Homeಮುಖಪುಟ"ಸಾವರ್ಕರ್‌ ಜೊತೆ ಸುಭಾಷ್‌ ಚಂದ್ರ ಬೋಸ್‌ಗೆ ಸಂಬಂಧ ಕಲ್ಪಿಸಬೇಡಿ": ಸಿನಿಮಾ ಟ್ರೇಲರ್‌ಗೆ ಆಕ್ಷೇಪ ಎತ್ತಿದ ನೇತಾಜಿ...

“ಸಾವರ್ಕರ್‌ ಜೊತೆ ಸುಭಾಷ್‌ ಚಂದ್ರ ಬೋಸ್‌ಗೆ ಸಂಬಂಧ ಕಲ್ಪಿಸಬೇಡಿ”: ಸಿನಿಮಾ ಟ್ರೇಲರ್‌ಗೆ ಆಕ್ಷೇಪ ಎತ್ತಿದ ನೇತಾಜಿ ಮೊಮ್ಮಗ

- Advertisement -
- Advertisement -

ಸ್ವಾತಂತ್ರ್ಯ ಹೋರಾಟ ಸಂದರ್ಭದ ವಿವಾದಾತ್ಮಕ ಮುಖಂಡ ಹಾಗೂ ಬಲಪಂಥೀಯ ನಾಯಕ ಸಾವರ್ಕರ್ ಬಗೆಗಿನ ಹಿಂದಿ ಸಿನಿಮಾ ತಯಾರಾಗಿದ್ದು, ಮಾರ್ಚ್‌ 22ರಂದು ಬಿಡುಗಡೆಯಾಗಲಿದೆ.

‘ಸ್ವಾತಂತ್ರ್ಯ ವೀರ ಸಾವರ್ಕರ್’ ಎಂಬ ಶೀರ್ಷಿಕೆಯ ಈ ಸಿನಿಮಾವನ್ನು ಬಾಲಿವುಡ್ ನಟ ರಣದೀಪ್ ಹೂಡಾ ನಿರ್ದೇಶನ ಮಾಡಿದ್ದು, ಅವರೇ ಸಾವರ್ಕರ್ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಟ್ರೇಲರ್ ಮಂಗಳವಾರ (ಮಾ.5) ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

ಟ್ರೇಲರ್ ಬಿಡುಗಡೆಯ ಬೆನ್ನಲ್ಲೇ ಆಕ್ಷೇಪ ಎತ್ತಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್, “ಸಾವರ್ಕರ್‌ರೊಂದಿಗೆ ಸುಭಾಷ್ ಚಂದ್ರ ಬೋಸ್‌ನವರಿಗೆ ಸಂಬಂಧ ಕಲ್ಪಿಸಬೇಡಿ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮಂಗಳವಾರ ಸಂಜೆ ಎಕ್ಸ್‌ ಪೋಸ್ಟ್ ಹಾಕಿರುವ ನೇತಾಜಿ ಮೊಮ್ಮಗ, “ನೀವು ಸಾವರ್ಕರ್ ಕುರಿತು ಚಲನಚಿತ್ರವನ್ನು ಮಾಡುತ್ತಿರುವುದನ್ನು ನಾನು ಪ್ರಶಂಸಿಸುವೆ. ಆದರೆ, ನಿಜವಾದ ವ್ಯಕ್ತಿತ್ವವನ್ನು ಪ್ರದರ್ಶಿಸುವುದು ಮುಖ್ಯ” ಎಂದಿದ್ದಾರೆ.

“ದಯವಿಟ್ಟು ಸಾವರ್ಕರ್ ಜೊತೆಗೆ ‘ನೇತಾಜಿ ಸುಭಾಷ್ ಚಂದ್ರ ಬೋಸ್’ ಅವರ ಹೆಸರನ್ನು ಲಿಂಕ್ ಮಾಡಬೇಡಿ. ನೇತಾಜಿ ಅಪ್ಪಟ ಜಾತ್ಯತೀತ ನಾಯಕ ಮತ್ತು ದೇಶ ದೇಶಭಕ್ತರಾಗಿದ್ದರು” ಎಂದು ಟ್ರೇಲರ್‌ನಲ್ಲಿ ನೇತಾಜಿ ಸುಭಾಷ್‌ ಚಂದ್ರ ಬೋಸ್ ಪಾತ್ರಧಾರಿಯು ಸಾವರ್ಕರ್ ಪಾತ್ರಧಾರಿಯಾದ ರಣದೀಪ್‌ ಹೂಡಾ ಅವರನ್ನು ಅಪ್ಪಿಕೊಳ್ಳುವ ದೃಶ್ಯಕ್ಕೆ ಚಂದ್ರ ಕುಮಾರ್ ಬೋಸ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನೇತಾಜಿ ಮೊಮ್ಮಗ ಚಂದ್ರ ಕುಮಾರ್ ಬೋಸ್ ಅವರು 2016ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಬಳಿಕ 2016ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮತ್ತು ನಂತರ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದರು. ಆ ಬಳಿಕ 2023ರ ಸೆಪ್ಟೆಂಬರ್‌ನಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಹೊರ ಬಂದಿದ್ದರು.

“ನಾನು ಬಿಜೆಪಿಗೆ ಸೇರಿದಾಗ ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಶರತ್ ಚಂದ್ರ ಬೋಸ್ ಅವರ ಸಿದ್ಧಾಂತವನ್ನು ಪ್ರಚಾರ ಮಾಡಲು ನನಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆದರೆ ಅದ್ಯಾವುದಕ್ಕೂ ಅವಕಾಶವೇ ನೀಡಿರಲಿಲ್ಲ” ಎಂದು ಚಂದ್ರ ಕುಮಾರ್ ಬೋಸ್ ರಾಜೀನಾಮೆ ವೇಳೆ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಶಹಜಹಾನ್ ಶೇಖ್‌ನ್ನು ಸಿಬಿಐಗೆ ಒಪ್ಪಿಸಲು ನಕಾರ: ಸುಪ್ರೀಂ ಮೊರೆ ಹೋದ ಪಶ್ಚಿಮ ಬಂಗಾಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...