Homeಕರ್ನಾಟಕಇಂದಿನಿಂದ 'ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ' ಜಾರಿ

ಇಂದಿನಿಂದ ‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ ಜಾರಿ

- Advertisement -
- Advertisement -

‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ಯನ್ನು ಮೇ 15ರಂದು (ಇಂದು) ಜಾರಿಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಬುಧವಾರ ಅಧಿಸೂಚನೆ ಹೊರಡಿಸಿದೆ. ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆಡಳಿತ ವಹಿಸಿಕೊಳ್ಳುವವರೆಗೆ ಬಿಬಿಎಂಪಿ ಮುಂದುವರಿಯಲಿದೆ.

ನಗರದ ಆಡಳಿತವನ್ನು ಸುಗಮಗೊಳಿಸುವುದು, ಮೂಲಸೌಕರ್ಯ, ಸಂಚಾರ ಮತ್ತು ನಗರ ವಿಸ್ತರಣೆ ಸೇರಿದಂತೆ ನಗರದ ಬೆಳೆಯುತ್ತಿರುವ ಸವಾಲುಗಳನ್ನು ಪರಿಹರಿಸುವ ಉದ್ದೇಶ ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ ಹೊಂದಿದೆ ಎಂದು ಸರ್ಕಾರ ಹೇಳಿದೆ.

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ ಜಾರಿಯಾದ ಮೇಲೆ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ (ಜಿಬಿಎ) 120 ದಿನಗಳಲ್ಲಿ ರಚನೆಯಾಗಲಿದೆ. ಅದಕ್ಕೆ ಆಡಳಿತಾಧಿಕಾರಿ ನೇಮಕಗೊಳ್ಳಲಿದ್ದಾರೆ. ಗ್ರೇಟರ್‌ ಬೆಂಗಳೂರು ಪ್ರದೇಶ (ಜಿಬಿಎ) ಗಡಿಗುರುತು ನಡೆಯಲಿದೆ. ಆನಂತರ ನಿಧಾನವಾಗಿ ಬಿಬಿಎಂಪಿ ಅಸ್ತಿತ್ವ ಕಳೆದುಕೊಳ್ಳಲಿದೆ.

“ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರ ರಚನೆ ಶೀಘ್ರದಲ್ಲೇ ಆಗಲಿದೆ. ಹೊಸ ಪ್ರಾಧಿಕಾರವು ಬಿಬಿಎಂಪಿಯನ್ನು ಬಹು ಪಾಲಿಕೆಗಳಾಗಿ ವಿಭಜಿಸುವ ಮೂಲಕ ಬೆಂಗಳೂರಿನ ನಾಗರಿಕ ಆಡಳಿತವನ್ನು ಪುನರ್‌ರಚಿಸಲಿದೆ. ಇದು ದಕ್ಷತೆಯನ್ನು ಹೆಚ್ಚಿಸಲು ಮತ್ತು ಆಡಳಿತವನ್ನು ಸ್ಥಳೀಕರಿಸಲು ವಿನ್ಯಾಸಗೊಳಿಸಲಾದ ಕ್ರಮವಾಗಿದೆ” ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಳೆದ ವಾರ ಹೇಳಿದ್ದಾರೆ.

ಫೆಬ್ರವರಿ 2024ರಲ್ಲಿ ವಿಧಾನಮಂಡಲದ ಉಭಯ ಸದನಗಳು ಅನುಮೋದಿಸಿದ ‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ ಜನಸಂಖ್ಯೆಯ ಮಿತಿ ಮೀರಿದ ಬೆಳವಣಿಗೆ, ಮೂಲಸೌಕರ್ಯಗಳ ಕೊರತೆ, ಪರಿಸರ ಸಂರಕ್ಷಣೆಯ ಸವಾಲು ಸೇರಿದಂತೆ ಬೆಂಗಳೂರು ಮಹಾನಗರದ ಸಂಪೂರ್ಣ ಆಡಳಿತದ ಸಮಸ್ಯೆಗಳಿಗೆ ಪರಿಹಾರ ಒದಗಿಸಲಿದೆ ಎಂಬುವುದು ಸರ್ಕಾರದ ವಾದ.

ಪ್ರಸ್ತುತ ಇರುವ 709 ಚದರ ಕಿ.ಮೀ ಬಿಬಿಎಂಪಿ ವ್ಯಾಪ್ತಿ ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರಾ ರಚನೆಯಾದ ಬಳಿಕ 1000 ಚದರ ಕಿ.ಮೀಗೆ ವಿಸ್ತರಣೆಯಾಗಲಿದೆ. ನಗರೀಕರಣಗೊಂಡಿರುವ ಕೆಲವು ಹಳ್ಳಿಗಳು ಪ್ರಾಧಿಕಾರದ ವ್ಯಾಪ್ತಿಗೆ ಬರಲಿವೆ. ಆದರೆ, ಇದು ನಿಧಾನವಾಗಿ ನಡೆಯುವ ಪ್ರಕ್ರಿಯೆಯಾಗಿದೆ. ಸದ್ಯಕ್ಕೆ ಬಿಬಿಎಂಪಿ ಪ್ರದೇಶವೇ ಪ್ರಾಧಿಕಾರದ ವ್ಯಾಪ್ತಿಯಾಗಿರಲಿದೆ ಎಂದು ವರದಿಗಳು ಹೇಳಿವೆ.

ಬೆಂಗಳೂರು ನಗರದ ಕೈಗಾರಿಕಾ ಪ್ರದೇಶಗಳಲ್ಲದೆ ಎಲೆಕ್ಟ್ರಾನಿಕ್‌ ಸಿಟಿ, ಅತ್ತಿಬೆಲೆ, ಜಿಗಣಿ ಕೈಗಾರಿಕೆ ಪ್ರದೇಶ, ಬೊಮ್ಮಸಂದ್ರ, ಸರ್ಜಾಪುರ, ಬಾಗಲೂರು, ರಾಜಾನುಕುಂಟೆ, ಹೆಸರಘಟ್ಟ, ದಾಸನಪುರ, ಮಾಕಳಿ, ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ‘ಗ್ರೇಟರ್‌ ಬೆಂಗಳೂರು ಪ್ರದೇಶ’ಕ್ಕೆ ಸೇರಿಸಿಕೊಂಡು ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆ ಇದೆ ಎಂದು ವರದಿಗಳು ವಿವರಿಸಿವೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯ ಪ್ರಕಾರ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗಿಂತ ಕಡಿಮೆಯಿಲ್ಲದ ಅಧಿಕಾರಿಯನ್ನು ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನಾಗಿ ನೇಮಿಸುತ್ತದೆ. ಮುಖ್ಯಮಂತ್ರಿ ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಾರೆ. ಅವರು ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ ಶಾಸಕರು–ಸಚಿವರು, ನಗರಾಭಿವೃದ್ಧಿ ಸಚಿವರು, ಪಾಲಿಕೆಗಳ ಮೇಯರ್‌ಗಳು, ಬಿಡಿಎ ಆಯುಕ್ತ, ಬೆಂಗಳೂರು ಜಲಮಂಡಳಿ ಅಧ್ಯಕ್ಷ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ, ಕಂದಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌, ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ, ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ನಿರ್ದೇಶಕ, ನಗರ ಭೂಸಾರಿಗೆ ನಿರ್ದೇಶನಾಲಯದ ಆಯುಕ್ತ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಹಾನಗರ ಆಯುಕ್ತ ಪ್ರಾಧಿಕಾರದ ಸದಸ್ಯರಾಗಲಿದ್ದಾರೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಪ್ರಾಧಿಕಾರದ ಮುಖ್ಯ ಆಯುಕ್ತರ ಅಧಿಕಾರಾವಧಿ ಮೂರು ವರ್ಷಗಳು. ಮಸೂದೆಯ ಆರಂಭದಲ್ಲಿ ಇದ್ದ ದುಷ್ಕೃತ್ಯ, ನಿರ್ಲಕ್ಷ್ಯ ಅಥವಾ ಅಸಮರ್ಥತೆಯ ಆಧಾರದ ಮೇಲೆ ಮೂರನೇ ಎರಡರಷ್ಟು ಬಹುಮತದಿಂದ ಆಯುಕ್ತರನ್ನು ತೆಗೆದು ಹಾಕಬಹುದು ಎಂಬ ನಿಬಂಧನೆಯನ್ನು ಅಂತಿಮ ಮಸೂದೆ ತೆಗೆದು ಹಾಕಿದೆ. ಇದು ಆಯುಕ್ತರ ಅಧಿಕಾರವಧಿಯನ್ನು ಬಲಪಡಿಸಿದೆ.

ವರದಿಗಳ ಪ್ರಕಾರ, ಮುಖ್ಯ ಆಯುಕ್ತರನ್ನು ಸರ್ಕಾರ ನೇರವಾಗಿ ನೇಮ ಮಾಡುವುದಕ್ಕೆ ನಾಗರಿಕ ಗುಂಪುಗಳು ಮತ್ತು ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಸ್ಥಳೀಯ ಸ್ವ-ಆಡಳಿತಕ್ಕೆ ಒತ್ತು ನೀಡುವ 74ನೇ ಸಾಂವಿಧಾನಿಕ ತಿದ್ದುಪಡಿಯನ್ನು ದುರ್ಬಲಗೊಳಿಸುತ್ತದೆ ಎಂಬುವುದು ಅವರ ವಾದವಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದರೂ ತೆರಿಗೆ ಪಾವತಿ, ವ್ಯಾಪ್ತಿ, ಅಧಿಕಾರಿಗಳ ಕರ್ತವ್ಯಗಳಲ್ಲಿ ಚಲಾವಣೆಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...