ಜಿಎಸ್‌ಟಿ ಪರಿಹಾರ ನಿವಾರಣೆ: 42ನೇ ಜಿಎಸ್‌ಟಿ ಕೌನ್ಸಿಲ್ ಸಭೆ ವಿಫಲ

ಈ ವರ್ಷ ರಾಜ್ಯ ಸರ್ಕಾರಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರದಲ್ಲಿ ಕೇವಲ 20,000 ಕೋಟಿಗಳನ್ನು ಮಾತ್ರ ಬಿಡುಗಡೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂದು ನಡೆದ 42 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ನಂತರ ತಿಳಿಸಿದ್ದಾರೆ.

ಅದಾಗ್ಯೂ ಒಟ್ಟು ಪರಿಹಾರ, ಸುಮಾರು 97,000 ಸಾವಿರ ಕೋಟಿಯನ್ನು (ಕೊರೊನಾ ಪರಿಹಾರ ಸೇರಿದಂತೆ 2.35 ಲಕ್ಷ ಕೋಟಿಗೆ ಏರಿಕೆಯಾಗಿದೆ) ಮರುಪಾವತಿಸುವಲ್ಲಿನ ಅಡೆತಡೆಯನ್ನು ನಿವಾರಿಸುವಲ್ಲಿ ಈ ಸಭೆಯು ವಿಫಲವಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ಮರುಪಾವತಿ ವಿಧಾನದ ಬಗ್ಗೆ ಮುಂದಿನ ಸಭೆಯವರೆಗೆ (ಅ.12) ಯಾವುದೇ ನಿರ್ಧಾರ ಕೈಗೊಳ್ಳುವುದನ್ನು ಮುಂದೂಡಿದೆ. “ರಾಜ್ಯಗಳ ಪರಿಹಾರವನ್ನು ಪಾವತಿಸುವುದಕ್ಕೆ ಕೇಂದ್ರಕ್ಕೆ ಸಾಧ್ಯವಿಲ್ಲ. ಯಾಕೆಂದರೆ, ಕೊರೊನಾ ಬಿಕ್ಕಟ್ಟಿನಿಂದ ರಾಜ್ಯಗಳ ಆದಾಯದ ಇಳಿಕೆ ಶೇಕಡ 14ಕ್ಕಿಂತ ಕಡಿಮೆಯಾಗಿದೆ. ಹಾಗಾಗಿ ರಾಜ್ಯಗಳು ಈ ವರ್ಷ ಹೆಚ್ಚು ಗಳಿಸಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ – ಹೇಮಂತ್ ಸೊರೆನ್

41ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೋವಿಡ್‌ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ ಎಂದಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ದೇವರ ಕಾರ್ಯ ಎಂದು ಹೇಳುವ ಮೂಲಕ ಅಸಹಾಯಕತೆ ಪ್ರದರ್ಶಿಸಿದ್ದರು.

ಒಟ್ಟು 3 ಲಕ್ಷ ಕೋಟಿ ರೂಗಳ ಕುಸಿತವನ್ನು ಕೇಂದ್ರ ಎದುರಿಸುತ್ತಿದೆ. ಕೇವಲ 65000 ಕೋಟಿ ಸೆಸ್ ಸಂಗ್ರಹವಾಗುವ ನಿರೀಕ್ಷೆಯಿದ್ದು ಉಳಿದ 2.35 ಲಕ್ಷ ಕೋಟಿ ಕೊರತೆ ಬೀಳುತ್ತದೆ. ಹಾಗಾಗಿ ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022ರ ನಂತರ ಕೇಂದ್ರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ಕೇಂದ್ರವು ರಾಜ್ಯಗಳ ಮುಂದಿಟ್ಟಿತ್ತು.

ಇದನ್ನೂ ಓದಿ: ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಆರ್‌ಬಿಐ ನಿಂದ ಸಾಲ ಪಡೆದರೆ ಅಸಲು ಬಡ್ಡಿ ಎರಡನ್ನು ಕೇಂದ್ರ ತೀರಿಸಲಿದೆ. ಒಂದು ವೇಳೆ ಹೊರಗಿನಿಂದ 2.35 ಲಕ್ಷ ಸಾಲ ಪಡೆದರೆ ಕೇಂದ್ರ ಅಸಲನ್ನು ಮಾತ್ರ ತೀರಿಸುವುದಾಗಿಯೂ, ರಾಜ್ಯಗಳು ಬಡ್ಡಿ ಭರಿಸಬೇಕೆಂದು ಕೇಂದ್ರ ಹೇಳಿತ್ತು.

ಇವುಗಳಲ್ಲಿ ಮೊದಲ (ಸಾಲ ಪಡೆಯುವ) ಆಯ್ಕೆಯನ್ನು 21 ರಾಜ್ಯಗಳು ಒಪ್ಪಿಕೊಂಡಿವೆ. ಕೇಂದ್ರದ ಈ ಎರಡೂ ಆಯ್ಕೆಗಳನ್ನು ಬಿಜೆಪಿಯೇತರ 10 ರಾಜ್ಯಗಳು ನಿರಾಕರಿಸಿದ್ದು, ಕಾನೂನುಬದ್ಧವಾಗಿ ನ್ಯಾಯಯುತವಾಗಿ ನಮ್ಮ ಪಾಲಿನ ತೆರಿಗೆ ಹಣ ನೀಡಿ ಎಂದು ಪಟ್ಟು ಹಿಡಿದಿವೆ. ಕೇರಳವಂತು ಕೇಂದ್ರ ಹಣ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಜಿಎಸ್‌ಟಿ ಪಾಲು ನೀಡುವಂತೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.


ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

Donate

ಈ ಲೇಖನ, ಈ ವೆಬ್‌ಸೈಟ್ ನಿಮಗೆ ಇಷ್ಟವಾಯಿತೇ? ನಿಮ್ಮ ಬೆಂಬಲ ಇದಕ್ಕೆ ಅಗತ್ಯ.

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

+ posts