Homeಮುಖಪುಟಗ್ರೇಟ್ ನಿಕೋಬಾರ್ ಯೋಜನೆ ನಿಲ್ಲಿಸಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹ

ಗ್ರೇಟ್ ನಿಕೋಬಾರ್ ಯೋಜನೆ ನಿಲ್ಲಿಸಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹ

- Advertisement -
- Advertisement -

ಗ್ರೇಟ್ ನಿಕೋಬಾರ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಯೋಜನೆಗಾಗಿ 8.5 ಲಕ್ಷ ಮರಗಳನ್ನು ಕಡಿಯಲಾಗುವುದು ಎಂಬ ಪರಿಸರ ಸಚಿವಾಲಯದ ಹೇಳಿಕೆಯು “ದೈತ್ಯಾಕಾರದ ತಪ್ಪು ಲೆಕ್ಕ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಗುರುವಾರ ಹೇಳಿದ್ದಾರೆ. ಯೋಜನೆಯನ್ನು ನಿಲ್ಲಿಸಿ, ಅದನ್ನು ಪರಿಶೀಲಿಸುವುದು ಮಾತ್ರ ಮುಂದೆ ಇರುವ ಸೂಕ್ತ ಮಾರ್ಗವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.ಗ್ರೇಟ್ ನಿಕೋಬಾರ್ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪರಿಸರ ಸಚಿವರೂ ಆಗಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, “ಈ ಅರಣ್ಯ ಪ್ರದೇಶದ 50% ದಷ್ಟು, ಸುಮಾರು 6,500 ಹೆಕ್ಟೇರ್‌ಗಳು ಅರಣ್ಯನಾಶವಾಗುತ್ತವೆ ಮತ್ತು ಸುಮಾರು 8.5 ಲಕ್ಷ ಮರಗಳನ್ನು ಕಡಿಯಲಾಗುವುದು ಎಂದು ಸರ್ಕಾರ ಹೇಳಿಕೊಂಡಿದೆ. ಆದಾಗ್ಯೂ, ಮೂರು ದಶಕಗಳ ಅನುಭವವನ್ನು ಹೊಂದಿರುವ ಮಳೆಕಾಡು ಪರಿಸರಶಾಸ್ತ್ರಜ್ಞರ ಲೆಕ್ಕಾಚಾರಗಳ ಪ್ರಕಾರ, ಈ ಅರಣ್ಯನಾಶದ ಅಂಕಿಅಂಶಗಳನ್ನು ತಪ್ಪಾಗಿ ಲೆಕ್ಕ ಹಾಕಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂಓದಿ: ರಾಜ್ಯದ ಸ್ಥಾನಮಾನಕ್ಕೆ ಆಗ್ರಹಿಸುವುದು ನಮ್ಮ ಸಂಪುಟದ ಮೊದಲ ನಿರ್ಣಯ : ಉಮರ್ ಅಬ್ದುಲ್ಲಾ

“ಗ್ರೇಟ್ ನಿಕೋಬಾರ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಪ್ರಾಜೆಕ್ಟ್ ಅನ್ನು ಕಾರ್ಯಗತಗೊಳಿಸುವಾಗ 8.5 ಲಕ್ಷ ಮರಗಳನ್ನು ಕಡಿಯಲಾಗುವುದು ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಹೇಳುತ್ತಿದೆ” ಎಂದು ಎಕ್ಸ್‌ನಲ್ಲಿ ಜೈರಾಮ್ ರಮೇಶ್ ಹೇಳಿದ್ದಾರೆ. ಗ್ರೇಟ್ ನಿಕೋಬಾರ್ ಯೋಜನೆ

“ಇದೊಂದು ಭಾರಿ ದೊಡ್ಡ ತಪ್ಪು ಅಂದಾಜು ಎಂದು ತಿಳಿದುಬಂದಿದೆ. ಈಗ ನಾವು 32 ಲಕ್ಷದಿಂದ 58 ಲಕ್ಷ ಮರಗಳನ್ನು ನಾಶಪಡಿಸಬೇಕಾಗುತ್ತದೆ ಎಂದು ಸ್ವತಂತ್ರ ಅಂದಾಜನ್ನು ಹೊಂದಿದ್ದೇವೆ. ಈ ಆಧಾರದಲ್ಲಿ ಈ ಅರಣ್ಯ ನಾಶ ಇನ್ನೂ ಹೆಚ್ಚಿರಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: FACT CHECK : ಮೊಬೈಲ್ ಕಿತ್ತುಕೊಂಡ ತಾಯಿಯ ತಲೆಗೆ ಬ್ಯಾಟ್‌ನಿಂದ ಹೊಡೆದ ಮಗ..ವೈರಲ್ ವಿಡಿಯೋದ ಅಸಲಿಯತ್ತೇನು?

ಈ ಯೋಜನೆಯನ್ನು ನಿಲ್ಲಿಸಿ ಅನಾಹುತದ ಬಗ್ಗೆ ಸ್ವತಂತ್ರ ಮತ್ತು ವೃತ್ತಿಪರವಾದ ಸಮರ್ಥ ತಂಡದಿಂದ ಕೂಲಂಕಷವಾಗಿ ಪರಿಶೀಲಿಸುವುದು ಮಾತ್ರ ಮುಂದಿನ ಸಂವೇದನಾಶೀಲ ಮಾರ್ಗವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಳಿದ್ದು, ಆದರೆ “ಅಹಂ ಮತ್ತು ಪ್ರತಿಷ್ಠೆ” ಅನ್ನು ಬದಿಗಿಡಬೇಕು ಎಂದು ಅವರು ಹೇಳಿದ್ದಾರೆ.

ಗ್ರೇಟ್ ನಿಕೋಬಾರ್ ದ್ವೀಪದ ಮೇಲೆ ಕಾರ್ಯಗತಗೊಳಿಸುತ್ತಿರುವ ಈ ಯೋಜನೆಯು ಅನಗತ್ಯವಾಗಿ ಸ್ವೀಕಾರಾರ್ಹವಲ್ಲದ ರೀತಿಯಲ್ಲಿ ಇದ್ದು, ಯೋಜನೆಯ ಪ್ರಸ್ತುತ ವಿನ್ಯಾಸವು “ಪರಿಸರಶಾಸ್ತ್ರಕ್ಕೆ ಅಪಾಯವನ್ನುಂಟುಮಾಡುತ್ತದೆ” ಎಂದು ರಮೇಶ್ ಪ್ರತಿಪಾದಿಸಿದ್ದಾರೆ.

ಪರಿಸರ ಸಚಿವ ಭೂಪೇಂದರ್ ಯಾದವ್‌ಗೆ ಬರೆದ ಪತ್ರದಲ್ಲಿ, ಗ್ರೇಟ್ ನಿಕೋಬಾರ್ ದ್ವೀಪ ಮೂಲಸೌಕರ್ಯ ಯೋಜನೆಗೆ ನೀಡಲಾದ ಪರಿಸರ ಅನುಮತಿಗಳನ್ನು ಮರುಪರಿಶೀಲಿಸಲು ನಿಯೋಜಿಸಲಾದ ಉನ್ನತ ಅಧಿಕಾರ ಸಮಿತಿಯ (ಎಚ್‌ಪಿಸಿ) ವಿಶ್ವಾಸಾರ್ಹತೆ, ಸಂಯೋಜನೆ ಮತ್ತು ತೀರ್ಮಾನಗಳನ್ನು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ವಿಡಿಯೊ ನೋಡಿ: ಜಯನಗರ 4ನೇ ಬ್ಲಾಕಿನಲ್ಲಿ ಬೀದಿ ವ್ಯಾಪಾರ ತೆರವುಗೊಳಿಸುವ ನೋಟಿಸ್‌ಗೆ ಪ್ರತಿಕ್ರಿಯಿಸಿದ ಜ್ಯೋತಿಲಕ್ಷ್ಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...