Homeಮುಖಪುಟಮದುವೆ ಮೆರವಣಿಗೆ ವೇಳೆ ಕುದುರೆ ಮೇಲೆ ಕುಳಿತಿದ್ದ ವರ ಹೃದಯಾಘಾತದಿಂದ ಸಾವು: ವೀಡಿಯೋ ವೈರಲ್

ಮದುವೆ ಮೆರವಣಿಗೆ ವೇಳೆ ಕುದುರೆ ಮೇಲೆ ಕುಳಿತಿದ್ದ ವರ ಹೃದಯಾಘಾತದಿಂದ ಸಾವು: ವೀಡಿಯೋ ವೈರಲ್

- Advertisement -
- Advertisement -

ಇಂದೋರ್‌ನ 23 ವರ್ಷದ ಪರಿಣಿತಾ ಜೈನ್ ತನ್ನ ಸೋದರಸಂಬಂಧಿಯ ವಿವಾಹ ಸಮಾರಂಭದಲ್ಲಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದ ವಾರದಲ್ಲಿಯೇ ಎರಡನೆ ಘಟನೆ.

ಶುಕ್ರವಾರ ರಾತ್ರಿ ಪ್ರದೀಪ್ ಜಾಟ್ ಎಂದು ಗುರುತಿಸಲಾದ ವರನು ಕುದುರೆ ಸವಾರಿ ಮಾಡಿ ಮದುವೆ ಮೆರವಣಿಗೆಯೊಂದಿಗೆ ಮದುವೆ ಸ್ಥಳಕ್ಕೆ ಹೋಗುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆಯ ಮೇಲೆ ಕುಳಿತಿದ್ದಾಗ 26 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಶಿಯೋಪುರ ಪಟ್ಟಣದ ಜಾಟ್ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಪ್ರದೀಪ್ ಜಾಟ್ ಎಂದು ಗುರುತಿಸಲಾದ ವರನು ಕುದುರೆ ಸವಾರಿ ಮಾಡಿ ಮದುವೆ ಮೆರವಣಿಗೆಯೊಂದಿಗೆ ಮದುವೆ ಸ್ಥಳಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಆ ವ್ಯಕ್ತಿಯ ಅಂತಿಮ ಕ್ಷಣಗಳ ವಿಡಿಯೋ ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಸಾಂಪ್ರದಾಯಿಕ ಉಡುಪನ್ನು ಧರಿಸಿದ ಜಾಟ್ ಕುದುರೆಯ ಮೇಲೆ ವೇದಿಕೆಯತ್ತ ಬರುತ್ತಿರುವುದನ್ನು ಇದು ತೋರಿಸುತ್ತದೆ. ಅವನು ಕ್ರಮೇಣ ಮುಂದಕ್ಕೆ ಬಾಗಿ ಪ್ರಜ್ಞೆ ಕಳೆದುಕೊಳ್ಳುತ್ತಾನೆ.

ಒಬ್ಬ ಸಂಬಂಧಿ ಅವನನ್ನು ಕುದುರೆಯಿಂದ ಇಳಿಸಲು ಸಹಾಯ ಮಾಡಲು ಪ್ರಯತ್ನಿಸುತ್ತಾನೆ, ಆದರೆ ಜಾಟ್ ಸಹಾಯ ಪಡೆಯುವ ಮೊದಲೇ ಕುಸಿದು ಬೀಳುತ್ತಾನೆ.

ಕಾಂಗ್ರೆಸ್ಸಿನ ವಿದ್ಯಾರ್ಥಿ ವಿಭಾಗವಾದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಜಾಟ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಅವರು ಅಲ್ಲಿಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದಿಶಾ ಜಿಲ್ಲೆಯಲ್ಲಿ ನಡೆದ ಇದೇ ರೀತಿಯ ದುರಂತದ ಆರು ದಿನಗಳ ನಂತರ ಈ ಘಟನೆ ನಡೆದಿದ್ದು, ಇಂದೋರ್‌ನ 23 ವರ್ಷದ ಪರಿಣಿತಾ ಜೈನ್ ತನ್ನ ಸೋದರಸಂಬಂಧಿಯ ವಿವಾಹ ಸಮಾರಂಭದಲ್ಲಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದರು.

“ಲೆಹ್ರಾ ಕೆ ಬಲ್ಖಾ ಕೆ” ಹಾಡಿಗೆ ಜೈನ್ ನೃತ್ಯ ಮಾಡುತ್ತಿರುವಾಗ ವೀಡಿಯೊದಲ್ಲಿ ಸೆರೆಹಿಡಿಯಲಾದ ಆಘಾತಕಾರಿ ಸಾವನ್ನಪ್ಪುವ ಕ್ಷಣವು ನಂತರ ವೈರಲ್ ಆಗಿತ್ತು.

ಪ್ರಧಾನಿ ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ ವೆಬ್‌ಸೈಟ್ ನಿರ್ಬಂಧ; ಕೇಂದ್ರ ಸರ್ಕಾರದ ನಡೆ ಖಂಡಿಸಿದ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...