Homeಎಕಾನಮಿಜಿಎಸ್‌ಟಿ ಪರಿಹಾರ: ಕೇಂದ್ರದ ಸಾಲದ ಆಯ್ಕೆಯನ್ನು ಒಪ್ಪಿಕೊಂಡ 13 ರಾಜ್ಯಗಳು

ಜಿಎಸ್‌ಟಿ ಪರಿಹಾರ: ಕೇಂದ್ರದ ಸಾಲದ ಆಯ್ಕೆಯನ್ನು ಒಪ್ಪಿಕೊಂಡ 13 ರಾಜ್ಯಗಳು

ಆದರೆ, ಕೇಂದ್ರದ ಈ ಎರಡೂ ಆಯ್ಕೆಗಳನ್ನು ಬಿಜೆಪಿಯೇತರ ರಾಜ್ಯಗಳು ವಿರೋಧಿಸಿವೆ. ಕಾನೂನುಬದ್ಧವಾಗಿ ನ್ಯಾಯಯುತವಾಗಿ ನಮ್ಮ ಪಾಲಿನ ತೆರಿಗೆ ಹಣ ನೀಡಿ ಎಂದು ಪಟ್ಟು ಹಿಡಿದಿವೆ. ಕೇರಳವಂತು ಕೇಂದ್ರ ಹಣ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಜಿಎಸ್‌ಟಿ ಪರಿಹಾರ ಹಣವನ್ನು ನೀಡಲು ಸಾದ್ಯವಿಲ್ಲ ಎಂದು, ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿದ್ದ ಸಾಲದ ಆಯ್ಕೆಯನ್ನು ದೇಶದ 13 ರಾಜ್ಯಗಳು ಒಪ್ಪಿಕೊಂಡಿವೆ.

ಆಂಧ್ರಪ್ರದೇಶ, ಬಿಹಾರ, ಗುಜರಾತ್, ಹರಿಯಾಣ, ಕರ್ನಾಟಕ, ಮಧ್ಯಪ್ರದೇಶ, ಮೇಘಾಲಯ, ಸಿಕ್ಕಿಂ, ತ್ರಿಪುರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಒಡಿಶಾ ರಾಜ್ಯಗಳು ಕೇಂದ್ರ ಸರ್ಕಾರದ ಸಾಲ ಪಡೆಯುವಿಕೆಯ 1ನೇ ಆಯ್ಕೆಯ ಪ್ರಸ್ತಾವವನ್ನು ಒಪ್ಪೊಕೊಂಡಿವೆ. ಆದರೆ ಮಣಿಪುರ ಮಾತ್ರ ಆಯ್ಕೆ 2 ಅನ್ನು ಆರಿಸಿದೆ.

ಇನ್ನೂ ಆರು ರಾಜ್ಯಗಳಾದ, ಗೋವಾ, ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಹಿಮಾಚಲ ಪ್ರದೇಶ – ಒಂದು ಅಥವಾ ಎರಡು ದಿನಗಳಲ್ಲಿ ತಮ್ಮ ಆಯ್ಕೆಯನ್ನು ನೀಡಲಿವೆ ಎಂಬುದನ್ನು ಹಣಕಾಸು ಸಚಿವಾಲಯದ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಟ್ಟು 3 ಲಕ್ಷ ಕೋಟಿ ರೂಗಳ ಕುಸಿತವನ್ನು ಕೇಂದ್ರ ಎದುರಿಸುತ್ತಿದೆ. ಕೇವಲ 65000 ಕೋಟಿ ಸೆಸ್ ಸಂಗ್ರಹವಾಗುವ ನಿರೀಕ್ಷೆಯಿದ್ದು ಉಳಿದ 2.35 ಲಕ್ಷ ಕೋಟಿ ಕೊರತೆ ಬೀಳುತ್ತದೆ. ಹಾಗಾಗಿ ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022ರ ನಂತರ ಕೇಂದ್ರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ಕೇಂದ್ರವು ರಾಜ್ಯಗಳ ಮುಂದಿಟ್ಟಿದೆ.

ಇದನ್ನೂ ಓದಿ: ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಆರ್‌ಬಿಐ ನಿಂದ ಸಾಲ ಪಡೆದರೆ ಅಸಲು ಬಡ್ಡಿ ಎರಡನ್ನು ಕೇಂದ್ರ ತೀರಿಸಲಿದೆ. ಒಂದು ವೇಳೆ ಹೊರಗಿನಿಂದ 2.35 ಲಕ್ಷ ಸಾಲ ಪಡೆದರೆ ಕೇಂದ್ರ ಅಸಲನ್ನು ಮಾತ್ರ ತೀರಿಸುವುದಾಗಿಯೂ, ರಾಜ್ಯಗಳು ಬಡ್ಡಿ ಭರಸಬೇಕೆಂದು ಕೇಂದ್ರ ಹೇಳಿದೆ.

ಕೆಲವು ರಾಜ್ಯಗಳು ತಮ್ಮ ಅಭಿಪ್ರಾಯಗಳನ್ನು ಜಿಎಸ್‌ಟಿ ಕೌನ್ಸಿಲ್ ಅಧ್ಯಕ್ಷರಿಗೆ ಸಲ್ಲಿಸಿದ್ದು, ಆಯ್ಕೆಗಳ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಆಗಸ್ಟ್ 27 ರಂದು ನಡೆದ ಸಭೆಯಲ್ಲಿ ಜಿಎಸ್‌ಟಿ ಕೌನ್ಸಿಲ್ ಈ ಎರಡು ಆಯ್ಕೆಗಳನ್ನು ನಿರ್ಧರಿಸಿತ್ತು.

ಆದರೆ, ಕೇಂದ್ರದ ಈ ಎರಡೂ ಆಯ್ಕೆಗಳನ್ನು ಬಿಜೆಪಿಯೇತರ ರಾಜ್ಯಗಳು ವಿರೋಧಿಸಿವೆ. ಕಾನೂನುಬದ್ಧವಾಗಿ ನ್ಯಾಯಯುತವಾಗಿ ನಮ್ಮ ಪಾಲಿನ ತೆರಿಗೆ ಹಣ ನೀಡಿ ಎಂದು ಪಟ್ಟು ಹಿಡಿದಿವೆ. ಕೇರಳವಂತು ಕೇಂದ್ರ ಹಣ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದೆ.

ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಿಎಸ್‌‌ಟಿ ಪರಿಹಾರದ ಕೊರತೆಯನ್ನು ಪೂರೈಸಲು ಕೇಂದ್ರವು ಸಾಲ ಪಡೆಯಬೇಕು ಎಂದು ಸಲಹೆ ನೀಡಿದ್ದರು.

ಈ ಕುರಿತು ಪಿಣರಾಯಿ ವಿಜಯನ್, “ರಾಜ್ಯಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಿ. ರಾಜ್ಯಗಳಿಗೆ ಎದುರಾಗಿರುವ ತೊಂದರೆಯನ್ನು ನೀಗಿಸಲು ಸಹಕಾರಿಯಾಗಬೇಕೆಂದು, ಮತ್ತು  ರಾಜ್ಯಗಳ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಪತ್ರ ಬರೆದಿದ್ದೇನೆ” ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ – ಹೇಮಂತ್ ಸೊರೆನ್

ಜಿಎಸ್‌ಟಿ ಪರಿಹಾರ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಯಲ್ಲಿ ಈಗಾಗಲೇ ಹಲವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಜಾರ್ಖಂಡ್ ಸಿಎಂ ಕೂಡ ಅವರ ಸಾಲಿಗೆ ಸೇರಿದ್ದಾರೆ. “ಕೇಂದ್ರ ಸರ್ಕಾರವು ರಾಜ್ಯಗಳನ್ನು ಬಂಜರುಗೊಳಿಸಿದೆ ಎಂದು ತಮ್ಮ ಪತ್ರದಲ್ಲಿ ಸೊರೆನ್ ತಿಳಿಸಿದ್ದರು. ಕೇಂದ್ರ ಸಂಸತ್ತಿನಲ್ಲಿ ನಡೆದ ಎಲ್ಲಾ ಕೌನ್ಸಿಲ್ ಸಭೆಗಳಲ್ಲೂ ರಾಜ್ಯಗಳಿಗೆ ದ್ರೋಹವಾಗಿದೆ ಎಂದು ಕಿಡಿಕಾರಿ, ಸಹಕಾರಿ ಒಕ್ಕೂಟ ವ್ಯವಸ್ಥೆಯ ಮನೋಭಾವಕ್ಕೆ ವಿರುದ್ಧವಾಗಿ ನಡೆಯುವ ಕೇಂದ್ರ ಸರ್ಕಾರದ ನಡೆ ದೇಶದ ಸಾರ್ವಭೌಮಕ್ಕೆ ದಕ್ಕೆ ತರುತ್ತದೆ ಎಂದಿದ್ದರು.”

ತಮ್ಮ ಹಕ್ಕುಗಳಿಗಾಗಿ, ಕೇಂದ್ರದಿಂದ ಬರಬೇಕಾದ ಬಿಎಸ್‌ಟಿ ಪರಿಹಾರಕ್ಕಾಗಿ ಬಿಜೆಪಿಯೇತರ ಸರ್ಕಾರಗಳು ಪ್ರಧಾನಿಗೆ ಪತ್ರ ಬರೆದು ಪರಿಹಾರ ಕೇಳುತ್ತಿದ್ದಾರೆ. ಆದರೆ ಬಿಜೆಪಿ ಆಡಳಿತವಿರುವ ಕರ್ನಾಟಕ ಸರ್ಕಾರ ಮಾತ್ರ ಕೇಂದ್ರ ನೀಡಿದ ಮೊದಲ ಆಯ್ಕೆ ತೆಗೆದುಕೊಂಡಿದ್ದು, ಸಾಲ ಪಡೆಯಲು ಸಿದ್ಧವಾಗಿದೆ.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.


ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...