Homeಮುಖಪುಟಪ್ರಧಾನಿ ಮೋದಿಯಿಂದ ರಾಷ್ಟ್ರಪತಿಗೆ ಅಗೌರವ: ಕಾಂಗ್ರೆಸ್‌ ವಾಗ್ಧಾಳಿ

ಪ್ರಧಾನಿ ಮೋದಿಯಿಂದ ರಾಷ್ಟ್ರಪತಿಗೆ ಅಗೌರವ: ಕಾಂಗ್ರೆಸ್‌ ವಾಗ್ಧಾಳಿ

- Advertisement -
- Advertisement -

ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡುವ ವೇಳೆ ಎದ್ದು ನಿಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ “ತೀವ್ರ ಅಗೌರವ” ಎಸಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನಿವಾಸದಲ್ಲಿ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುತ್ತಿರುವ ಪೋಟೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ಅಡ್ವಾಣಿ ಮತ್ತು ಪಿಎಂ ಮೋದಿ ಅವರು ಕುರ್ಚಿಗಳ ಮೇಲೆ ಕುಳಿತಿದ್ದಾರೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಬಿಜೆಪಿ ನಾಯಕ ಅಡ್ವಾಣಿಗೆ ಪ್ರಶಸ್ತಿ ಹಸ್ತಾಂತರಿಸುವಾಗ ಎದ್ದು ನಿಂತಿದ್ದಾರೆ. ಇದು ನಮ್ಮ ರಾಷ್ಟ್ರಪತಿಗೆ ಘೋರವಾದ ಅಗೌರವ. ಪ್ರಧಾನಿ ಖಂಡಿತವಾಗಿಯೂ ಎದ್ದು ನಿಲ್ಲಬೇಕಿತ್ತು ಎಂದು ರಮೇಶ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಬಣದ ರ್ಯಾಲಿಯಲ್ಲಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಪ್ರಧಾನಿ ಮೋದಿ ರಾಷ್ಟ್ರಪತಿಗಳಿಗೆ ಗೌರವ ನೀಡಲು ಎದ್ದು ನಿಂತಿಲ್ಲ ಎಂದು ಹೇಳಿದ್ದು,  ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ ಎಂದು ಟೀಕಿಸಿದ್ದಾರೆ.

ಮೋದಿ ಅವಧಿಯಲ್ಲಿ ಸೈಡ್‌ಲೈನ್‌ಗೆ ಒಳಪಟ್ಟ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಭಾನುವಾರ ಅವರ ನಿವಾಸದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಅಡ್ವಾಣಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು ಎಂದು ರಾಷ್ಟ್ರಪತಿ ಭವನವು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಇದನ್ನು ಓದಿ: ಪ್ರತಿಪಕ್ಷಗಳ ಒಗ್ಗಟ್ಟನ್ನು ಬಲಪಡಿಸಿದ ‘ಲೋಕತಂತ್ರ ಬಚಾವೋ’ ರ್‍ಯಾಲಿ: ಯಾವ್ಯಾವ ನಾಯಕರು ಏನೇನು ಹೇಳಿದ್ರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...