Homeಮುಖಪುಟಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನ ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ

- Advertisement -
- Advertisement -

ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರಮೋದಿಯವರು ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ ಎಂದು ಮಾಜ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದಿರುವ ಅವರು, “ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ” ಎಂದಿದ್ದಾರೆ.

ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರೆ.

ಇಂತಹ ಚಿಲ್ಲರೆ, ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎನ್ನುವುದು ಭ್ರಮೆ, ಮೂರ್ಖತನದ ಪರಮಾವಧಿ. ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಕನ್ನಡಪರ, ಪ್ರಗತಿಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದೇ ತಡ, ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಕಾಲ್ಪನಿಕ ಹೆಸರಗಳನ್ನು ತೆರವುಗೊಳಿಸಿ ಗೌರವ ಉಳಿಸಿಕೊಂಡಿದೆ ಎಂದಿದ್ದಾರೆ.

ಇಂತಹ ಲಜ್ಜಗೇಡಿ ನಡೆ ರಾಜ್ಯ ಬಿಜೆಪಿ ಸರಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ. ಪ್ರಧಾನಿ ಶ್ರೀ ಮೋದಿ ಅವರನ್ನು ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರುಗಳನ್ನು ಸೃಷ್ಟಿಸಲಾಯಿತಾ? ಅಥವಾ ಆ ಷಡ್ಯಂತ್ರಕ್ಕೆ ರಾಜ್ಯ ಸರಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ, ಇಂಥ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತಾ? ತಿಳಿಯಬೇಕಿದೆ ಎಂದಿದ್ದಾರೆ.

ಸುಳ್ಳುಗಳಿಗೆ ಆಯಸ್ಸು ಬಹಳ ಕಡಿಮೆ ಎನ್ನುವುದನ್ನು ಇನ್ನಾದರೂ ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ʼಸುಳ್ಳುಸೃಷ್ಟಿʼ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ.
ಇಡೀ ಒಕ್ಕಲಿಗ ಸಮುದಾಯವನ್ನು ಅಪಹಾಸ್ಯಕ್ಕೆ ಗುರಿ ಮಾಡುವ, ಇಡೀ ಸಮುದಾಯಕ್ಕೆ ಅಪಕೀರ್ತಿ ತರುವ ಹಾಗೂ ಟಿಪ್ಪುವನ್ನು ಕೊಂದ ಕಳಂಕವನ್ನು ಒಕ್ಕಲಿಗರಿಗೆ ಅಂಟಿಸುವ ಹೀನ ಕೆಲಸವನ್ನು ಬಿಜೆಪಿ ಮಾಡಲು ಹೊರಟಿದೆ. ಇದನ್ನು ಒಕ್ಕಲಿಗರು ಸಹಿಸರು ಎಂದು ಹೇಳಿದ್ದಾರೆ.

ಒಂದೆಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಒಕ್ಕಲಿಗರನ್ನು ಓಲೈಸುವ ಕೆಲಸ ಮಾಡುತ್ತಿರುವ ಬಿಜೆಪಿಗರು, ಇನ್ನೊಂದೆಡೆ ಕೊಲೆಯ ಕಳಂಕವನ್ನು ಮೆತ್ತಿ, ಅದೇ ಒಕ್ಕಲಿಗ ಸಮುದಾಯಕ್ಕೆ ಐತಿಹಾಸಿಕವಾಗಿ ಶಾಶ್ವತ ಕಪ್ಪುಚುಕ್ಕೆ ಮೆತ್ತಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಕ್ಕಾಗಿ ಮಾನಕ್ಕೂ ಅಂಜದ ಬಿಜೆಪಿ, ಸುಳ್ಳಿನ ಮೂಲಕ ಚುನಾವಣೆ ಗೆಲ್ಲಲು ಹೊರಟಂತಿದೆ. ರೋಡ್ ಶೋ ಮೂಲಕ ಮಂಡ್ಯದ ಜನರಿಗೆ ಮೋಡಿ ಮಾಡುವುದು ಎಂದರೆ ಇದೇನಾ? ಇಂಥ ವಿದ್ರೋಹಿ ಕೃತ್ಯಗಳನ್ನು ಒಕ್ಕಲಿಗರು ಮಾತ್ರವಲ್ಲ, ಸೌಹಾರ್ದತೆಯಿಂದ ರಾಜ್ಯದಲ್ಲಿ ಬಾಳುತ್ತಿರುವ ಯಾವ ಸಮುದಾಯವೂ ಸಹಿಸದು.
ತಾಳ್ಮೆ, ಸ್ವಾಭಿಮಾನ, ಸ್ವಂತಿಕೆ, ಸೇವೆ, ಸೌಹಾರ್ದತೆ, ಸಮನ್ವಯ ತತ್ವದ ತಳಹದಿಯ ಮೇಲೆ ಬೆಳೆದಿದೆ ಒಕ್ಕಲಿಗ ಸಮುದಾಯ. ದ್ವೇಷ ಮತ್ತು ಹಸಿಸುಳ್ಳುಗಳನ್ನು ಅವರೆಂದು ಪೋಷಿಸಿ ಬೆಳೆಸಿದವರಲ್ಲ. ಒಂದೀಡಿ ಸಮುದಾಯವನ್ನು ಇಂಥ ನಿಕೃಷ್ಟ ರಾಜಕಾರಣಕ್ಕೆ ಇಳಿಸಿ, ಬಳಸಬಹುದು ಎಂಬ ಪಾಪಿಚಿಂತನೆಯೇ ಬಿಜೆಪಿಯ ಹೊಲಸು ರಾಜಕಾರಣದ ಪರಾಕಾಷ್ಠೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ; ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ. #ಒಕ್ಕಲಿಗರ_ಮೇಲೆ_ಬಿಜೆಪಿ_ವಕ್ರದೃಷ್ಟಿ ಎಂಬ ಹ್ಯಾಸ್‌ಟ್ಯಾಗ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆದ ಸಾಲುಸಾಲು ಭ್ರಷ್ಟಾಚಾರದ ಹಗರಣಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...