Homeಮುಖಪುಟಮೇಲಂಗಿ ಕಳಚದೆ ದೇವಸ್ಥಾನ ಪ್ರವೇಶಿಸಿದ ಗುಂಪು: ಕೇರಳದಲ್ಲಿ ವಿನೂತನ ಪ್ರತಿಭಟನೆ

ಮೇಲಂಗಿ ಕಳಚದೆ ದೇವಸ್ಥಾನ ಪ್ರವೇಶಿಸಿದ ಗುಂಪು: ಕೇರಳದಲ್ಲಿ ವಿನೂತನ ಪ್ರತಿಭಟನೆ

- Advertisement -
- Advertisement -

ಪತ್ತನಂತಿಟ್ಟ (ಕೇರಳ): ಪುರುಷ ಭಕ್ತರು ದೇವಾಲಯ ಪ್ರವೇಶಿಸುವ ಮುನ್ನ ಶರ್ಟ್ ಅಥವಾ ಮೇಲಂಗಿ ಕಳಚಬೇಕು ಎಂಬ ದೀರ್ಘಕಾಲದ ಪದ್ಧತಿಯನ್ನು ವಿರೋಧಿಸಿ, ಭಾನುವಾರ (ಮಾ.23) ಇಲ್ಲಿನ ಕೊಯಿಕ್ಕಲ್ ಶ್ರೀ ಧರ್ಮಶಾಸ್ತ ದೇವಸ್ಥಾನಕ್ಕೆ ಗುಂಪೊಂದು ಶರ್ಟ್ ಕಳಚದೆ ಪ್ರವೇಶಿಸಿ ಪ್ರತಿಭಟಿಸಿದೆ.

ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ನಿರ್ವಹಿಸುವ ಪೆರುನಾಡುವಿನ ದೇವಾಲಯದ ಮುಂದೆ ಎಸ್‌ಎನ್‌ಡಿಪಿ ಸಂಯುಕ್ತ ಸಮರ ಸಮಿತಿಯ ಸದಸ್ಯರು (ಪ್ರತಿಭಟನಾಕಾರರು) ತಮ್ಮ ಶರ್ಟ್‌ಗಳನ್ನು ಕಳಚದೆ ಸರತಿ ಸಾಲಿನಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿದ ವಿಡಿಯೋಗಳು ವೈರಲ್ ಆಗಿದೆ.

ಪೊಲೀಸರು ಮತ್ತು ದೇವಾಲಯದ ಆಡಳಿತ ಮಂಡಳಿಯವರು ಆಕ್ಷೇಪ ವ್ಯಕ್ತಪಡಿಸದ ಕಾರಣ ಪ್ರತಿಭಟನೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಕೊನೆಗೊಂಡಿದೆ.

ಪುರುಷ ಭಕ್ತರು ದೇವಸ್ಥಾನ ಪ್ರವೇಶಿಸುವ ಮುನ್ನ ತಮ್ಮ ಮೇಲಂಗಿ ಕಳಚುವ ಕಡ್ಡಾಯ ಪದ್ಧತಿಯನ್ನು ಶಾಶ್ವತವಾಗಿ ಕೊನೆಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

“ಪ್ರತಿಭಟನೆ ಶಾಂತಿಯುತವಾಗಿತ್ತು. ಭಕ್ತರು ಸಾಂಪ್ರದಾಯಿಕವಾಗಿ ಈ ಪದ್ಧತಿಯನ್ನು ಅನುಸರಿಸುತ್ತಿದ್ದರೂ, ಯಾರಾದರೂ ತಮ್ಮ ಶರ್ಟ್ ಕಳಚದೆ ದೇವಾಲಯ ಪ್ರವೇಶಿಸಿದರೆ ಅದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಈಗಾಗಲೇ ಸ್ಪಷ್ಟಪಡಿಸಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ದೇವಾಲಯಗಳಲ್ಲಿ ಮೇಲಂಗಿ ಕಳಚುವ ಈ ಪದ್ಧತಿಯನ್ನು ರದ್ದುಗೊಳಿಸಬೇಕೆಂದು ಸ್ವಾಮಿ ಸಚ್ಚಿದಾನಂದ ಕರೆ ನೀಡಿದ ತಿಂಗಳುಗಳ ನಂತರ ಈ ಪ್ರತಿಭಟನೆ ನಡೆದಿದೆ.

ಸಮಾಜ ಸುಧಾರಕ ನಾರಾಯಣ ಗುರು ಸ್ಥಾಪಿಸಿದ ಪ್ರಸಿದ್ಧ ಶಿವಗಿರಿ ಮಠದ ಮುಖ್ಯಸ್ಥರಾದ ಸ್ವಾಮಿ ಸಚ್ಚಿದಾನಂದ ಅವರು ಈ ಪದ್ಧತಿಯನ್ನು ಸಾಮಾಜಿಕ ಅನಿಷ್ಟ ಎಂದು ಬಣ್ಣಿಸಿದ್ದರು ಮತ್ತು ಕಳೆದ ವರ್ಷ ಅದನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.

ಪುರುಷರು ಜನಿವಾರ ಧರಿಸಿದ್ದಾರೆಯೇ ಎಂದು ಪರಿಶೀಲಿಸಲು ಮೇಲಂಗಿ ಕಳಚುವ ಸಂಪ್ರದಾಯ ಪರಿಚಯಿಸಲಾಯಿತು ಎಂದು ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ.

ಶ್ರೀ ನಾರಾಯಣ ಧರ್ಮ ಪರಿಪಾಲನಾ (ಎಸ್‌ಎನ್‌ಡಿಪಿ) ಸಂಖ್ಯಾತ್ಮಕವಾಗಿ ಪ್ರಬಲವಾದ ಈಜವ (ಈಡಿಗ-ಬಿಲ್ಲವ) ಸಮುದಾಯವನ್ನು ಪ್ರತಿನಿಧಿಸುವ ಪ್ರಮುಖ ಸಂಘಟನೆಯಾಗಿದೆ.

ಸಂಸತ್ತನ್ನು ಮುಂದೂಡಲು ಬಿಜೆಪಿ ‘ಸಂಪೂರ್ಣ ನಕಲಿ’ ವಿಷಯವನ್ನು ಮಂಡಿಸಿದೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...