Homeಕರ್ನಾಟಕಹೆಲಿಕಾಪ್ಟರ್ ಪತನದಲ್ಲಿ ತೀವ್ರ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ

ಹೆಲಿಕಾಪ್ಟರ್ ಪತನದಲ್ಲಿ ತೀವ್ರ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ

- Advertisement -
- Advertisement -

ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರು ಬಳಿಯ Mi17V5 ಹೆಲಿಕಾಪ್ಟರ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬುಧವಾರದಂದು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಈ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರ 12 ಮಂದಿ ಅಂದೇ ಮೃತಪಟ್ಟಿದ್ದರು. ದುರಂತದಲ್ಲಿ ವರುಣ್‌ ಸಿಂಗ್ ಅವರು 90% ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ:ಲಡಾಖ್‌ನಿಂದ ಚೀನಾ ಸೈನ್ಯವನ್ನು ಯಾವಾಗ ಹೊರಗೆ ಹಾಕುತ್ತೀರಿ: ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಈ ಬಗ್ಗೆ ಇಂದು ಟ್ವೀಟ್‌‌‌‌ ಮಾಡಿರುವ ಭಾರತೀಯ ವಾಯುಪಡೆ (IAF), “ಡಿಸೆಂಬರ್ 08 ರಂದು ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ಕೆಚ್ಚೆದೆಯ ವೀರ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು ಬೆಳಿಗ್ಗೆ ನಿಧನರಾದರು ಎಂದು ತಿಳಿಸಲು IAF ತೀವ್ರ ದುಃಖಿತವಾಗಿದೆ. IAF ಪ್ರಾಮಾಣಿಕವಾಗಿ ಸಂತಾಪ ವ್ಯಕ್ತಪಡಿಸುತ್ತದೆ ಮತ್ತು ದುಃಖಿತ ಕುಟುಂಬದೊಂದಿಗೆ ನಿಲ್ಲುತ್ತದೆ” ಎಂದು ಬರೆದಿದೆ.

ವರದಿಗಳ ಪ್ರಕಾರ, ಕಮಾಂಡ್ ಆಸ್ಪತ್ರೆಯು ಇತ್ತೀಚೆಗೆ ವಿಕ್ಟೋರಿಯಾ ಆಸ್ಪತ್ರೆಯ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯನ್ನು ಚರ್ಮ ಕಸಿ ಮಾಡಲು ವಿನಂತಿಸಿತ್ತು.

ಇಂಟೆನ್ಸಿವಿಸ್ಟ್‌ಗಳು ಮತ್ತು ಪ್ಲಾಸ್ಟಿಕ್ ಸರ್ಜನ್‌ಗಳು ಸೇರಿದಂತೆ ವೈದ್ಯರ ತಂಡ ವರುಣ್‌ ಸಿಂಗ್ ಅವರಿಗೆ ಚಿಕಿತ್ಸೆ ನೀಡುತ್ತಿತ್ತು. ಅವರನ್ನು ಡಿಸೆಂಬರ್ 9 ರಂದು ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಬೆಂಗಳೂರಿಗೆ ವಿಮಾನದಲ್ಲಿ ತರಲಾಗಿತ್ತು. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.

ಮೂಲಗಳ ಪ್ರಕಾರ, ವರುಣ್‌ ಸಿಂಗ್ ಅವರ ಅಂತ್ಯಕ್ರಿಯೆಯ ಬಗ್ಗೆ ತಕ್ಷಣದ ಮಾಹಿತಿ ಇಲ್ಲ. ಅವರ ಕುಟುಂಬ ಬೆಂಗಳೂರಿನಲ್ಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಪ್ಯಾಂಗೊಂಗ್ ತ್ಸೊದಲ್ಲಿ ಹೆಲಿಪ್ಯಾಡ್ ಹಾಗೂ ಸೈನ್ಯವನ್ನು ಒಟ್ಟುಗೂಡಿಸುತ್ತಿರುವ ಚೀನಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭಾ ಚುನಾವಣೆ: ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ 13 ರಾಜ್ಯಗಳ 88 ಕ್ಷೇತ್ರಗಳಲ್ಲಿ ಇಂದು...

0
ಲೋಕಸಭಾ ಚುನಾವಣೆಯ ಹಿನ್ನೆಲೆ ಎರಡನೇ ಹಂತದಲ್ಲಿ ಕರ್ನಾಟಕ ಸೇರಿದಂತೆ ಒಟ್ಟು 13 ರಾಜ್ಯಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಬೆಳಿಗ್ಗೆ 7ರಿಂದ  ಮತದಾನ...