Homeದಲಿತ್ ಫೈಲ್ಸ್ಗುಬ್ಬಿ: ದಸಂಸ ಮುಖಂಡ ನರಸಿಂಹಮೂರ್ತಿ ಭೀಕರ ಕೊಲೆ

ಗುಬ್ಬಿ: ದಸಂಸ ಮುಖಂಡ ನರಸಿಂಹಮೂರ್ತಿ ಭೀಕರ ಕೊಲೆ

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ಮಚ್ಚು, ಲಾಂಗ್‌ನಿಂದ ಹಲ್ಲೆ ನಡೆಸಿ ದಲಿತ ಸಂಘರ್ಷ ಸಮಿತಿ ಮುಖಂಡ ಜಿ.ಸಿ.ನರಸಿಂಹಮೂರ್ತಿ (ಕುರಿಮೂರ್ತಿ) (50) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಹೆದ್ದಾರಿ ಪಕ್ಕದಲ್ಲಿ ಕೊಲೆ ನಡೆದಿದೆ. ಹೆದ್ದಾರಿ ಪಕ್ಕದಲ್ಲೇ ಸ್ನೇಹಿತರ ಜತೆ ಟೀ ಕುಡಿಯುತ್ತ ಕುಳಿತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿ, ಕೊಲೆ ಮಾಡಿದ್ದಾರೆ.

ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಹಿಂದೆ ಪಟ್ಟಣ ಪಂಚಾಯಿತಿ ಸದಸ್ಯರಾಗಿ ನರಸಿಂಹಮೂರ್ತಿ ಅವರು ಸೇವೆ ಸಲ್ಲಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಅದರಲ್ಲೂ ಗುಬ್ಬಿ ತಾಲ್ಲೂಕಿನಲ್ಲಿ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯಗಳು ಮತ್ತೆ ಮತ್ತೆ ವರದಿಯಾಗುತ್ತಲೇ ಇವೆ. ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಕೆಲವು ವಾರಗಳ ಹಿಂದೆ ಇಬ್ಬರು ದಲಿತ ಯುವಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕರಿಶೆಟ್ಟಿ ಹಟ್ಟಿ ಬಳಿ ಎರಡು ವಾರಗಳ ಹಿಂದೆ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು. ಈ ಘಟನೆಗಳ ಬೆನ್ನಲ್ಲೇ ಮತ್ತೊಂದು ಪ್ರಕರಣ ನಡೆದಿದೆ. ಆರೋಪಿಗಳು ಯಾರೆಂದು ತನಿಖೆಯಾಗಬೇಕಿದೆ

ಪೆದ್ದನಹಳ್ಳಿ ಪ್ರಕರಣ

ಪೆದ್ದನಹಳ್ಳಿಯಲ್ಲಿ ಗ್ರಾಮದಲ್ಲಿ ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿ ಗ್ರಾಮದ ಗಿರೀಶ್ (ಮಾದಿಗ ಸಮುದಾಯ), ಮಂಚಲದೊರೆ ಗ್ರಾಮದ ಗಿರೀಶ್‌ (ನಾಯಕ ಸಮುದಾಯ) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸವರ್ಣೀಯರನ್ನು ಬಂಧಿಸಲಾಗಿದೆ. (ಪೆದ್ದನಹಳ್ಳಿ ಪ್ರಕರಣ ಕುರಿತು ಓದಿರಿ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!)

ತುಮಕೂರು: ಮತ್ತೊಂದು ಕೊಲೆ ಪ್ರಕರಣ

ತುಮಕೂರು ತಾಲ್ಲೂಕು ಕೋರಾ ಹೋಬಳಿ ಜಕ್ಕೇನಹಳ್ಳಿ ಗ್ರಾಮದಲ್ಲಿ ಏಪ್ರಿಲ್‌ 29ನೇ ತಾರೀಕು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿತ್ತು. ಊರಿನ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿಯ ಚಾನೆಲ್‌ನಲ್ಲಿ ಮಾದಿಗ ಸಮುದಾಯದ ಮುತ್ತುರಾಜ (26) ಎಂಬ ಯುವಕನ ಶವ ಪತ್ತೆಯಾಗಿದ್ದರು. ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆಂದೇ ಬಿಂಬಿಸಲಾಗಿತ್ತು. ಆದರೆ ಮೇ 17ರಂದು ಎಸ್‌.ಸಿ. ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಸವರ್ಣೀಯ ವ್ಯಕ್ತಿಯನ್ನು ಆರೋಪಿ ಎಂದು ಗುರುತಿಸಲಾಗಿದೆ. (ಸಂಪೂರ್ಣ ಸುದ್ದಿ ಇಲ್ಲಿ ಓದಿರಿ: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...