Homeಕರ್ನಾಟಕಶಿಕ್ಷಣದ ಸಾಮಾಗ್ರಿಗಳ ಮೇಲೆ ಜಿಎಸ್‌ಟಿ ಹೊರೆ: ‘ಶಿಕ್ಷಣ ವಿರೋಧಿ ನೀತಿ’ ಎಂದು ಎಸ್ಎಫ್ಐ ಆಕ್ರೋಶ

ಶಿಕ್ಷಣದ ಸಾಮಾಗ್ರಿಗಳ ಮೇಲೆ ಜಿಎಸ್‌ಟಿ ಹೊರೆ: ‘ಶಿಕ್ಷಣ ವಿರೋಧಿ ನೀತಿ’ ಎಂದು ಎಸ್ಎಫ್ಐ ಆಕ್ರೋಶ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಶಿಕ್ಷಣದ ಸಾಮಾಗ್ರಿಗಳಾದ ಪೆನ್ಸಿಲ್, ಷಾರ್ಪನರ್, ರೈಟಿಂಗ್‌-ಡ್ರಾಯಿಂಗ್-ಪ್ರಿಂಟಿಂಗ್ ಇಂಕ್, ಪೇಪರ್, ಚಾರ್ಟ್ಸ್, ಗ್ರಾಫ್ ಪೇಪರ್, ನೋಟ್ ಬುಕ್ ಮೇಲೆ ಜಿಎಸ್‌ಟಿ ಹಾಕಿರುವುದು ವಿದ್ಯಾರ್ಥಿಗಳಿಗೆ ‘ಹೊರೆಯಾಗಲಿದೆ’ ಎಂದು ಪ್ರತಿಪಾದಿಸಿರುವ ಭಾರತ ವಿಧ್ಯಾರ್ಥಿ ಫೆಡರೇಷನ್‌(ಎಸ್‌ಎಫ್‌ಐ) ಸರ್ಕಾರದ ಈ ನಡೆಯು ‘ಶಿಕ್ಷಣ ವಿರೋಧಿ ನೀತಿ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಹೊಸ ಜಿಎಸ್‌ಟಿ ಬಗ್ಗೆ ಎಸ್‌ಎಫ್‌ಐ ರಾಜ್ಯ ಸಮಿತಿ, “ಮೋದಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಶಿಕ್ಷಣದ ಮೇಲೆ ದಾಳಿಗಳು ಹೆಚ್ಚಾಗಿವೆ. ಶಿಕ್ಷಣದ ವ್ಯಾಪಾರೀಕರಣ ತೀವ್ರಗೊಂಡು ತಳಸಮುದಾಯದ ಮಕ್ಕಳು ಶಿಕ್ಷಣದಿಂದ ಹೊರ ಹೋಗುತ್ತಿರುವ ಹೆಚ್ಚಾಗುತ್ತಿದೆ” ಎಂದು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಂತಹ ವಿಷಮ ಸಂಧರ್ಭದಲ್ಲಿ ಅಪ್ರಜಾಸತ್ತತ್ಮಕವಾಗಿ, ಅವೈಜ್ಞಾನಿಕವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಎನ್ಇಪಿ ಜಾರಿಗೊಳಿಸುತ್ತಿದೆ. ಇದರ ನಡುವೆಯೇ ಒಕ್ಕೂಟ ಸರ್ಕಾರ ಶಿಕ್ಷಣದ ಸಾಮಾಗ್ರಿಗಳಾದ ಪೆನ್ಸಿಲ್, ಷಾರ್ಪನರ್, ರೈಟಿಂಗ್-ಡ್ರಾಯಿಂಗ್-ಪ್ರಿಂಟಿಂಗ್ ಇಂಕ್, ಪೇಪರ್ ಮೇಲೆ 18% ಜಿಎಸ್‌ಟಿ ಹೇರಿ, ಚಾರ್ಟ್ಸ್, ಗ್ರಾಫ್ ಪೇಪರ್, ನೋಟ್ ಬುಕ್ ಮೇಲೆ 12% ಜಿಎಸ್ಟಿ ತೆರಿಗೆ ಹೊರೆ ಹಾಕಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ” ಎಂದು ಎಸ್‌ಎಫ್‌ಐ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ‘ಮತ್ತೆ ಗಬ್ಬರ್‌ ಸಿಂಗ್ ಸ್ಟ್ರೈಕ್‌’: ಜಿಎಸ್‌ಟಿ ಏರಿಕೆಯ ಬಗ್ಗೆ ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಒಕ್ಕೂಟ ಸರ್ಕಾರದ ಈ ನೀತಿಯು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಶಿಕ್ಷಣದ ವೆಚ್ಚ ವಿಪರೀತ ಏರಿಕೆ ಮಾಡಲಿದೆ. ಇದು ತಳಸಮುದಾಯಗಳ ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸುವ ಕ್ರಮಗಳಾಗಿವೆ ಎಂದು ಎಸ್ಎಫ್‌ಐ ಆರೋಪಿಸಿದೆ.

“ಕೂಡಲೇ ಶಿಕ್ಷಣದ ಸಾಮಾಗ್ರಿಗಳ ಮೇಲೆ ವಿಧಿಸಿರುವ ಲೂಟಿಕೋರ ಜಿಎಸ್ಟಿ ತೆರಿಗೆಯನ್ನು ವಾಪಸ್ ಪಡೆಯಬೇಕು. ಶಿಕ್ಷಣದ ಸಮಗ್ರ ಅಭಿವೃದ್ದಿಗೆ ಒಟ್ಟು ರಾಷ್ಟ್ರೀಯ ಉತ್ಪನ್ನ ಜಿಡಿಪಿಯ 6% ಅಥವಾ ಕೇಂದ್ರ ಬಜೆಟ್ ನಲ್ಲಿ 10% ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು” ಎಂದು ಎಸ್ಎಫ್ಐ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...