Homeಮುಖಪುಟಬಿಜೆಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲ; ಚು.ಆಯೋಗವನ್ನು ತರಾಟೆಗೆ ತೆಗೆದುಕೊಂಡ ಕಲ್ಕತ್ತಾ ಹೈಕೋರ್ಟ್

ಬಿಜೆಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲ; ಚು.ಆಯೋಗವನ್ನು ತರಾಟೆಗೆ ತೆಗೆದುಕೊಂಡ ಕಲ್ಕತ್ತಾ ಹೈಕೋರ್ಟ್

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಯಾವುದೇ ರೀತಿಯ ಅವಹೇಳನಕಾರಿ ಜಾಹೀರಾತುಗಳನ್ನು ಪ್ರಕಟಿಸದಂತೆ ಕಲ್ಕತ್ತಾ ಹೈಕೋರ್ಟ್ ಬಿಜೆಪಿಗೆ ನಿರ್ಬಂಧ ವಿಧಿಸಿದೆ, ಇದರ ಜೊತೆಗೆ ಟಿಎಂಸಿ ದೂರು ನೀಡಿದ್ದರೂ ಕ್ರಮವನ್ನು ಕೈಗೊಳ್ಳದ ಚುನಾವಣಾ ಆಯೋಗವನ್ನು ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಮೂರ್ತಿ ಸಬ್ಯಸಾಚಿ ಭಟ್ಟಾಚಾರ್ಯ ಅವರ ಏಕಸದಸ್ಯ ಪೀಠ, ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಪಕ್ಷವನ್ನು ಗುರಿಯಾಗಿಸಿಕೊಂಡು ಬಿಜೆಪಿ ನೀಡುತ್ತಿರುವ ಜಾಹೀರಾತುಗಳ ವಿರುದ್ಧ ಟಿಎಂಸಿ ಸಲ್ಲಿಸಿದ ದೂರುಗಳನ್ನು ಬಗೆಹರಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದೆ.

ಸೂಕ್ತ ಸಮಯದಲ್ಲಿ ಟಿಎಂಸಿಯ ದೂರುಗಳನ್ನು ಪರಿಹರಿಸಲು ಚುನಾವಣಾ ಆಯೋಗ ಸಂಪೂರ್ಣವಾಗಿ ವಿಫಲವಾಗಿದೆ. ತತ್‌ಕ್ಷಣದ ಅರ್ಜಿಯು ಕೇವಲ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸುವುದು ಮಾತ್ರವಲ್ಲ, ಪ್ರಾಥಮಿಕವಾಗಿ ಟಿಎಂಸಿ ಮತ್ತು ಅದರ ಕಾರ್ಯಕರ್ತರ ರಾಜಕೀಯ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುವ ಜಾಹೀರಾತುಗಳನ್ನು ಪ್ರಕಟಿಸದಂತೆ ಬಿಜೆಪಿಯನ್ನು ನಿರ್ಬಂಧಿಸುವುದಕ್ಕಾಗಿದೆ ಎಂದು ಹೇಳಿದೆ.

ಚುನಾವಣೆಯ ಹಿಂದಿನ ದಿನದ ಬಿಜೆಪಿಯ ಜಾಹೀರಾತುಗಳು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಮತ್ತು ಟಿಎಂಸಿ ಮತ್ತು ನಾಗರಿಕರ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಹಕ್ಕುಗಳಿಗೆ ಧಕ್ಕೆಯುಂಟುಮಾಡಿದೆ ಎಂದು ನ್ಯಾಯಾಲಯ ಗಮನಿಸಿದೆ.

ಟಿಎಂಸಿ ವಿರುದ್ಧ ಮಾಡಲಾದ ಆರೋಪಗಳು ಖಂಡಿತವಾಗಿಯೂ ನಿಂದನಾತ್ಮಕವಾಗಿವೆ ಹಾಗೂ ಎದುರಾಳಿಗಳ ವಿರುದ್ಧ ವೈಯಕ್ತಿಕ ದಾಳಿಗಳನ್ನು ನಡೆಸಿ ಅವರನ್ನು ಅವಮಾನಿಸುವ ಉದ್ದೇಶ ಹೊಂದಿವೆ, ಆದ್ದರಿಂದ ಅಂತಹ ಜಾಹೀರಾತುಗಳನ್ನು ಪ್ರಕಟಿಸದಂತೆ ತಡೆಯಾಜ್ಞೆ ವಿಧಿಸುವುದಾಗಿ ನ್ಯಾಯಾಲಯ ಹೇಳಿದೆ.

ಜಾಹೀರಾತುಗಳು ಅವಹೇಳನಕಾರಿಯಾದ ವೈಯಕ್ತಿಕ ದಾಳಿಗಳನ್ನು ಒಳಗೊಂಡಿವೆ ಮತ್ತು ಅಂತಹ ಜಾಹೀರಾತುಗಳನ್ನು ಪ್ರಕಟಿಸದಂತೆ ಬಿಜೆಪಿಯನ್ನು ನಿರ್ಬಂಧಿಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ. ಮುಕ್ತ, ನ್ಯಾಯಸಮ್ಮತ ಮತ್ತು ನಿಷ್ಕಳಂಕ ಚುನಾವಣಾ ಪ್ರಕ್ರಿಯೆಗಾಗಿ, ಮುಂದಿನ ಆದೇಶದವರೆಗೆ ಅಂತಹ ಜಾಹೀರಾತುಗಳನ್ನು ಪ್ರಕಟಿಸದಂತೆ ನಿರ್ಬಂಧಿಸಿರುವುದಾಗಿ ನ್ಯಾಯಾಲಯ ಹೇಳಿದೆ.

ಚುನಾವಣಾ ಸಮಯದಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ವಿರುದ್ಧ ಯಾವುದೇ ಪರಿಶೀಲಿಸದ ಮಾಹಿತಿಯನ್ನು ಮಾಧ್ಯಮಗಳು ಪ್ರಕಟಿಸುವುದನ್ನು ತಪ್ಪಿಸಬೇಕು ಎಂದು ನ್ಯಾಯಾಧೀಶರು ತೀರ್ಪಿನ ವೇಳೆ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂ ಪಕ್ಷದ ವಿರುದ್ಧ ಕೆಲವು ಪತ್ರಿಕೆಗಳಲ್ಲಿ ಪ್ರಕಟವಾದ ಜಾಹೀರಾತುಗಳನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ತಡೆಯಾಜ್ಞೆ ಕೋರಿ ಟಿಎಂಸಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ನಿಂದನಾತ್ಮಕ ಜಾಹೀರಾತುಗಳ ಬಗ್ಗೆ ಟಿಎಂಸಿ ಚುನಾವಣಾ ಆಯೋಗಕ್ಕೆ ದೂರುಗಳನ್ನು ನೀಡಿದೆ, ಆದರೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಟಿಎಂಸಿ ನ್ಯಾಯಾಲಯದ ಮೊರೆ ಹೋದ ಬಳಿಕವಷ್ಟೇ ಚುನಾವಣಾ ಆಯೋಗ ಬಿಜೆಪಿಗೆ ಶೋಕಾಸ್ ನೋಟಿಸ್ ನೀಡಿದೆ ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಇದನ್ನು ಓದಿ: ಬಿಜೆಪಿ ಸರ್ಕಾರದ ನೀತಿಗಳು ಅತಿ ಹೆಚ್ಚು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ: ವರದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...