Homeಮುಖಪುಟಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ವಿಡಿಯೋ...

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ವಿಡಿಯೋ ನೋಡಿ.

- Advertisement -
- Advertisement -

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವೇ ಮಹಿಳೆಯೊಬ್ಬರ ಆಕ್ರಂದನ ಮುಗಿಲು ಮುಟ್ಟಿದೆ. ತಾನೇ ನೀರು ಹೊಯ್ದು ಬೆಳೆಸಿದ್ದ ಸಿದ್ದಮ್ಮ ಅವರಿಗೆ ಸೇರಿದ್ದ ತೆಂಗು ಮತ್ತು ಅಡಿಕೆ ಮರಗಳು ಕಣ್ಣೆದುರೇ ನೆಲಕ್ಕುರುಳಿವೆ. ಜಿಲ್ಲಾಧಿಕಾರಿ ಆದೇಶವನ್ನೇ ಧಿಕ್ಕರಿಸಿದ ತಹಶೀಲ್ದಾರ್ ಮುಂದೆ ನಿಂತು ಸಿದ್ದಮ್ಮನವರಿಗೆ ಸೇರಿದ ಅಡಿಕೆ ಮತ್ತು ತೆಂಗಿನ ಮರಗಳನ್ನು ಕಡಿಸಿಹಾಕಿದ್ದಾರೆ. ತಾನು ಸಲಹಿದ  ಫಲ ನೀಡುತ್ತಿದ್ದ ಮರಗಳು ಕಡಿದ್ದನ್ನು ನೋಡಿ ಸಿದ್ದಮ್ಮ ಮಕ್ಕಳು ಕಳೆದುಕೊಂಡಂತೆ ಅಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲ ತಾಣದಲ್ಲಿ ಮನಕಲುಕುವಂತಿವೆ. ವಿಡಿಯೋ ನೋಡಿ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದಲ್ಲಿ ಕೋಡಿಕೆಂಪಮ್ಮ ದೇವಾಲಯದ ಜಾತ್ರೆ ಇತ್ತು. ಆ ಜಾತ್ರೆ ನಡೆಯುವ ಜಾಗದ ಭೂಮಿ ವಿವಾದದಲ್ಲಿತ್ತು  ಆ ಜಮೀನನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಆದರೆ ಗ್ರಾಮ ಲೆಕ್ಕಿಗ ಮತ್ತು ಕಂದಾಯಾಧಿಕಾರಿಯ  ಲೋಪದಿಂದಾಗಿ ಸಿದ್ದಮ್ಮ ಅವರ ತೋಟವನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಗಿದೆ. ತಹಶೀಲ್ದಾರ್ ಕೂಡ ಅದನ್ನು ಪರಿಶೀಲಿಸುವ ಗೋಜಿಗೆ ಹೋಗದೆ ಮಹಿಳಾ ರೈತರೊಬ್ಬರ ತೋಟವನ್ನು ಧ್ವಂಸ ಮಾಡಲಾಗಿದೆ. ಕೋಡಿಕೆಂಪಮ್ಮ ಜಾತ್ರೆಯ ಹಿನ್ನೆಲೆಯಲ್ಲಿ ಜಾತ್ರೆ ನಡೆಯಬೇಕಿದ್ದ ಬೇರೆ ಸ್ಥಳದಲ್ಲಿ ಪರಿಶೀಲನೆ ಮಾಡುವ ಬದಲು ಸಿದ್ದಮ್ಮನವರ ತೋಟಕ್ಕೆ ಕೊಡಲಿ ಪೆಟ್ಟು ನೀಡಲಾಗಿದೆ.

ಇಂದು ಬೆಳಿಗ್ಗೆ ಸಿದ್ದಮ್ಮ ಅವರು ತೋಟಕ್ಕೆ ಹೋದ ಗುಬ್ಬಿ ತಹಶೀಲ್ದಾರ್ 170 ಅಡಿಕೆ ಗಿಡಗಳು ಮತ್ತು 25 ತೆಂಗಿನ ಮರಗಳನ್ನು ಕಡಿಸಿ ಹಾಕಿದ್ದಾರೆ. ಈ ಮೂಲಕ ಜಿಲ್ಲಾಧಿಕಾರಿಗಳು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆ. ತಹಶೀಲ್ದಾರ್ ಧೋರಣೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿ ಕ್ರೂರವಾಗಿ ನಡೆದುಕೊಂಡಿದ್ದಾರೆ ಎಂದು ಟೀಕೆ ವ್ಯಕ್ತವಾಗಿದೆ.

ಅಡಿಕೆ ಮತ್ತು ತೆಂಗಿನ ಮರಗಳು ನೆಲಕ್ಕೆ ಬಿದ್ದಿರುವುದನ್ನು ನೋಡಿದ ಸಿದ್ದಮ್ಮ ತಲೆ ಚಚ್ಚಿಕೊಳ್ಳುತ್ತಿದ್ದಾರೆ. ಗೊಳೋ ಎಂದು ಕಣ್ಣೀರು ಕರೆಯುತ್ತಿದ್ದಾರೆ. ಗುಬ್ಬಿ ತಾಲೂಕು ತಹಶೀಲ್ದಾರ್ ಏಕಾಏಕಿ ತೋಟಕ್ಕೆ ಬಂದು ನಿರ್ದಯವಾಗಿ ಮರಗಳನ್ನು ಕಡಿಸಿರುವುದು ಆಕೆಯನ್ನು ಕೆರಳುವಂತೆ ಮಾಡಿದೆ. ಇನ್ನೊಂದೆಡೆ ತಪ್ಪು ಮಾಡಿ ತಹಶೀಲ್ದಾರ್‌ ಇಕ್ಕಟ್ಟಿಗೆ ಸಿಲುಕಿದ್ದಾರೆ.

ತಾಲೂಕು ದಂಡಾಧಿಕಾರಿ ಮತ್ತು ಕಂದಾಯ ಅಧಿಕಾರಿ ಮತ್ತು ಗ್ರಾಮ ಲೆಕ್ಕಿಗ ರೈತರಿಗೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲ. ರೈತರ ಬೆಳೆದ ಬೆಳೆಯನ್ನು ಅಧಿಕಾರಿಯೇ ಮುಂದೆ ನಿಂತು ಕತ್ತರಿಸಿಹಾಕಲು ಅನುವು ಮಾಡಿಕೊಟ್ಟಿದ್ದಾರೆ. ಆ ತಹಶೀಲ್ದಾರ್ ಗೆ ಮರಗಳನ್ನು ಕಡಿಸುವ ಮನಸ್ಸು ಹೇಗೆ ಬಂತು ಎಂದು ರೈತ  ಕಿಡಿಕಾರಿದ್ದಾರೆ. ಆದರೆ ಇದುವರೆಗೂ ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...