶಿಕ್ಷಣ ಸಚಿವರಿಗೆ ಬುದ್ಧಿ ಇರಲಿಲ್ಲವೇ? ಆಗ ಏಕೆ ಕಲಿಸಲಿಲ್ಲವೆಂದರೆ ಅದು ನಿಷ್ಪ್ರಯೋಜಕವಾದುದು ಎಂಬುದು ಅವರಿಗೆ ಗೊತ್ತಿತ್ತು. ಅದನ್ನು ಕಲಿತರೆ ನಾವು ಹಿಂದಕ್ಕೆ ಹೋಗುತ್ತೇವೆ ಎಂಬ ಅರಿವಿತ್ತು. ಹಾಗಾಗಿ ಆಧುನಿಕ ಶಿಕ್ಷಣ ಬೇಕು ಎಂದು ಹೋರಾಟ ನಡೆಸಿದರು. ಅದರ ಮೇಲೆ ಒಂದು ಶಿಕ್ಷಣ ವ್ಯವಸ್ಥೆ ಕಟ್ಟಿಕೊಂಡಿದ್ದೇವೆ. ಆ ವ್ಯವಸ್ಥೆಯ ಹಳಿ ತಪ್ಪಿಸಿ ಮತ್ತೆ ಸನಾತನಾವಾದದೆಡೆ ಕರೆದುಕೊಂಡು ಹೋಗುವುದನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು ಎಂದರು.

ಇಂದು ಹಲವಾರು ಶಾಲೆಗಳು ಶಿಕ್ಷಕರ ಕೊರತೆ ಎದುರಿಸುತ್ತಿವೆ. ಇಂದು ಸರ್ಕಾರೇತರ ಸಂಸ್ಥೆಗಳಿಗೆ ಸುರಿಯುತ್ತಿರುವ ಅದೇ ಹಣದಲ್ಲಿ ಸಮುದಾಯ ಕಲಿಕಾ ಕೇಂದ್ರಗಳಿಗೆ, ಮಕ್ಕಳಿಗೆ ಕಷ್ಟವಾದ ವಿಷಯಗಳನ್ನು ಕಲಿಸುವುದಕ್ಕೆ, ಹೊಸ ಶಿಕ್ಷಕರ ನೇಮಕಾತಿಗೆ ಬಳಸಬಹುದಿತ್ತಲ್ಲವೇ? ಎಂದು ನಿರಂಜನಾರಾಧ್ಯರು ಪ್ರಶ್ನಿಸಿದರು.

ನಮ್ಮ ಸಂವಿಧಾನದಲ್ಲಿ ವೈಜ್ಞಾನಿಕ ಮನೋಭಾವವನ್ನು ಬಿತ್ತುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ವಿಧಿಸಲಾಗಿದೆ. ಇಂತಹ ಸಂವಿಧಾನವನ್ನು ಉಲ್ಲಂಘಿಸಿ ಅವೈಜ್ಞಾನಿಕವಾಗಿ ಪಾಠ ಬೋಧಿಸುತ್ತಿರುವ, ಮೌಢ್ಯ ಬಿತ್ತುತ್ತಿರುವ ಸಂಸ್ಥೆಗಳ ಮುಖ್ಯಸ್ಥರನ್ನು ಬಂಧಿಸಬೇಕು. ಅವರಿಗೆ ಸರ್ಕಾರ ನೀಡಿರುವ ಅನುದಾನವನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ನಿರಂಜನಾರಾಧ್ಯರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ದಲಿತರಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆ ಆರೋಪ: ಮಕ್ಕಳಿಗೆ ವೇದಗಣಿತ ಕಲಿಸುವುದಕ್ಕೆ ತಜ್ಞರು, ಹೋರಾಟಗಾರರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು ವೈಜ್ಞಾನಿಕ ನಡೆ ಅಲ್ಲ…….ಮಕ್ಕಳಿಗೆ ಎಳೆ ವಯಸ್ಸಿನಲ್ಲಿ ಸಂಸ್ಕಾರಯುಕ್ತ ಬದುಕು ನಡೆಸುವ ಉತ್ತಮ ವಿದ್ಯಾಭ್ಯಾಸ ನೀಡುವುದೇ ಆದರೆ ಮುಂದೆ ಸತ್ಯವಂತರಾಗುತ್ತಾರೆ ಭ್ರಷ್ಟಾಚಾರ ನಿರ್ಮೂಲನೆ ಯಾಗುವುದರಲ್ಲಿ ಸಂದೇಹವೇ ಇಲ್ಲ

  2. ಇದು ವೈಜ್ಞಾನಿಕ ನಡೆ ಅಲ್ಲ…….ಮಕ್ಕಳಿಗೆ ಎಳೆ ವಯಸ್ಸಿನಲ್ಲಿ ಸಂಸ್ಕಾರಯುಕ್ತ ಬದುಕು ನಡೆಸುವ ಉತ್ತಮ ವಿದ್ಯಾಭ್ಯಾಸ ನೀಡುವುದೇ ಆದರೆ ಮುಂದೆ ಸತ್ಯವಂತರಾಗುತ್ತಾರೆ ಭ್ರಷ್ಟಾಚಾರ ನಿರ್ಮೂಲನೆ ಯಾಗುವುದರಲ್ಲಿ ಸಂದೇಹವೇ ಇಲ್ಲ ವೇದಗಣಿತ ಸೋಮಾರಿತನಕ್ಕೆ ನಾಂದಿ

LEAVE A REPLY

Please enter your comment!
Please enter your name here

- Advertisment -

ಅಕ್ಷರಧಾಮ ದೇವಾಲಯ ದಾಳಿ ಪ್ರಕರಣ: 6 ವರ್ಷಗಳ ನಂತರ ಮೂವರ ಮುಸ್ಲಿಂ ವ್ಯಕ್ತಿಗಳನ್ನು ಖುಲಾಸೆಗೊಳಿಸಿದ ಅಹಮದಾಬಾದ್ ಪೋಟಾ ನ್ಯಾಯಾಲಯ

ಅಕ್ಷರಧಾಮ ದೇವಾಲಯದ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಮೂವರು ಮುಸ್ಲಿಂ ಪುರುಷರನ್ನು ಕಳೆದ ವಾರ ಅಹಮದಾಬಾದ್‌ನ ವಿಶೇಷ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ) ನ್ಯಾಯಾಲಯವು ಖುಲಾಸೆಗೊಳಿಸಿದ್ದು, ವರ್ಷಗಳ ಕಾನೂನು ಪ್ರಕ್ರಿಯೆಗಳ ನಂತರ...

ಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ (ಡಿಜಿ-ಐಜಿಪಿ) ಎಂ.ಎ ಸಲೀಂ ಅವರ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ದ ಬೆಂಗಳೂರಿನ ಸೈಬರ್ ಅಪರಾಧ ಪೊಲೀಸರು...

ಭಾರತ-ಯುರೋಪ್ ಒಕ್ಕೂಟ ವ್ಯಾಪಾರ ಒಪ್ಪಂದ: ಬಿಎಂಡಬ್ಲ್ಯು, ವೋಕ್ಸ್‌ವ್ಯಾಗನ್, ಮರ್ಸಿಡಿಸ್ ಬೆಂಜ್ ಮೇಲಿನ ಸುಂಕ ಶೇ. 110 ರಿಂದ ಶೇ. 40ಕ್ಕೆ ಇಳಿಕೆಯಾಗುವ ಸಾಧ್ಯತೆ

ಯುರೋಪಿಯನ್ ಒಕ್ಕೂಟದಿಂದ ಆಮದು ಮಾಡಿಕೊಳ್ಳುವ ಕಾರುಗಳ ಮೇಲಿನ ಸುಂಕವನ್ನು ಪ್ರಸ್ತುತ ಶೇ. 110 ರಿಂದ ಶೇ. 40 ಕ್ಕೆ ಇಳಿಸಲು ಭಾರತ ಯೋಜಿಸಿದೆ, ಇದು ದೇಶದ ವಿಶಾಲ ಮಾರುಕಟ್ಟೆಯಲ್ಲಿ ಇದುವರೆಗಿನ ಅತಿದೊಡ್ಡ ಆರಂಭವಾಗಿದೆ,...

ಗಣರಾಜ್ಯೋತ್ಸವ : ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್

ಸಂವಿಧಾನವು ತನ್ನ ಮೊದಲ ಅನುಚ್ಛೇದದಲ್ಲಿಯೇ ಭಾರತವನ್ನು ಒಂದು ರಾಜ್ಯಗಳ ಒಕ್ಕೂಟ ಎಂದು ಘೋಷಿಸುತ್ತದೆ. ಸಶಕ್ತ ರಾಜ್ಯಗಳ ಮೂಲಕ ಸಶಕ್ತ ಭಾರತ ನಿರ್ಮಿಸುವುದು ನಮ್ಮ ಸಂವಿಧಾನದ ನಿರ್ಮಾತೃಗಳ ಕನಸಾಗಿತ್ತು. ಆ ಕನಸಿಗೆ ಕುಂದುಂಟಾಗದಂತೆ ನಮ್ಮ...

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್...

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರನ್ನು, ಇಂದು (ಜ.25) ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 'ಮಹಾಘಟಬಂಧನ್' 36...

ಹಿಂದುತ್ವ ಗುಂಪಿನಿಂದ ಕಿರುಕುಳ : ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದ ಜೋಡಿ

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹಿಂದುತ್ವ ಗುಂಪು ಕಿರುಕುಳ ನೀಡಿದ್ದರಿಂದ ಜೋಡಿಯೊಂದು ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದಿದ್ದು, ಈ ಸಂಬಂಧ ಎಂಟು ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದಿ ನ್ಯೂ...

ಹಿಂದಿ ಚಿತ್ರಗಳು ತಮ್ಮ ಬೇರುಗಳನ್ನು ಕಳೆದುಕೊಂಡಿವೆ, ಹಣ ಆಧಾರಿತವಾಗಿವೆ: ಪ್ರಕಾಶ್ ರಾಜ್

ದೃಢ, ವಿಷಯಾಧಾರಿತ ಕಥೆ ನಿರೂಪಣೆಯಿಂದ ಪ್ರಶಂಸಿಸಲಾದ ಮಲಯಾಳಂ ಮತ್ತು ತಮಿಳು ಸಿನಿಮಾಗಳಿಗಿಂತ ಭಿನ್ನವಾಗಿ, ಹಿಂದಿ ಸಿನಿಮಾ ತನ್ನ ಬೇರುಗಳನ್ನು ಕಳೆದುಕೊಂಡಿದೆ. ಹೆಚ್ಚು ಹೆಚ್ಚು ನಕಲಿ ಮತ್ತು ಹಣ-ಆಧಾರಿತವಾಗುತ್ತಿದೆ ಎಂದು ನಟ ಪ್ರಕಾಶ್ ರಾಜ್...

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ...