Homeಮುಖಪುಟಜೆಡಿಎಸ್ ತೊರೆದಿದ್ದ ಗುಬ್ಬಿ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್ ತೊರೆದಿದ್ದ ಗುಬ್ಬಿ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ಮೂರು ದಿನಗಳ ಹಿಂದೆಯಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಗುಬ್ಬಿ ಶಾಸಕ ಶ್ರೀನಿವಾಸ್‌ರವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಪಕ್ಷದ ಶಾಲು ಹೊದಿಸಿ, ಪಕ್ಷದ ಬಾವುಟ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

2004 ರಿಂದ ಶ್ರೀನಿವಾಸ್‌ರವರು ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2004ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಜಯ ಗಳಿಸಿದ್ದ ಅವರು ಆನಂತರದ ಮೂರು ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಈ ಬಾರಿ ಕಾಂಗ್ರೆಸ್ ಚಿಹ್ನೆಯಡಿ ಸ್ಪರ್ಧಿಸಿಲು ಬಯಸಿದ್ದಾರೆ.

ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ಶ್ರೀನಿವಾಸ್‌ರವರು, “ನಾನು ಮೂಲತಃ ಕಾಂಗ್ರೆಸ್. ಜೆಡಿಎಸ್ ಸೇರಿದ ನಂತರ ನನ್ನನ್ನು ಮೂಲೆಗುಂಪು ಮಾಡಲಾಯಿತು. ನಾನು ಶಾಸಕನಾಗಿರುವಾಗಲೇ ಬೇರೆಯವರಿಗೆ ಟಿಕೆಟ್ ಘೋಷಿಸಲಾಯಿತು. ಈ ಎಲ್ಲ ಅವಮಾನಗಳಿಂದ ಬೇಸತ್ತು ಕಾಂಗ್ರೆಸ್ ಸೇರುತ್ತಿದ್ದೇನೆ” ಎಂದಿದ್ದಾರೆ.

ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ‘ಭಾರತ್ ಜೋಡೋ’ ಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದ್ದ ಅವರು ಪಾದಯಾತ್ರೆಯನ್ನು ಸ್ವಾಗತಿಸಿದ್ದರು. ಆಗ “ರಾಹುಲ್ ಗಾಂಧಿ ಅವರು ರಾಷ್ಟ್ರಮಟ್ಟದ ನಾಯಕರಾಗಿದ್ದಾರೆ. ಭಾರತ್ ಜೋಡೋ ಯಾತ್ರೆ ಒಳ್ಳೆ ಉದ್ದೇಶ ಇಟ್ಟುಕೊಂಡು ನಡೆಯುತ್ತಿದೆ” ಎಂದಿದ್ದರು.

ಇದನ್ನೂ ಓದಿ: ಗೌರಿಶಂಕರ್‌ ಆಯ್ಕೆ ಅಸಿಂಧು ಆದೇಶವನ್ನ ಒಂದು ತಿಂಗಳು ಅಮಾನತಿನಲ್ಲಿರಿಸಿದ ಹೈಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...