Homeಚಳವಳಿದೀನ ದಲಿತೋದ್ಧಾರಕ ಮಹಾತ್ಮ ಕುದ್ಮುಲ್ ರಂಗರಾವ್

ದೀನ ದಲಿತೋದ್ಧಾರಕ ಮಹಾತ್ಮ ಕುದ್ಮುಲ್ ರಂಗರಾವ್

- Advertisement -
- Advertisement -

ಕುದ್ಮುಲ್ ರಂಗರಾವ್ ಭಾರತ ಕಂಡ ಮಹಾನ್ ಮಾನವತಾವಾದಿ, ಶಿಕ್ಷಣ ಪ್ರೇಮಿ, ಸಮಾಜ ಸುಧಾರಕ, ಮಹಿಳಾ ಸಬಲೀಕರಣ ರೂವಾರಿ, ದಲಿತೋದ್ಧಾರಕ, ಸ್ವಾತಂತ್ರ್ಯ ಹೋರಾಟಗಾರ ಮೊದಲಾದ ಬಹುಮುಖ ವ್ಯಕ್ತಿತ್ವವುಳ್ಳವರಾಗಿದ್ದರು. ಆಕಸ್ಮಿಕವಾಗಿ ಇವರು ಬ್ರಾಹ್ಮಣರಾಗಿದ್ದರೂ ತಮ್ಮ ಬಹುಮುಖಿ ಕೊಡುಗೆಗಳಿಂದ ಎಲ್ಲರಿಂದಲೂ ಮಹಾತ್ಮರೆಂಬ ಗೌರವಕ್ಕೆ ಭಾಜನರಾಗಿದ್ದಾರೆ. ಇವರು ಕೇರಳದ ಕಾಸರಗೋಡಿನ ಕುದ್ಮುಲ್ ಎಂಬ ಸಣ್ಣ ಹಳ್ಳಿಯಲ್ಲಿ ಜೂನ್ 29, 1859ರಂದು ದೇವಪ್ಪಯ್ಯ ಮತ್ತು ಗೌರಿ ದಂಪತಿಗಳ ಪುತ್ರರಾಗಿ ಜನಿಸಿದರು. ಇವರು ಬಾಲ್ಯ ಶಿಕ್ಷಣ ಹಾಗೂ ಮೆಟ್ರಿಕ್ಯುಲೇಷನ್ ಶಿಕ್ಷಣವನ್ನು ಕಾಸರಗೋಡಿನಲ್ಲಿ ಮುಗಿಸಿ ಜೀವನ ನಿರ್ವಹಣೆ ಮತ್ತು ಸಮಾಜಮುಖಿ ಕಾರ್ಯಗಳಿಗೆ ಮಂಗಳೂರನ್ನು ತಮ್ಮ ಕರ್ಮಭೂಮಿಯನ್ನಾಗಿ ಆಯ್ಕೆ ಮಾಡಿಕೊಂಡರು. ಶ್ರೀ ಸಾಮಾನ್ಯ ಕುಟುಂಬಕ್ಕೆ ಸೇರಿದ ಇವರು ಆರ್ಥಿಕವಾಗಿ ಸ್ಥಿತಿವಂತರಲ್ಲದಿದ್ದರೂ ಅಪಾರ ಹೃದಯ ಶ್ರೀಮಂತಿಕೆ ಹೊಂದಿದ್ದರು.

ಕುದ್ಮುಲ್ ರಂಗರಾವ್ ಅಂಚೆ ತೆರಪಿನ ಶಿಕ್ಷಣದ ಮೂಲಕ ಪ್ಲೀಡರ್‌ಷಿಪ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಮಂಗಳೂರಿನ ನ್ಯಾಯಾಲಯದಲ್ಲಿ ಅರ್ಜಿದಾರರ ಪರವಾಗಿ ವಕಾಲತ್ತು ವಹಿಸುವ ಅರ್ಹತೆ ಗಳಿಸಿದರು. ಇವರು ಬಾಲ್ಯದಿಂದಲೂ ಬಡವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುವ ಮನೋಧರ್ಮವನ್ನು ಹೊಂದಿದ್ದರು. ಭೂಮಾಲೀಕರು, ಉದ್ದಿಮೆದಾರರು ಮೊದಲಾದ ಬಲಾಢ್ಯರಿಂದ ಶೋಷಣೆಗೆ ಗುರಿಯಾದ ಅಸಹಾಯಕರಿಗೆ ಇವರು ನ್ಯಾಯಾಲಯದಲ್ಲಿ ಉಚಿತವಾಗಿ ಸಹಾಯ ಮಾಡುವ ಪ್ರವೃತ್ತಿ ಹೊಂದಿದ್ದರು. ಜೀವನ ನಿರ್ವಹಣೆಗಾಗಿ ಇವರು ನ್ಯಾಯಾಲಯದಲ್ಲಿ ವಕೀಲ ವೃತ್ತಿಯನ್ನು ನಿರ್ವಹಿಸಿದ್ದರೂ ಆ ಕಾಲದಲ್ಲಿ ಬ್ರಿಟಿಷರು ಭಾರತೀಯರ ಮೇಲೆ ನಡೆಸುತ್ತಿದ್ದ ದೌರ್ಜನ್ಯಗಳನ್ನು ಉಗ್ರವಾಗಿ ಪ್ರತಿಭಟಿಸಿ ಕರಾವಳಿ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಚಳುವಳಿಗೆ ಸಮಾನ ಮನಸ್ಕರೊಡಗೂಡಿ ಭೂಮಿಕೆ ಸಿದ್ದಪಡಿಸಿದರು. ಇವರನ್ನು ಅಂದು ಬಡವರ ಲಾಯರ್ ಎಂದೇ ಜನರು ಪ್ರೀತಿಯಿಂದ ಸಂಬೋಧಿಸುತ್ತಿದ್ದರು.

ಕುದ್ಮುಲ್ ರಂಗರಾವ್ ವಯಸ್ಸಿನಲ್ಲಿ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧಿಯವರಿಗಿಂತ ಹಿರಿಯರಾಗಿದ್ದರು. ದೀನ ದುರ್ಬಲರ ಅಭಿವೃದ್ಧಿ ಹರಿಕಾರರಾದ ಇವರ ಬಗ್ಗೆ ಗಾಂಧಿಯವರಿಗೆ ಅಪಾರ ಪ್ರೀತಿ ಮತ್ತು ಗೌರವ ಇತ್ತು. ಇವರ ಮಾನವೀಯತೆ ಮತ್ತು ರಾಷ್ಟ್ರಪ್ರೇಮದಿಂದ ಪ್ರಭಾವಿತರಾಗಿ ಗಾಂಧಿ ಇವರನ್ನು ಪ್ರೀತಿಪೂರ್ವಕವಾಗಿ ಗುರುವರ್ಯ ಎಂದೇ ಕರೆಯುತ್ತಿದ್ದರು. ಕರ್ನಾಟಕದಲ್ಲಿ ಸ್ವಾತಂತ್ರ್ಯ ಚಳುವಳಿಗೆ ಯುವಜನರು ಮತ್ತು ಸಮಾನ ಮನಸ್ಕರನ್ನು ಸಂಘಟಿಸಲು ಗಾಂಧೀಜಿ ಕುದ್ಮುಲ್
ರಂಗರಾವ್‌ರವರ ಸಹಕಾರ ಪಡೆದಿದ್ದರು. ಇವರು ಸಮಾಜ ಸುಧಾರಣೆಗೆ ವಿಶೇಷ ಮಹತ್ವ ನೀಡಿ ಮಂಗಳೂರಿನಲ್ಲಿ ರಾಷ್ಟ್ರದ ಅಪ್ರತಿಮ ಸಮಾಜ ಸುಧಾರಕ ರಾಜಾ ರಾಮ್ ಮೋಹನ್ ರಾಯರು ಆರಂಭಿಸಿದ ಬ್ರಹ್ಮ ಸಮಾಜ ಶಾಖೆಯನ್ನು 1870ರಲ್ಲಿ ಆರಂಭಿಸಿದರು.

ಹಿಂದೂ ವರ್ಣವ್ಯವಸ್ಥೆ, ಅಸಮಾನತೆ ಮತ್ತು ಅಸ್ಪೃಶ್ಯತೆಗಳಿಂದ ಜಿಗುಪ್ಸೆಗೊಂಡ ಕುದ್ಮುಲ್ ರಂಗರಾವ್ ಕರಾವಳಿ ಕರ್ನಾಟಕದಲ್ಲಿ ಸಮಾಜ ಸುಧಾರಣೆಗೆ ಹಲವಾರು ವೈರುಧ್ಯಗಳು ಮತ್ತು ಅಪಾಯಗಳ ನಡುವೆಯೂ ಮುಂದಾದರು. ದಲಿತರು, ಹಿಂದುಳಿದವರು ಮತ್ತು ಶೋಷಿತ ಸಮುದಾಯಗಳು ಶಿಕ್ಷಣದಿಂದ ವಂಚಿತರಾಗಿರುವುದರಿಂದ ಬದುಕಿನ ಎಲ್ಲ ಕ್ಷೇತ್ರಗಳಲ್ಲಿಯೂ ಸಮಾನ ಅವಕಾಶಗಳನ್ನು ಪಡೆಯಲು ಸಾಧ್ಯವಾಗಿಲ್ಲವೆಂದು ಕುದ್ಮುಲ್ ರಂಗರಾವ್ ಬಲವಾಗಿ ಪ್ರತಿಪಾದಿಸಿದರು.

ಪ್ರಗತಿಗೆ ವಿದ್ಯೆಯೇ ಮೂಲ ಎಂದು ನಂಬಿದ್ದ ಇವರು ಶೋಷಿತ ಸಮುದಾಯದ ಮಕ್ಕಳಿಗೆ ಶಿಕ್ಷಣ ನೀಡುವ ಸಲುವಾಗಿ ಕಂಕನಾಡಿ, ಬೋಳೂರು, ಉಡುಪಿ, ಬನ್ನಂಜೆ, ನೇಜಾರು, ಅತ್ತಾವರ, ಬಾಬುಗುಡ್ಡೆ, ದಡ್ಡಲ್ ಮೊದಲಾದೆಡೆ ಉಚಿತ ಶಾಲೆಗಳನ್ನು ತೆರೆದರು. ಮಕ್ಕಳು ಶಾಲೆಗೆ ಬರುವುದನ್ನು ಪ್ರೋತ್ಸಾಹಿಸಲು ಅವರಿಗೆ ಉಚಿತ ಊಟದ ವ್ಯವಸ್ಥೆಯನ್ನೂ ಮಾಡಿದರು. ಮಕ್ಕಳ ಪೋಷಕರಿಗೆ ಅಂದಿನ ಕಷ್ಟಕಾಲದಲ್ಲಿ ದಿನಕ್ಕೆ ಎರಡು ಪೈಸೆ ಪ್ರೋತ್ಸಾಹ ಧನ ನೀಡುತ್ತಿದ್ದರು. ಇವರ ಜ್ಞಾನದಾಸೋಹ ಕಾಯಕ ಮೇಲ್ವರ್ಗದವರ ಕೆಂಗಣ್ಣಿಗೆ ಗುರಿಯಾಯಿತು. ಪ್ರಾಣಭಯವನ್ನೂ ಲೆಕ್ಕಿಸದೇ ಇವರು ದೀನ ದುರ್ಬಲರ ಶಿಕ್ಷಣಕ್ಕೆ ಭದ್ರಬುನಾದಿ ಹಾಕಿದರು. ಅಂದು ವೈದಿಕಶಾಹಿ ಮತ್ತು ಬಂಡವಾಳಶಾಹಿಗಳ ದಬ್ಬಾಳಿಕೆಗೆ ಶೂದ್ರ ಸಮುದಾಯಗಳು ಕರಾವಳಿ ಕರ್ನಾಟಕ ಭಾಗದಲ್ಲಿ ಗುರಿಯಾಗಿದ್ದವು.

ದುರ್ಬಲ ವರ್ಗಗಳ ಅಸಹಾಯಕ ಮಕ್ಕಳು ಮತ್ತು ಯುವಕರನ್ನು ಭೂಮಾಲೀಕರು ಮತ್ತು ಶ್ರೀಮಂತರು ಜೀತದಾಳುಗಳನ್ನಾಗಿ ಇಟ್ಟುಕೊಂಡು ಶೋಷಣೆಗೆ ಗುರಿಪಡಿಸುತ್ತಿದ್ದರು. ಕುದ್ಮುಲ್ ರಂಗರಾವ್ ಇಂತಹ ಅಮಾನವೀಯ ಜೀತಪದ್ಧತಿಯ ವಿರುದ್ಧ ಸಾಮಾಜಿಕ ಹೋರಾಟವನ್ನು ರೂಪಿಸಿ ಬಹಳಷ್ಟು ಜೀತದಾಳುಗಳನ್ನು ಸ್ವತಂತ್ರರನ್ನಾಗಿಸಿದರು. ಯಾರು ಎಷ್ಟೇ ಹೆದರಿಸಿದರೂ ಇವರು ತಮ್ಮ ಸಾಮಾಜಿಕ ನ್ಯಾಯಪರ ಹೋರಾಟಗಳನ್ನು ಧೀಮಂತಿಕೆಯಿಂದ ಮುಂದುವರೆಸಿದರು. ಆ ಕಾಲದಲ್ಲಿ ವಿಧವೆಯರ ಪುನರ್ ವಿವಾಹ ಮತ್ತು ಅಂತರ್ಜಾತಿಯ ವಿವಾಹಗಳಿಗೆ ರಾಜಾರಾಮ್ ಮೋಹನರಾಯರು ಉತ್ತರ ಭಾರತದಲ್ಲಿ ದಿಟ್ಟ ಹೋರಾಟ ನಡೆಸಿದಂತೆ ದಕ್ಷಿಣದಲ್ಲಿ ಕುದ್ಮುಲ್ ರಂಗರಾವ್‌ರು ಪ್ರಬಲ ಹೋರಾಟ ನಡೆಸಿದರು. ತಮ್ಮ ಮಗಳು ರಾಧಾಭಾಯಿ ಚಿಕ್ಕ ವಯಸ್ಸಿನಲ್ಲಿ ವಿಧವೆಯಾದಾಗ ಆಕೆಯನ್ನು ಮರುಮದುವೆಯಾಗಲು ಮುಂದೆ ಬಂದ ಪ್ರಗತಿಶೀಲ ಯುವಕ ಪಿ.ಸುಬ್ಬರಾಯನ್ ಎಂಬುವರೊಂದಿಗೆ ವಿವಾಹ ಮಾಡಿ ಸಮಾಜಕ್ಕೆ ಮಾದರಿಯೆನಿಸಿದರು.

ಕುದ್ಮುಲ್ ರಂಗರಾಯರ ಹೋರಾಟಗಳು ಮತ್ತು ಕೊಡುಗೆಗಳಿಂದ ಮಹಾತ್ಮ ಗಾಂಧಿ ಪ್ರಭಾವಿತರಾಗಿ ದೀನ ದುರ್ಬಲರನ್ನು ಮೇಲೆತ್ತುವ ನಿಟ್ಟಿನಲ್ಲಿ ಅವರು ತಮಗೆ ಗುರು ಎಂದು ಶ್ಲಾಘಿಸಿದರು. ತಮ್ಮ ಪತ್ರಿಕೆಗಳಲ್ಲಿ ಇವರ ಮೇರು ವ್ಯಕ್ತಿತ್ವವನ್ನು ಗಾಂಧೀಜಿ ಮುಕ್ತ ಕಂಠದಿಂದ ಹೊಗಳಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಕುದ್ಮುಲ್ ರಂಗರಾಯರ ಅಸ್ಪೃಶ್ಯತೆಯ ನಿವಾರಣೆ ಮತ್ತು ಸಾಮಾಜಿಕ ನ್ಯಾಯಪರ ಹೋರಾಟಗಳಿಂದ ಪ್ರಭಾವಿತರಾಗಿದ್ದರು. ಇವರನ್ನು ಕರ್ನಾಟಕದ ಜ್ಯೋತಿ ಬಾಫುಲೆ ಎಂದು ಬಣ್ಣಿಸಲು ಹೆಮ್ಮೆಯೆನಿಸುತ್ತದೆ.

ಕುದ್ಮುಲ್ ರಂಗರಾಯರಿಗೆ ಶಿಕ್ಷಣ, ಸಮಾಜ ಸುಧಾರಣೆ, ಸ್ವಾತಂತ್ರ್ಯ ಹೋರಾಟ ಮೊದಲಾದವುಗಳ ಜೊತೆಗೆ ಮಾನವ ಸಂಪನ್ಮೂಲಗಳ ಅಭಿವೃದ್ಧಿ ಮತ್ತು ಯುವಜನರ ಉದ್ಯಮಶೀಲತೆ ಅಭಿವೃದ್ಧಿಗಳ ಬಗ್ಗೆ ವಿಶೇಷ ಕಾಳಜಿ ಇತ್ತು. ಹಿಂದುಳಿದವರಿಗೆ ವೃತ್ತಿಪರ ಶಿಕ್ಷಣ ನೀಡುವ ಸಲುವಾಗಿ ಮಂಗಳೂರಿನ ಶೇಡಿಗುಡ್ಡೆ ಎಂಬಲ್ಲಿ ಕೈಗಾರಿಕಾ ತರಬೇತಿ ಶಾಲೆಯನ್ನು ಪ್ರಾರಂಭಿಸಿದರು. ನಿರುದ್ಯೋಗಿ ಯುವಕರಿಗೆ ಬಡಗಿ ಕೆಲಸ, ನೇಯ್ಗೆ, ತೋಟಗಾರಿಕೆ, ಕಸೂತಿ, ಜೇನು ಸಾಗಾಣಿಕೆ, ರೇಷ್ಮೆ ಹುಳು ಸಾಕಾಣಿಕೆ ಮೊದಲಾದ ವೃತ್ತಿಗಳಲ್ಲಿ ತರಬೇತಿ ಕೊಡಿಸಿ ಅವರಿಗೆ ಸ್ವಯಂ ಉದ್ಯೋಗಾವಕಾಶಗಳನ್ನು ಕಲ್ಪಿಸಿದರು. ಯುವಜನರ ಸಬಲೀಕರಣಕ್ಕೆ ಕುದ್ಮುಲ್ ರಂಗರಾವ್ ನೀಡಿದ ಕೊಡುಗೆ ಅಮೂಲ್ಯವಾದುದು.

ಕುದ್ಮುಲ್ ರಂಗರಾವ್ ಕರಾವಳಿ ಕರ್ನಾಟಕದಲ್ಲಿ ಸ್ವಾತಂತ್ರ್ಯಪೂರ್ವದಲ್ಲಿ ಸಹಕಾರ ಚಳುವಳಿಯನ್ನು ಮುನ್ನಡೆಸಿದರು. ಹಿಂದುಳಿದವರ ಆರ್ಥಿಕ ಅಭಿವೃದ್ಧಿಗಾಗಿ ಮಂಗಳೂರಿನ ಕೋರ್ಟ್ ಹಿಲ್ಸ್ ಪ್ರದೇಶದಲ್ಲಿ ಆದಿ ದ್ರಾವಿಡ ಸಹಕಾರ ಸಂಘ ಸ್ಥಾಪಿಸಿದರು. ಅಂದು ಬ್ಯಾಂಕುಗಳು ಮತ್ತು ಖಾಸಗಿ ಹಣಕಾಸು ಸಂಸ್ಥೆಗಳು ದಲಿತರಿಗೆ ನಿಲುಕುತ್ತಿಲ್ಲವಾದ್ದರಿಂದ ಆರ್ಥಿಕ ಸ್ವಾವಲಂಬನೆಗೆ ಪೂರಕವಾಗಿ ಸಹಕಾರ ಸಂಘವನ್ನು ಕುದ್ಮುಲ್ ರಂಗರಾವ್ ಸ್ಥಾಪಿಸಿ ನಾಡು ಕಂಡ ಶ್ರೇಷ್ಟ ಸಹಕಾರ ರತ್ನವಾಗಿ ಇತಿಹಾಸದಲ್ಲಿ ಉಳಿದಿದ್ದಾರೆ. ದುರ್ಬಲ ವರ್ಗಗಳ ಜನರು ನಗರ ಪ್ರದೇಶಗಳಿಗೆ ವಲಸೆ ಹೋಗಿ ಕೊಳೆಗೇರಿಗಳಲ್ಲಿ ಪ್ರಾಣಿಗಿಂತಲೂ ಕೀಳಾಗಿ ಬದುಕುವ ಹೀನಾಯ ಪ್ರವೃತ್ತಿಯನ್ನು ತಪ್ಪಿಸುವ ಸಲುವಾಗಿ ಇವರು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಪ್ರಕ್ರಿಯೆಗಳನ್ನು ಬಲಪಡಿಸಿ ದುರ್ಬಲರಿಗೆ ಜೀವನೋಪಾಯ ಮಾರ್ಗಗಳನ್ನು ಕಲ್ಪಿಸಬೇಕೆಂದು ಬಹಳ ಹಿಂದೆಯೇ ಕರೆ ನೀಡಿದ್ದರು. ಅಸ್ಪೃಶ್ಯ ಜನಾಂಗಗಳ ಉದ್ಧಾರಕ್ಕೆ ಕುದ್ಮುಲ್ ರಂಗರಾವ್ ಬದ್ಧರಾಗಿದ್ದರು. ದಲಿತರಲ್ಲೇ ಅತ್ಯಂತ ಹಿಂದುಳಿದ ಕೊರಗ ಸಮುದಾಯದ ಜನರಿಗೆ ಮಂಗಳೂರಿನ ಕೋರ್ಟುಗುಡ್ಡೆ ಬಳಿ ಸಾಲು ಮನೆಗಳನ್ನು ಕಟ್ಟಿಸಿದರು. ಬಡವರಿಗೆ ಜನತಾ ಮನೆಗಳನ್ನು ಕಟ್ಟಬೇಕೆಂಬ ಪರಿಕಲ್ಪನೆಯನ್ನು ಸ್ವಾತಂತ್ರ್ಯಪೂರ್ವದಲ್ಲಿ ಇವರು ಸರ್ಕಾರಕ್ಕೆ ನೀಡಿದರು.

ಇಂದಿಗೂ ಕೂಡ ಕರಾವಳಿ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ ಅಜಲು ಪದ್ಧತಿ ವಿರುದ್ಧ ಇವರು ಬಹಳ ಹಿಂದೆಯೇ ಪ್ರಬಲ ವಿರೋಧ ವ್ಯಕ್ತಪಡಿಸಿದರು. ಶ್ರೀಮಂತ ರೋಗಿಗಳ ಉಗುರು ಮತ್ತು ಕೂದಲನ್ನು ಅನ್ನಕ್ಕೆ ಕಲಸಿ ಕೊರಗ ಸಮುದಾಯದ ಜನರಿಗೆ ತಿನ್ನಿಸಿದರೆ ಕಾಯಿಲೆ ವಾಸಿಯಾಗುವುದೆಂಬ ಅತ್ಯಂತ ಕೆಳದರ್ಜೆಯ ಮೌಢ್ಯವೇ ಅಜಲು ಪದ್ಧತಿ. ಇಂತಹ ಮಾನವ ಹಕ್ಕುಗಳ ಉಲ್ಲಂಘನೆ ಪ್ರವೃತ್ತಿ ವಿರುದ್ಧ ಇವರು ದಿಟ್ಟ ಹೋರಾಟ ನಡೆಸಿದರು.

ಇವರು ಮಂಗಳೂರು ನಗರದಲ್ಲಿ ಸ್ಥಾಪಿಸಿರುವ ದಲಿತ ಹೆಣ್ಣುಮಕ್ಕಳ ವಿದ್ಯಾರ್ಥಿ ನಿಲಯವನ್ನು ಇಂದು ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ನಿರ್ವಹಿಸುತ್ತಿದೆ. ದಲಿತ ಅಧಿಕಾರಿಯೊಬ್ಬರು ಕಾರಿನಲ್ಲಿ ಬರುವಾಗಿ ಮೇಲೆದ್ದ ಧೂಳು ನನ್ನ ತಲೆಯ ಮೇಲೆ ಬಿದ್ದಾಗ ನನಗೆ ಅತೀವ ಆನಂದವುಂಟಾಗುತ್ತದೆ ಎಂದು ಹೇಳಿದ ಕುದ್ಮುಲ್ ರಂಗರಾವ್ ಅಂತಹ ಮಹಾತ್ಮರು ಇಂದು ಸಿಗುವುದುಂಟೆ? ಗಾಂಧಿ ಮತ್ತು ಕುದ್ಮುಲ್ ರಂಗರಾಯರ ಸಾಮಾಜಿಕ ಮತ್ತು ಆರ್ಥಿಕ ವಿಚಾರಧಾರೆಗಳು ಒಂದೇ ಆಗಿದ್ದು ಮಾನವೀಯ ನೆಲೆಗಟ್ಟನ್ನು ಹೊಂದಿವೆ. ಇಂದು ಹಿಂದುತ್ವದ ಪ್ರಯೋಗಶಾಲೆಯಾಗಿ ಪರಿವರ್ತನೆಗೊಳ್ಳುತ್ತಿರುವ ಭಾರತವನ್ನು ಸನ್ಮಾರ್ಗದಲ್ಲಿ ಮುನ್ನಡೆಸಲು ಇಂತಹ ಮಹಾತ್ಮರು ಮತ್ತೊಮ್ಮೆ ಹುಟ್ಟಿ ಬರಬೇಕು. ಭಾರತಕ್ಕೆ ತಾಲಿಬಾನಿಗಳು ಬೇಡ, ಕುದ್ಮುಲ್ ರಂಗರಾವ್, ಗಾಂಧಿ, ಅಂಬೇಡ್ಕರ್ ಮೊದಲಾದ ಮಹಾತ್ಮರು ಇಂದು ಬೇಕೇ ಬೇಕು.

***

ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

(ಲೇಖಕರಾದ ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು ಅವರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರು ಹಾಗೂ ಅಪ್ರತಿಮ ವಿಚಾರವಾದಿ. ನೇರ, ದಿಟ್ಟ ನುಡಿಗೆ ಹೆಸರಾದವರು.)

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕುದ್ಮುಲ್ ರಂಗರಾವ್ ಕುರಿತ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು ಅವರ ಲೇಖನ ಪ್ರಸ್ತುತ ಸಮಾಜಕ್ಕೆ ದಿಕ್ಸೂಚಿಯಂತಿದೆ.ಲೇಖಕರಿಗೆ ಅಭಿನಂದನೆಗಳು.

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...