Homeಅಂತರಾಷ್ಟ್ರೀಯಹೆಚ್ಚುತ್ತಿರುವ ಕೊರೊನಾ: ಬಾಂಗ್ಲಾದೇಶದಲ್ಲಿ ಒಂದು ವಾರ ದೇಶವ್ಯಾಪಿ ಲಾಕ್‌ಡೌನ್‌‌

ಹೆಚ್ಚುತ್ತಿರುವ ಕೊರೊನಾ: ಬಾಂಗ್ಲಾದೇಶದಲ್ಲಿ ಒಂದು ವಾರ ದೇಶವ್ಯಾಪಿ ಲಾಕ್‌ಡೌನ್‌‌

- Advertisement -
- Advertisement -

ಕೊರೊನಾ ಪ್ರಕರಣಗಳು ಮತ್ತು ಸಾವುಗಳು ದೇಶಾದ್ಯಂತ ಹೆಚ್ಚಾಗುತ್ತಿರುವುದರಿಂದ ಬಾಂಗ್ಲಾದೇಶ ಸರ್ಕಾರ ಸೋಮವಾರದಿಂದ ಒಂದು ವಾರದವರೆಗೆ ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಧಿಸಲು ನಿರ್ಧರಿಸಿದೆ. ಶನಿವಾರ ಡಾಕಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಸ್ತೆ ಸಾರಿಗೆ ಸಚಿವ ಒಬೈದುಲ್ ಖಾದರ್ ಈ ಘೋಷಣೆಯನ್ನು ಮಾಡಿದ್ದಾರೆ ಎಂದು ಡಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ಬಾಂಗ್ಲಾದೇಶ ಶುಕ್ರವಾರ 6,830 ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಇದು ದೇಶದಲ್ಲಿ ದಾಖಲಾದ ಒಂದು ದಿನದ ಅತಿ ಹೆಚ್ಚು ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ ಒಟ್ಟು 624,594 ಜನರು ಸೋಂಕಿಗೆ ಒಳಗಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 50 ಜನರು ಸೋಕಿನಿಂದಾಗಿ ಮೃತಪಟ್ಟಿದ್ದು, ದೇಶದ ಒಟ್ಟು ಸಾವಿನ ಸಂಖ್ಯೆ 9,155 ಕ್ಕೆ ತಲುಪಿದೆ ಎಂದು ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಂತ್ರಸ್ತೆ ಪರ ವಕೀಲ ಜಗದೀಶ್ ವಿರುದ್ಧವೇ ದೂರು ನೀಡಿದ ಎಸ್‌ಐಟಿ!

ವೈರಸ್ ಹರಡುವುದನ್ನು ತಡೆಗಟ್ಟುವ ಪ್ರಯತ್ನದಲ್ಲಿ, ದೇಶಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಮತ್ತು ಸಾವುಗಳು ಹೆಚ್ಚಾಗುತ್ತಿರುವುದರಿಂದ ಸೋಮವಾರದಿಂದ ಏಳು ದಿನಗಳು ಲಾಕ್‌ಡೌನ್ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಆಡಳಿತಾರೂಢ ಅವಾಮಿ ಲೀಗ್‌ನ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಖಾದರ್‌ ಹೇಳಿದ್ದಾರೆ.

ಆದಾಗ್ಯೂ, ಅತ್ಯಗತ್ಯ ಮತ್ತು ತುರ್ತು ಸೇವೆಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಅವಧಿಯಲ್ಲಿ ಕಾರ್ಖಾನೆಗಳು ತೆರೆದಿರುತ್ತವೆ ಮತ್ತು ನೈರ್ಮಲ್ಯ ನಿಯಮಗಳನ್ನು ಅನುಸರಿಸುವ ಮೂಲಕ ಕಾರ್ಮಿಕರು ಪಾಳಿಯಲ್ಲಿ ಕೆಲಸ ಮಾಡಬಹುದಾಗಿದೆ.

“ಈ ಲಾಕ್‌ಡೌನ್ ಸಮಯದಲ್ಲಿ ಪ್ರತಿಯೊಂದು ಕಚೇರಿ ಮತ್ತು ನ್ಯಾಯಾಲಯವನ್ನು ಮುಚ್ಚಲಾಗುವುದು ಆದರೆ ಕೈಗಾರಿಕೆಗಳು ಮತ್ತು ಕಾರ್ಖಾನೆ ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸುತ್ತವೆ” ಎಂದು ರಾಜ್ಯ ಸಾರ್ವಜನಿಕ ಆಡಳಿತ ಸಚಿವ ಫರ್ಹಾದ್ ಹುಸೇನ್ ಅವರು ಡಾಕಾ ಟ್ರಿಬ್ಯೂನ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಗಂಡಾಳಿಕೆಯನ್ನು ಬಿಂಬಿಸುವ ಕೋರ್ಟುಗಳಿಗೆ ’ಸುಪ್ರೀಮ್’ ಕಡಿವಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...