Homeಅಂತರಾಷ್ಟ್ರೀಯಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

- Advertisement -
- Advertisement -

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು “ನಾವು ಯಾರ ಅಡಿಯಾಳಾಗಿರಲು ಬಯಸುವುದಿಲ್ಲ” ಎಂದಿವೆ.

“ಅವರಿಗೆ ಇಷ್ಟ ಇರಲಿ, ಇಲ್ಲದಿರಲಿ, ಗ್ರೀನ್‌ಲ್ಯಾಂಡ್‌ನಲ್ಲಿ ಅಮೆರಿಕ ಏನನ್ನಾದರು ಮಾಡಲಿದೆ” ಎಂದು ಟ್ರಂಪ್ ಹೇಳಿದ ಬಳಿಕ, ಶುಕ್ರವಾರ (ಜ.9) ತಡರಾತ್ರಿ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು ಹೇಳಿಕೆ ನೀಡಿವೆ.

ಗ್ರೀನ್‌ಲ್ಯಾಂಡ್‌ ಅನ್ನು ಅಮೆರಿಕ ಖರೀದಿಸಲಿದೆ, ಅಗತ್ಯ ಬಿದ್ದರೆ ಮಿಲಿಟರಿ ಕಾರ್ಯಾಚರಣೆ ಮೂಲಕ ವಶಪಡಿಸಿಕೊಳ್ಳಲು ಹಿಂಜರಿಯುವುದಿಲ್ಲ ಎಂದು ಟ್ರಂಪ್‌ ಹೇಳಿದ್ದಾರೆ. ಇದರ ವಿರುದ್ದ ಜಂಟಿಯಾಗಿ ಪ್ರತಿಕ್ರಿಯೆ ಕೊಡಲು ಯುರೋಪ್‌ ದೇಶಗಳ ಸರ್ಕಾರಗಳು, ಪಕ್ಷಗಳು ಮತ್ತು ನಾಯಕರು ಪರದಾಡುತ್ತಿದ್ದಾರೆ. ಈ ನಡುವೆ ಗ್ರೀನ್‌ಲ್ಯಾಂಡ್‌ನ ರಾಜಕೀಯ ನಾಯಕರಿಂದ ಗಟ್ಟಿ ಪ್ರತಿಕ್ರಿಯೆ ಬಂದಿದೆ.

“ನಾವು ಅಮೆರಿಕನ್ನರಾಗಲು ಬಯಸುವುದಿಲ್ಲ, ನಾವು ಡ್ಯಾನಿಶ್ ಆಗಲೂ ಬಯಸುವುದಿಲ್ಲ, ನಾವು ಗ್ರೀನ್‌ಲ್ಯಾಂಡ್‌ನವರಾಗಲು ಬಯಸುತ್ತೇವೆ. ಗ್ರೀನ್‌ಲ್ಯಾಂಡ್‌ನ ಭವಿಷ್ಯವನ್ನು ಗ್ರೀನ್‌ಲ್ಯಾಂಡ್‌ನವರೇ ನಿರ್ಧರಿಸಬೇಕು” ಎಂದು ಗ್ರೀನ್‌ಲ್ಯಾಂಡ್‌ನ ಸಂಸತ್ತಿನ ಐದು ಪಕ್ಷಗಳ ನಾಯಕರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಇದರಲ್ಲಿ ಬೇರೆ ಯಾವುದೇ ದೇಶ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಆತುರದ ನಿರ್ಧಾರ ತೆಗೆದುಕೊಳ್ಳುವ ಒತ್ತಡವಿಲ್ಲದೆ, ವಿಳಂಬ ಮಾಡದೆ ಮತ್ತು ಇತರ ದೇಶಗಳ ಹಸ್ತಕ್ಷೇಪವಿಲ್ಲದೆ ನಮ್ಮ ದೇಶದ ಭವಿಷ್ಯವನ್ನು ನಾವೇ ನಿರ್ಧರಿಸಬೇಕು” ಅವರು ಒತ್ತಿ ಹೇಳಿದ್ದಾರೆ.

“ಅಮೆರಿಕ? ಇಲ್ಲ ಇಲ್ಲ..ನಾವು ಹಲವು ವರ್ಷಗಳ ಕಾಲ ವಸಾಹತುಶಾಹಿಯಾಗಿದ್ದೆವು. ನಾವು ಮತ್ತೆ ವಸಾಹತುಶಾಹಿಯಾಗಲು ಸಿದ್ಧರಿಲ್ಲ” ಎಂದು ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿರುವ 48 ವರ್ಷದ ಮೀನುಗಾರ ಜೂಲಿಯಸ್ ನೀಲ್ಸನ್ ಹೆಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

1953ರವರೆಗೆ ಡ್ಯಾನಿಶ್ ವಸಾಹತು ಪ್ರದೇಶವಾಗಿದ್ದ ಗ್ರೀನ್‌ಲ್ಯಾಂಡ್, 26 ವರ್ಷಗಳ ನಂತರ ಸ್ವರಾಜ್ಯವನ್ನು ಪಡೆದುಕೊಂಡಿತು ಮತ್ತು ಅಂತಿಮವಾಗಿ ಡೆನ್ಮಾರ್ಕ್‌ನೊಂದಿಗಿನ ತನ್ನ ಸಂಬಂಧವನ್ನು ಸಡಿಲಗೊಳಿಸುವ ಬಗ್ಗೆ ಯೋಚಿಸುತ್ತಿದೆ. ಇದನ್ನು ವಾಸ್ತವಿಕಗೊಳಿಸುವ ಕುರಿತು ಅನೇಕ ಗ್ರೀನ್‌ಲ್ಯಾಂಡ್‌ನವರು ಪ್ರಯತ್ನಿಸುತ್ತಿದ್ದಾರೆ.

ಪ್ರಸ್ತುತ ಅಧಿಕಾರದಲ್ಲಿರುವ ಒಕ್ಕೂಟವು ಆತುರದ ಸ್ವಾತಂತ್ರ್ಯದ ಪರವಾಗಿಲ್ಲ. 2025ರ ಶಾಸಕಾಂಗ ಚುನಾವಣೆಯಲ್ಲಿ ಶೇಕಡಾ 24.5ರಷ್ಟು ಮತಗಳನ್ನು ಗಳಿಸಿದ ಏಕೈಕ ವಿರೋಧ ಪಕ್ಷವಾದ ನಲೆರಾಕ್, ಸಾಧ್ಯವಾದಷ್ಟು ಬೇಗ ಸಂಬಂಧಗಳನ್ನು ಕಡಿತಗೊಳಿಸಲು ಬಯಸುತ್ತದೆ. ಆದರೆ, ಅದು ಜಂಟಿ ಘೋಷಣೆಗೆ ಸಹಿ ಹಾಕಿದೆ.

“ನಾವು ಹಲವು ವರ್ಷಗಳಿಂದ ಹೋರಾಡುತ್ತಿರುವ ಸ್ವಾತಂತ್ರ್ಯಕ್ಕಾಗಿ ತಯಾರಿ ಆರಂಭಿಸುವ ಸಮಯ ಬಂದಿದೆ” ಎಂದು ಸಂಸದ ಜುನೋ ಬರ್ತೆಲ್ಸನ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...