Homeಕರ್ನಾಟಕಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಸೂಚನೆ: ‘ಎಲ್ಲರ ಕನ್ನಡ’ ಚರ್‍ಚೆಯ ಬಾಗವಾಗಿ ಮಾಡಲಾದ ಪ್ರಾಯೋಗಿಕ ವರದಿ ಇದಾಗಿದ್ದು, ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ.

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಮಂಡ್ಯ ಜಿಲ್ಲೆಯಲ್ಲಿ ದಲಿತರ ಮೇಲೆ ಹೆಚ್ಚಾಗುತ್ತಿರುವ ಹಲ್ಲೆಗಳನ್ನು ಕಂಡಿಸಿ, ಸವರ್‍ಣೀಯರ ದಬ್ಬಾಳಿಕೆಯನ್ನು ತಡೆಯಬೇಕೆಂದು ಆಗ್ರಹಿಸಿ ದಲಿತ ಮುಖಂಡರು ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ ನಡೆಸಿದ್ದಾರೆ.

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಕಳೆದ ಒಂದು ತಿಂಗಳ ಅವದಿಯಲ್ಲಿ ಎರಡು ಬಾರಿ ದಲಿತರ ಮೇಲೆ ಹಲ್ಲೆ ಪ್ರಕರಣಗಳು ನಡೆದಿವೆ. ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ಮಾಡಲಾಗಿತ್ತು. ದೇವಾಲಯ ಪ್ರವೇಶಿಸಿದ್ದರಿಂದ ಸವರ್‍ಣೀಯರು ಹಲ್ಲೆ ನಡೆಸಿರುವುದಾಗಿ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದಲ್ಲಿ ಹಲ್ಲೆ ನಡೆದಿದ್ದು ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಅಲ್ಲದೆ ದಲಿತರಿಗೆ ಕ್ಶೌರ ಮಾಡುವುದಿಲ್ಲ ಎಂದು ಸವಿತಾ ಸಮಾಜದ ವ್ಯಕ್ತಿಯೊಬ್ಬರು ಹೇಳುತ್ತಿರುವ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿತ್ತು.

ಪದೇ ಪದೇ ಇಂತಹ ಪ್ರಕರಣಗಳು ಜರುಗುತ್ತಿರುತ್ತಿರುವುದನ್ನು ದಲಿತ ಮುಕಂಡರು ಖಂಡಿಸಿದ್ದು, ಕೆ.ಆರ್‌.ಪೇಟೆ ತಾಲ್ಲೂಕಿನ ಪ್ರವಾಸಿ ಮಂದಿರ ಬಳಿ ಸೇರಿ ಪ್ರತಿಬಟನೆ ನಡೆಸಿದ್ದಾರೆ.

ರಾಜ್ಯ ಮಾದಿಗ ಸಮಾಜ ಸಂಗಟನೆಯ ಕೆ.ಆರ್‌.ಪೇಟೆ ತಾಲೂಕು ಅದ್ಯಕ್ಷರಾದ ಹೊಸಹೊಳಲು ದೇವರಾಜು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ದಲಿತರ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿದ್ದರೂ ಪೋಲೀಸ್ ಇಲಾಖೆ, ತಾಲೂಕು ಆಡಳಿತ ದಲಿತರಿಗೆ ರಕ್ಶಣೆ ಕೊಡುವುದರಲ್ಲಿ ವಿಪಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನಾದ್ಯಂತ ಕೆಲವು ಹಳ್ಳಿಗಳಲ್ಲಿ ದಲಿತರ ಮೇಲೆ ದಾಳಿ ನಡೆಯುತ್ತಿವೆ. ಆದರೆ ಜಿಲ್ಲಾಡಳಿತ, ತಾಲೂಕು ಆಡಳಿತ ಕೈಕಟ್ಟಿ ಕೂತಿವೆ. ಮುಂದಿನ ದಿನಗಳಲ್ಲಿ ಅದಿಕಾರಿಗಳ ನಿರ್ಲಕ್ಶ್ಯ ಮುಂದುವರಿದರೆ ತಾಲ್ಲೂಕಿನ ಎಲ್ಲಾ ದಲಿತ ಸಂಗಟನೆಗಳ ಜೊತೆ ಸೇರಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಚಲವಾದಿ ಮಹಾಸಬಾದ ಜಿಲ್ಲಾದ್ಯಕ್ಷರಾದ ಮಾಂಬಳ್ಳಿ ಜಯರಾಂ ಮಾತನಾಡಿ, “ತಾಲ್ಲೂಕಿನ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದ ದಲಿತ ಮಹಿಳೆಯ ಮೇಲೆ ಸವರ್‍ಣೀಯ ಪುರುಷನು ತನ್ನ ಪತ್ನಿಯ ಜೊತೆ ಸೇರಿ ಕ್ಶುಲ್ಲಕ ಕಾರಣಕ್ಕಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ತಪ್ಪಿತಸ್ತರನ್ನು ಕೂಡಲೇ ಬಂದಿಸಬೇಕು. ಅಲ್ಲದೇ ಹಲ್ಲೆಗೊಳಗಾದ ಕುಟುಂಬಕ್ಕೆ ಪೋಲೀಸ್ ಅದಿಕಾರಿಗಳು ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದರು.

ಕೆ.ಆರ್‌.ಪೇಟೆ ತಾಲ್ಲೂಕು ಡಾ.ಜಗಜೀವನರಾಂ ಸಂಗಟನೆಗಳ ಒಕ್ಕೂಟದ ಅದ್ಯಕ್ಷರಾದ ಹೊಸಹೊಳಲು ಪುಟ್ಟರಾಜು ಮಾತನಾಡಿ, “ಇಂದಿಗೂ ಕೆಲವು ಹಳ್ಳಿಗಳಲ್ಲಿ ಜಾತೀಯತೆ ಜೀವಂತವಾಗಿದೆ. ದಲಿತರನ್ನು ಕೀಳಾಗಿ ನೋಡುತ್ತಿದ್ದಾರೆ. ನಾವು ಸಹ ಮನುಷ್ಯರಲ್ಲವೇ?” ಎಂದು ಪ್ರಶ್ನಿಸಿದರು.

“ನಮಗೂ ಹೋರಾಟ ನಡೆಸುವ ಶಕ್ತಿ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಬರೆದಿರುವ ಸಂವಿದಾನದ ಮೇಲೆ ಗೌರವವಿರುವುದರಿಂದ ನಾವು ಯಾರ ಮೇಲೂ ದಬ್ಬಾಳಿಕೆ ಮಾಡದೇ ನ್ಯಾಯಯುತವಾಗಿ ನಡೆದುಕೊಳ್ಳುತ್ತಿದ್ದೇವೆ. ಆದ್ದರಿಂದ ಒಂದು ತಿಂಗಳಿಗೊಮ್ಮೆಯಾದರೂ ದಲಿತರ ಕುಂದುಕೊರತೆಗಳನ್ನು ನಿವಾರಿಸಲು ಪೊಲೀಸ್‌ ಇಲಾಖೆಯ ಹಿರಿಯ ಅದಿಕಾರಿಗಳು ಸಬೆ ನಡೆಸಿ ದಲಿತರಿಗೆ ನ್ಯಾಯ ಕೊಡಿಸಬೇಕು” ಎಂದು ಆಗ್ರಹಿಸಿದರು.

ಇದೇ ಸಂದರ್ಬದಲ್ಲಿ ಕೆ.ಆರ್‌.ಪೇಟೆ ತಾಲೂಕು ದಲಿತ ಸಂಗಟನೆಯ ಸದಸ್ಯರು, ತಾಲೂಕು ಆಡಳಿತ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಬದಲ್ಲಿ ತಾ.ಪಂ.ಮಾಜಿ ಅದ್ಯಕ್ಷರಾದ ಸೋಮಯ್ಯ, ಕೂಡಲಕುಪ್ಪೆ ರಾಜಯ್ಯ, ಕಜಾಂಚಿ ಪುಟ್ಟರಾಜು, ತಾ.ಸಂ. ಕಾರ್ಯದರ್ಶಿ ಮಹಾದೇವ, ಚಲುವರಾಜು, ಉಪಾದ್ಯಕ್ಷರಾದ ಮೋಹನ್, ಆಲೇನಹಳ್ಳಿ ಮಹದೇವ, ಚಟ್ಟಂಗೆರೆ ನಿಂಗರಾಜು, ಸೋಮೇಶ್, ಗ್ರಾ.ಪಂ. ಸದಸ್ಯರಾದ ಶಿವು, ಪಿ.ಬಿ.ಮಂಚನಹಳ್ಳಿ ಮಹೇಶ್, ರಾಯಸಮುದ್ರ ವೆಂಕಟೇಶ್‌ ಸೇರಿದಂತೆ ತಾಲೂಕು ದಲಿತ ಸಂಗಟನೆಯ ನೂರಾರು ಸದಸ್ಯರು ಪ್ರತಿಬಟನೆಯಲ್ಲಿ ಪಾಲ್ಗೊಂಡಿದ್ದರು.


ಇದನ್ನೂ ಓದಿರಿ: ಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲ್ಲರ ಕನ್ನಡದಲ್ಲಿ, ಮೊದಲ ಹಂತದಲ್ಲಿ,
    ೧) ಋ,ಐ,ಔ,ಃಃ
    ೨) ಮಹಾಪ್ರಾಣಗಳು
    ೩) ಙ,ಞ,ಷ
    ಬಳಸಬಾರದು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...