Homeಮುಖಪುಟಜಿಎಸ್‌ಟಿ ಬಿಕ್ಕಟ್ಟು: 1.1 ಲಕ್ಷ ಕೋಟಿ ರೂ. ಸಾಲ ಪಡೆಯಲು ಒಪ್ಪಿದ ಕೇಂದ್ರ!

ಜಿಎಸ್‌ಟಿ ಬಿಕ್ಕಟ್ಟು: 1.1 ಲಕ್ಷ ಕೋಟಿ ರೂ. ಸಾಲ ಪಡೆಯಲು ಒಪ್ಪಿದ ಕೇಂದ್ರ!

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತೆಲಂಗಾಣದ ಹಣಕಾಸು ಸಚಿವ ಟಿ. ಹರೀಶ್ ರಾವ್, ಸಾಲದ ಹಣವನ್ನು ಅನುದಾನದ ರೂಪದಲ್ಲಿ ತೋರಿಸುವುದರಿಂದ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಲಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಜಿಎಸ್‌ಟಿ ಜಾರಿಯಿಂದಾಗಿ ರಾಜ್ಯ ಸರ್ಕಾರಗಳಿಗೆ ಉಂಟಾಗಿರುವ ಆದಾಯ ನಷ್ಟವನ್ನು ಸರಿದೂಗಿಸಲು 1.1 ಲಕ್ಷ ಕೋಟಿ ರೂ. ಸಾಲ ಪಡೆಯಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಇದರ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಗಳಿಗೆ ಪತ್ರವನ್ನು ಬರೆದ್ದಾರೆ.

ಜಿಎಸ್‌ಟಿ ಪರಿಹಾರ ನೀಡಲು ಹಣಕಾಸಿನ ಕೊರತೆಯಿದೆ ಎಂದಿದ್ದ ಕೇಂದ್ರವು, ರಾಜ್ಯ ಸರ್ಕಾರಗಳಿಗೆ ಮಾರುಕಟ್ಟೆ ಸಾಲಗಳನ್ನು ಪಡೆಯಲು ಸೂಚಿಸಿದ್ದವು. ಇದಕ್ಕೆ ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳು ಒಪ್ಪಿತ್ತಾದರೂ, ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳು ಅಸಮಧಾನಗೊಂಡಿದ್ದವು. ಇದೀಗ ತನ್ನ ನಿರ್ಧಾರವನ್ನು ಬದಲಿಸಿರುವ ಕೇಂದ್ರವು, ರಾಜ್ಯ ಸರಕಾರಗಳ ನಡುವಿನ ಬಿಕ್ಕಟ್ಟನ್ನು ಶಮನಗೊಳಿಸಲು ಪ್ರಯತ್ನಿಸಿದೆ.

ಇದನ್ನೂ ಓದಿ: ಜಿಎಸ್‌ಟಿ ಪಾಲು ನೀಡುವಂತೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ

ಪ್ರಸ್ತುತ ಕೇಂದ್ರ ಸರಕಾರವು ರಾಜ್ಯಗಳಿಗೆ ಅನುದಾನ ಸೆಸ್ ಬಿಡುಗಡೆಯಡಿ ನೀಡಲಿದೆ. ಹಾಗಾಗಿ ಕೇಂದ್ರ ಸರಕಾರವು ಸಾಲದ ಹಣವನ್ನು ರಾಜ್ಯಗಳಿಗೆ ನೀಡುವ ಅನುದಾನದ ರೂಪದಲ್ಲಿ ತೋರಿಸಲಿದೆ.

ಸಮಸ್ಯೆಯನ್ನು ಬಗೆಹರಿಸಲು ರಚನಾತ್ಮಕ ಸಹಕಾರವನ್ನು ನೀಡಿರುವುದಕ್ಕಾಗಿ ರಾಜ್ಯಗಳಿಗೆ ಕೃತಜ್ಞತೆ ಸಲ್ಲಿಸಿರುವ ನಿರ್ಮಲಾ ಸೀತಾರಾಮನ್, “ಕೇಂದ್ರ ಸರಕಾರ ಕಂತುಗಳಲ್ಲಿ ಅಗತ್ಯವಿರುವ ಸಾಲವನ್ನು ಪಡೆದುಕೊಳ್ಳಲಿವೆ ಹಾಗೂ ಅದನ್ನು ರಾಜ್ಯಗಳಿಗೆ ಒಂದಾದ ಬಳಿಕ ಒಂದರಂತೆ ಸಾಲಗಳನ್ನು ವರ್ಗಾಯಿಸಲಿವೆ. ಇದರಿಂದಾಗಿ ಸಮನ್ವಯತೆ ಹಾಗೂ ಸರಳವಾದ ಸಾಲ ದೊರೆಯುವಿಕೆ ಸಾಧ್ಯವಾಗಲಿದೆ. ಅಷ್ಟೇ ಅಲ್ಲದೆ ಅನುಕೂಲಕರವಾದ ಬಡ್ಡಿದರವೂ ಕೂಡಾ ಲಭ್ಯವಾಗಲಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತೆಲಂಗಾಣದ ಹಣಕಾಸು ಸಚಿವ ಟಿ. ಹರೀಶ್ ರಾವ್, ಸಾಲದ ಹಣವನ್ನು ಅನುದಾನದ ರೂಪದಲ್ಲಿ ತೋರಿಸುವುದರಿಂದ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಲಿದೆ ಎಂದು ಹೇಳಿದ್ದಾರೆ. ಕೇರಳದ ಹಣಕಾಸು ಸಚಿವ ಥಾಮಸ್ ಐಸಾಕ್ ಕೂಡಾ ಅಸಮಧಾನ ವ್ಯಕ್ತಪಡಿಸಿದ್ದು, ”2023ರಲ್ಲಿ ರಾಜ್ಯಗಳಿಗೆ ಎಷ್ಟು ಜಿಎಸ್‌ಟಿ ಪರಿಹಾರ ನೀಡಲಾಗುವುದೆಂಬ ಬಗ್ಗೆ ಕೇಂದ್ರ ಸರಕಾರ ಸ್ಪಷ್ಟನೆ ನೀಡಬೇಕು” ಎಂದು ಕೇಳಿದ್ದಾರೆ.

ಇದನ್ನೂ ಓದಿ: ಜೆಪಿ ಐಟಿಸೆಲ್‌‌ನ ನಿಜಸ್ವರೂಪ ಬಿಚ್ಚಿಡುತ್ತಿರುವ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...