Homeಕರ್ನಾಟಕಗುಬ್ಬಿ: ಕೆರೆಕೋಡಿಯಲ್ಲಿ ಕೊಚ್ಚಿ ಹೋದವರ ಮೃತದೇಹ ಎರಡು ದಿನಗಳ ನಂತರ ಪತ್ತೆ

ಗುಬ್ಬಿ: ಕೆರೆಕೋಡಿಯಲ್ಲಿ ಕೊಚ್ಚಿ ಹೋದವರ ಮೃತದೇಹ ಎರಡು ದಿನಗಳ ನಂತರ ಪತ್ತೆ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಕಲ್ಲೂರು ಕೆರೆ ಕೋಡಿಯಲ್ಲಿ ಕೈಕಾಲು ತೊಳೆಯಲು ಹೋಗಿ ಕೊಚ್ಚಿ ಹೋಗಿದ್ದ ಇಬ್ಬರು ವ್ಯಕ್ತಿಗಳ ಮೃತದೇಹಗಳು ಎರಡು ದಿನಗಳ ನಂತರ ಪತ್ತೆಯಾಗಿವೆ.

ಭಾರೀ ಮಳೆಯಿಂದಾಗಿ ತಿಂಗಳ ಹಿಂದೆಯೇ ಕೆರೆ ಕೋಡಿ ಬಿದ್ದಿತ್ತು. ಆದರೆ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕೆರೆ ಕೋಡಿಗಳಲ್ಲಿ ನೀರಿನ ರಭಸವೂ ಹೆಚ್ಚಾಗಿದೆ. ಜಿಲ್ಲೆಯ ತೆಂಗು ಹಾಗೂ ಅಡಿಕೆ ತೋಟಗಳಲ್ಲಿ ನೀರು ನಿಂತಿದೆ. ಬೆಳೆ ನಾಶವಾಗಿದ್ದು, ಇದರ ನಡುವೆ ಜೀವಹಾನಿಗಳೂ ಸಂಭವಿಸಿರುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಶನಿವಾರ ಸಂಜೆ ಕಲ್ಲೂರು ಕೆರೆಯಲ್ಲಿ ಕೈಕಾಲು ತೊಳೆಯಲು ಹೋದ ನಟರಾಜು (30) ಹಾಗೂ ಹನುಮಂತರಾಜು(48) ಕಾಲು ಜಾರಿ ನೀರಿಗೆ ಬಿದ್ದು ನೀರಿನ ರಭಸಕ್ಕೆ ಕ್ಷಣಾರ್ಧದಲ್ಲಿ ಕೊಚ್ಚಿ ಹೋಗಿದ್ದರು. ಸ್ಥಳೀಯರು ಕತ್ತಲಲ್ಲೇ ಹುಡುಕಾಟ ನಡೆಸಿದ್ದರೂ ಕೊಚ್ಚಿ ಹೋದವರು ಪತ್ತೆಯಾಗಿರಲಿಲ್ಲ. ನಂತರ ಅಗ್ನಿ ಶಾಮಕದಳದ ಉಪನಿರೀಕ್ಷಕ ಮಹಾಲಿಂಗಪ್ಪ ನೇತೃತ್ವದ ಸಿಬ್ಬಂದಿ ವರ್ಗ ಸತತ ಪ್ರಯತ್ನಪಟ್ಟು ಕೊಚ್ಚಿಹೋದವರಿಗಾಗಿ ಹುಡುಕಾಟ ನಡೆಸಿದ್ದರು.

ಎಲ್ಲಾ ರೀತಿಯ ಕಾರ್ಯಾಚರಣೆ ನಡೆದರೂ ಯಾವುದೇ ಸುಳಿವು ಸಿಗದೆ ಪ್ರಯತ್ನ ಮುಂದುವರೆಸಿದ್ದರು. ಎರಡು ದಿನದ ಬಳಿಕ ಸೋಮವಾರ ಬೆಳಿಗ್ಗೆ ಕಲ್ಲೂರು ಸಮೀಪದ ಬಿಳಿನಂದಿ ತೊರೆ ಬಳಿ ನಟರಾಜು ಶವ ಪತ್ತೆಯಾಯಿತು. ಮತ್ತೇ ಹುಡುಕಾಟ ನಡೆದು ಮಂಗಳವಾರ ಬೆಳಿಗ್ಗೆ ಅದೇ ಸ್ಥಳದಲ್ಲೇ ಹನುಮಂತರಾಜು ಅವರ ಶವ ಕೂಡಾ ಪತ್ತೆಯಾಗಿದೆ. ಸಿ.ಎಸ್.ಪುರ ಪೊಲೀಸರು ಶವ ಪರೀಕ್ಷೆ ನಡೆಸಿ ಮೃತರ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಕಲ್ಲೂರು ಕೆರೆ ಕೋಡಿ ನೀರು ಕುಣಿಗಲ್ ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯವನ್ನು ಸೇರುತ್ತದೆ.

ಘಟನಾ ಸ್ಥಳಕ್ಕೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಮಸಾಲ ಜಯರಾಮ್‌ ಭೇಟಿ ನೀಡಿ ಕ್ರಮ ವಹಿಸಿದ್ದರು. ಮಾಜಿ ಶಾಸಕ ಎಂ.ಟಿ.ಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬುವ ಜೊತೆಗೆ ಜಿಲ್ಲಾಡಳಿತದ ನೀರಿನಲ್ಲಿ ಮುಳುಗಡೆಗೊಂಡಿರುವ ಕುಟುಂಬಸ್ಥರಿಗೆ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ವಿತರಣೆ ಮಾಡಬೇಕು ಎಂದು ಒತ್ತಾಯಿಸಿದ್ದರು.

ಮೈಸೂರಿನಲ್ಲಿ ರೈತ ಸಾವು

ಮೈಸೂರು ತಾಲ್ಲೂಕಿನ ಭುಗತಹಳ್ಳಿಯಲ್ಲಿ ಶನಿವಾರ ತಡರಾತ್ರಿ ಮಳೆಯಿಂದ ಜಲಾವೃತವಾಗಿದ್ದ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಪುಟ್ಟಮಾದಪ್ಪ (46) ಮೃತಪಟ್ಟಿದ್ದಾರೆ.

ಪಾವಗಡ ತಾಲ್ಲೂಕಿನ ಪಳವಳ್ಳಿಗೆ ಹೊರಟಿದ್ದ ಕೆಂಚಗಾನಹಳ್ಳಿಯ ಗಂಗಾಧರ (38) ರಸ್ತೆ ಮೇಲೆ ರಭಸವಾಗಿ ಹರಿಯುತ್ತಿದ್ದ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ರಾಜ್ಯದ ಹಲವೆಡೆ ಹಾನಿ

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ 12 ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಮನೆಗಳ ಗೋಡೆಗಳು ಕುಸಿದಿವೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ಮಳೆಗೆ 6 ಮನೆಗಳು ಹಾನಿಗೀಡಾಗಿವೆ.

ಇದನ್ನೂ ಓದಿರಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಮಳೆಯಿಂದಾಗಿ ಬಸ್‌ನಿಲ್ದಾಣ ಜಲಾವೃತವಾಗಿತ್ತು. ಮೈಸೂರು ಜಿಲ್ಲೆಯ ಪಿರಿಯಾ ಪಟ್ಟಣ, ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕು, ಚಾಮರಾಜನಗರ, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣದ ಜಮೀನು ಜಲಾವೃತವಾಗಿದ್ದು, ಬೆಳೆ ಹಾನಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಗರಿಕೆಕಂಡಿಯಿಂದ ತಮಿಳುನಾಡಿನ ಹಂದಿಯೂರು ನಡುವೆ ವಿವಿಧೆಡೆ ಗುಡ್ಡ ಕುಸಿದಿದ್ದು, ಭಾನುವಾರದಿಂದ 4 ದಿನಗಳವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದ್ದು, ಭಾನುವಾರ ಬೆಟ್ಟಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಸ್ಥಗಿತಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...