Homeಕರ್ನಾಟಕತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

- Advertisement -
- Advertisement -

“ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು ಘೋಷಿಸಬೇಕು” ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕನ್ನಡದ ಸೋದರ ನುಡಿಯಾದ ತುಳು ನುಡಿಯ ಉಳಿವು, ಬೆಳವಣಿಗೆ ಮತ್ತು ಗೌರವಕ್ಕಾಗಿ ತುಳುವರು ಅನೇಕ ವರ್ಷಗಳಿಂದ ಮಂಡಿಸುತ್ತಿರುವ ಹಕ್ಕೊತ್ತಾಯವನ್ನು ಕರ್ನಾಟಕ ರಕ್ಷಣಾ ವೇದಿಕೆ ಸಂಪೂರ್ಣವಾಗಿ ಬೆಂಬಲಿಸುತ್ತದೆ” ಎಂದು ಹೇಳಿದ್ದಾರೆ.

“ಸಾವಿರಾರು ವರ್ಷಗಳಿಂದ ಕನ್ನಡ ಮತ್ತು ತುಳು ನುಡಿಗಳು ಕರಾವಳಿ ಕರ್ನಾಟಕದ ನೆಲದಲ್ಲಿ ಜೊತೆಯಾಗಿ ಬೆಳೆದಿವೆ. ಎರಡೂ ನುಡಿಗಳ ನಡುವೆ ಇರುವ ಸಾಂಸ್ಕೃತಿಕ, ಸಾಹಿತ್ಯಿಕ ಮತ್ತು ಸಾಮಾಜಿಕ ಸಂಬಂಧ ಅತ್ಯಂತ ಗಾಢವಾದದ್ದು. ಕನ್ನಡ ಸಂಸ್ಕೃತಿ, ಸಾಹಿತ್ಯ ಮತ್ತು ಪರಂಪರೆಗೆ ತುಳುವರ ಕೊಡುಗೆ ಅಪಾರ. ಕರಾವಳಿ ಕರ್ನಾಟಕದ ಜನಜೀವನದಲ್ಲಿ ತುಳು ನುಡಿ ಆಳವಾಗಿ ಬೇರೂರಿದೆ. ತುಳು ಕೇವಲ ಸಂವಹನದ ನುಡಿಯಲ್ಲ. ಅದು ಆ ಭಾಗದ ಜನರ ಬದುಕು, ಸಂಸ್ಕೃತಿ, ಜನಪದ, ಕಲೆ, ಸಾಹಿತ್ಯ, ಆಚರಣೆ, ನಂಬಿಕೆ ಮತ್ತು ಇತಿಹಾಸದ ಜೀವಂತ ಅಭಿವ್ಯಕ್ತಿಯಾಗಿ ಬೆಳೆದು ನಿಂತಿದೆ. ಯಕ್ಷಗಾನ, ದೈವಾರಾಧನೆ ಸೇರಿದಂತೆ ಕರಾವಳಿಯ ಅನೇಕ ಕಲಾ ಪರಂಪರೆಗಳೊಂದಿಗೆ ತುಳು ನುಡಿಯ ಸಂಬಂಧವಿದೆ. ಹೀಗಾಗಿ ತುಳು ನುಡಿಯನ್ನು ಉಳಿಸುವುದು ಮತ್ತು ಬೆಳೆಸುವುದೆಂದರೆ, ಅದರೊಂದಿಗೆ ಬೆಸೆದುಕೊಂಡಿರುವ ಅಪಾರ ಸಾಂಸ್ಕೃತಿಕ ಪರಂಪರೆಯ ಉಳಿಸುವುದೂ ಆಗಿದೆ” ಎಂದು ನಾರಾಯಣಗೌಡ ವಾದಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ಕುರಿತು ಕರ್ನಾಟಕ ಸರ್ಕಾರ ಸ್ಪಷ್ಟ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ. ಜನರು ತಮ್ಮ ತಾಯಿನುಡಿಯಲ್ಲಿ ಸರ್ಕಾರಿ ಸೇವೆಗಳನ್ನು ಪಡೆಯಲು ಇಂತಹ ಮಾನ್ಯತೆ ಸಹಕಾರಿಯಾಗಬಹುದು. ಅಷ್ಟೇ ಅಲ್ಲ, ತುಳು ನುಡಿಗೆ ಸಂವಿಧಾನದ 8ನೇ ಅನುಸೂಚಿಯಲ್ಲಿ ಸ್ಥಾನ ನೀಡಬೇಕೆಂದು ಒಕ್ಕೂಟ ಸರ್ಕಾರವನ್ನು ಆಗ್ರಹಿಸುತ್ತೇನೆ. ಇದು ನಮ್ಮ ಹೊಸ ಬೇಡಿಕೆಯೇನಲ್ಲ. ಕರವೇ ಮೊದಲಿನಿಂದಲೂ ಈ ಹಕ್ಕೊತ್ತಾಯವನ್ನು ಬೆಂಬಲಿಸುತ್ತಾ ಬಂದಿದೆ” ಎಂದು ಅವರು ಒತ್ತಾಯಿಸಿದ್ದಾರೆ.

“ಸಂವಿಧಾನದ 8ನೇ ಅನುಸೂಚಿಯಲ್ಲಿ ಪ್ರಸ್ತುತ 22 ನುಡಿಗಳಿವೆ. ತುಳು ಮತ್ತು ಕೊಡವ ಸೇರಿದಂತೆ ಇನ್ನೂ ಹಲವು ನುಡಿಗಳನ್ನು 8ನೇ ಅನುಸೂಚಿಗೆ ಸೇರಿಸಬೇಕೆಂಬ ಬೇಡಿಕೆಗಳು ಕೇಂದ್ರ ಸರ್ಕಾರದ ಮುಂದೆ ಹಲವು ವರ್ಷಗಳಿಂದ ಇದ್ದು, ನೆನೆಗುದಿಗೆ ಬಿದ್ದಿವೆ. 2003ರಲ್ಲಿ ಸೀತಾಕಾಂತ ಮೊಹಾಪಾತ್ರ ಅವರ ಅಧ್ಯಕ್ಷತೆಯಲ್ಲಿ 8ನೇ ಅನುಸೂಚಿಗೆ ಹೆಚ್ಚಿನ ಭಾಷೆಗಳನ್ನು ಸೇರಿಸುವ ಕುರಿತು ಮಾನದಂಡಗಳನ್ನು ರೂಪಿಸಲು ಸಮಿತಿಯನ್ನು ರಚಿಸಲಾಗಿತ್ತು. ಆ ಸಮಿತಿ 2004ರಲ್ಲಿ ವರದಿ ಸಲ್ಲಿಸಿತು. ಕರ್ನಾಟಕ ಸರ್ಕಾರವೇ ತುಳು ಮತ್ತು ಕೊಡವ ಭಾಷೆಗಳನ್ನು ಸಂವಿಧಾನದ 8ನೇ ಅನುಸೂಚಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಆದರೂ ಇದುವರೆಗೆ ಈ ನ್ಯಾಯಯುತ ಬೇಡಿಕೆ ಈಡೇರಿಲ್ಲ” ಎಂದು ಅವರು ಹೇಳಿದ್ದಾರೆ.

“ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ‘ವಿವಿಧತೆಯಲ್ಲಿ ಏಕತೆ’ಯನ್ನು ಪ್ರತಿಪಾದಿಸುತ್ತ ಬಂದಿದೆ. ಬಹುತ್ವವನ್ನು ಗೌರವಿಸದೆ ದೇಶವನ್ನು ಕಟ್ಟಲು ಸಾಧ್ಯವಿಲ್ಲ. ಹಿಂದಿ ಹೇರಿಕೆಯನ್ನು ನಾವು ಯಾವ ಕಾರಣಕ್ಕೆ ವಿರೋಧಿಸುತ್ತೇವೆಯೋ, ಅದೇ ಕಾರಣಕ್ಕೆ ತುಳು, ಕೊಡವದಂಥ ಸೋದರ ನುಡಿಗಳಿಗೆ ಅಧಿಕೃತ ಮಾನ್ಯತೆ ದೊರೆಯಬೇಕು ಎಂದು ಆಗ್ರಹಿಸುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....