Homeಮುಖಪುಟಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

ಖಾಯಂ ನೇಮಕಾತಿಗೆ ಆಗ್ರಹಿಸಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವದಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಇಂದು (ಜ.5) ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಅತಿಥಿ ಉಪನ್ಯಾಸಕರು ನೇಮಕಾತಿ ಖಾಯಂ ಮಾಡುವ ಮೂಲಕ ಸೇವಾ ಭದ್ರತೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ, ಅತಿಥಿ ಉಪನ್ಯಾಸಕರ ಖಾಯಂ ನೇಮಕಾತಿಗೆ ಒತ್ತಾಯಿಸಿ ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ಸಿ&ಆರ್ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸುವಂತೆ ಕೋರಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ನಮಗೆ ಸೇವಾ ಭದ್ರತೆ ಕೊಡುತ್ತಿಲ್ಲ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಕೂಡ ಖಾಯಂ ನೇಮಕಾತಿಯ ಭರವಸೆ ನೀಡಿತ್ತು. ಈಗ ಕೇಳಿದರೆ ಕಾನೂನು ತೊಡಕಿನ ಸಬೂಬು ಹೇಳುತ್ತಿದ್ದಾರೆ. ಸಿದ್ದರಾಮಯ್ಯನವರು ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ಧರಣಿ ನಿರತ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅವರು ಪರ್ಯಾಯ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ನಮಗೆ ಪರ್ಯಾಯ ವ್ಯವಸ್ಥೆ ಬೇಡ, ನಮಗೆ ಸೇವಾ ಭದ್ರತೆ ಕೊಡಿ. ನಮಗೆ 5 ಸಾವಿರ ರೂಪಾಯಿ ವೇತನ ಹೆಚ್ಚಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ. ನಮಗೆ ವೇತನ ಹೆಚ್ಚಳ ಬೇಡ, ಅದನ್ನು ನಾವು ಕೇಳಿಲ್ಲ. ನಮಗೆ ಸೇವಾ ಭದ್ರತೆ ಕಲ್ಪಿಸಿ ಎಂದು ಆಗ್ರಹಿಸಿದರು.

ಖಾಯಂ ನೇಮಕಾತಿ ನಾವು ಕೇಳುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು

“ನೇಮಕಾತಿ ಖಾಯಮಾತಿ ನಾವು ಕೇಳುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು.ನಮಗೆ ಸೇವಾ ಭದ್ರತೆ ಕೊಡಿ.
ಸರ್ಕಾರ ನಾವು ಕೇಳದೆ ಇರುವ ಪರ್ಯಾಯ ಸೌಲಭ್ಯ ಕೊಡುತ್ತಿದೆ. 60 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಳಿಕ ಈಡಗಂಟು ಕೊಡ್ತೀವಿ, ಐದು ಸಾವಿರ ರೂಪಾಯಿ ವೇತನ ಹೆಚ್ಚಿಸುತ್ತೇವೆ ಎನ್ನುತ್ತಿದ್ದಾರೆ. ನಾವು ಈ ವರ್ಷ ಸೇವೆಯಲ್ಲಿದ್ದವರು ಮುಂದಿನ ವರ್ಷ ಸೇವೆಯಲ್ಲಿ ಇರುತ್ತೇವೆ ಎಂಬ ಗ್ಯಾರಂಟಿಯಿಲ್ಲ. ಸೇವಾ ಭದ್ರತೆ ಇಲ್ಲದ ಮೇಲೆ 60 ವರ್ಷದ ಬಳಿಕದ ಈಡಗಂಟು ಯಾರಿಗೆ ಸಿಗುತ್ತೆ? ಜೀವ ವಿಮೆ ಕೊಡುತ್ತೇವೆ ಎನ್ನುತ್ತಿದ್ದಾರೆ. ನಾವು ಸೇವೆಯಲ್ಲಿ ಮುಂದುವರೆದರೆ ತಾನೆ ಜೀವ ವಿಮೆ ಕೊಡುವುದು. ಹಾಗಾಗಿ ಅದು ಕೂಡ ನಮಗೆ ಧಕ್ಕದೇ ಇರುವಂತದ್ದು. 5 ಸಾವಿರ ರೂಪಾಯಿ ವೇತನ ಹೆಚ್ಚಿಸುತ್ತೇವೆ ಎನ್ನುತ್ತಿದ್ದಾರೆ. ನಾವು ವೇತನ ಹೆಚ್ಚಳ ಕೇಳುತ್ತಿಲ್ಲ, ನಾವು ಕೇಳಿದ್ದು ಸೇವಾ ಭದ್ರತೆ. ಉನ್ನತ ಶಿಕ್ಷಣ ಸಚಿವರು ನಾವು ಕೇಳದ ಆಶ್ವಾಸನೆ ಕೊಟ್ಟು ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಧರಣಿ ನಿರತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿಂಧನೂರಿನ ಅತಿಥಿ ಉಪನ್ಯಾಸಕ ಶಂಕರ್ ಗುರಿಕಾರ್ ಹೇಳಿದರು.

ಬೆಳಗಾವಿ ಅಧಿವೇಶನ ಸಮಯದಲ್ಲಿ ನಾವು ಖಾಯಂ ನೇಮಕಾತಿ ಕೇಳಿದ್ದೆವು. ಆಗ ಉನ್ನತ ಶಿಕ್ಷಣ ಸಚಿವರು ಕಾನೂನು ತೊಡಕಿದೆ. ಉಮಾದೇವಿ ಪ್ರಕರಣ ಅಡ್ಡ ಬರುತ್ತಿದೆ ಎಂದಿದ್ದರು. ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಸರ್ಕಾರಕ್ಕೆ ಪತ್ರ ಬರೆದು, ಸಿ &ಆರ್‌ ನಿಯಮಾವಳಿಗೆ ತಿದ್ದುಪಡಿ ತಂದು ಅತಿಥಿ ಉಪನ್ಯಾಸಕರಿಗೆ ಖಾಯಮಾತಿ ನೀಡುವಂತೆ ಆಗ್ರಹಿಸಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಅವರು ತಮ್ಮ ಮಾತು ಮರೆತಿದ್ದಾರೆ. ಜನವರಿ 1 ರಿಂದ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಬಂದು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಕುಳಿತು ಮೂರು ದಿನಗಳಾಯಿತು. ಉಪನ್ಯಾಸಕರು ಅಮರಣಾಂತ ಉಪವಾಸ ಕುಳಿತಿದ್ದಾರೆ. ಅವರನ್ನು ಸೌಜನ್ಯಕ್ಕಾದರು ಮಾತನಾಡಿಸಲು ಮುಖ್ಯಮಂತ್ರಿಗಳಾಲಿ, ಉನ್ನತ ಶಿಕ್ಷಣ ಸಚಿವರಾಗಲಿ ಅಥವಾ ಸರ್ಕಾರದ ಕಾರ್ಯದರ್ಶಿಗಳಾಗಲಿ ಬಂದಿಲ್ಲ. ಇವತ್ತೂ ಕೂಡ ಸರ್ಕಾರ ನಮ್ಮ ಅಳಲು ಕೇಳದಿದ್ದರೆ ನಮ್ಮ ಹೋರಾಟ ತೀವ್ರಗೊಳ್ಳಲಿದೆ. ಮುಂದೆ ಏನಾದರು ಅನಾಹುತಗಳಾದರೆ ಅದಕ್ಕೆ ಸರ್ಕಾರಕ್ಕೆ ನೇರ ಹೊಣೆಯಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.

ದೇಶದ ಭವಿಷ್ಯ ರೂಪಿಸುವ ನಮ್ಮ ಭವಿಷ್ಯಕ್ಕೆ ಭದ್ರತೆಯಿಲ್ಲ

ಧರಣಿ ನಿರತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಲಘಟಗಿ, ಹುಬ್ಬಳ್ಳಿಯ ಅತಿಥಿ ಉಪನ್ಯಾಸಕಿ ಡಾ. ನಯನ ಸೋಮಣ್ಣನವರ್ ಮಾತನಾಡಿ, “ನಮ್ಮ ಹೋರಾಟ ಪ್ರಾರಂಭಗೊಂಡು 44 ದಿನಗಳಾಯಿತು. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಧರಣಿ ಕುಳಿತಿದ್ದೇವೆ.
ಪ್ರತಿ ವರ್ಷ ಕೌನ್ಸಿಲಿಂಗ್ ಮಾಡ್ತಾರೆ, ಪ್ರತಿ ವರ್ಷ ಆಯ್ಕೆ ಮಾಡ್ತಾರೆ. ನಮಗೆ ಯಾವ ಕಾಲೇಜು ಸಿಗುತ್ತದೆ ಎಂದು ಗೊತ್ತಿರುವುದಿಲ್ಲ. ಪ್ರಸ್ತುತ ನಾವು 5-6 ಗಂಟೆಗಳ ಕಾಲ ಪ್ರಯಾಣ ಮಾಡಿ ಕಾಲೇಜಿಗೆ ತೆರಳುತ್ತಿದ್ದೇವೆ. ಇದರಿಂದ ಮಹಿಳೆಯರಾದ ನಮಗೆ ಆರೋಗ್ಯ ಹದೆಗೆಡುತ್ತಿದೆ. ಕಾಲೇಜು ಬಳಿಯೇ ಮನೆ ಮಾಡೋಣ ಎಂದರೆ ನಮಗೆ ಸೇವಾ ಭದ್ರತೆ ಇಲ್ಲ. ಮುಂದಿನ ವರ್ಷ ನಮ್ಮನ್ನು ಬೇರೆ ಕಾಲೇಜಿಗೆ ಹಾಕಿದರೆ ಅಲ್ಲಿ ಮನೆ ಮಾಡಬೇಕಾಗುತ್ತದೆ. ಉನ್ನತ ಶಿಕ್ಷಣ ಸಚಿವರು ನಮಗೆ 5 ಸಾವಿರ ರೂಪಾಯಿ ವೇತನ ಹೆಚ್ಚಿಸುವ ಭರವಸೆ ನೀಡಿದ್ದಾರೆ. ನಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ವೇತನ ಹೆಚ್ಚಳ ಮಾಡಿರುವುದನ್ನು ಪಡೆದುಕೊಳ್ಳಲು ನಮಗೆ ಕಲಸದ ಖಾತ್ರಿಯಿಲ್ಲ. ಮುಂದಿನ ವರ್ಷ ನಮ್ಮ ಕೆಲಸ ಹೋದರೂ ಹೊಯಿತು. ಸರ್ಕಾರದಿಂದ ಹೊಸ ನೇಮಕಾತಿಯಾದರೆ, ಡೆಪ್ಯುಟೇಷನ್ ಉಪನ್ಯಾಸಕರು ಬಂದರೆ ನಾವು ಕೆಲಸ ಕಳೆದುಕೊಳ್ಳುತ್ತೇವೆ. ಹೀಗಾದರೆ ನಮ್ಮನ್ನೇ ನಂಬಿರುವ ಕುಟುಂಬದ ಗತಿಯೇನು? ಎಂದು ಪ್ರಶ್ನಿಸಿದರು.

ಪ್ರಸ್ತುತ ಇರುವ ವೇತನ ಕೂಡ ಸರಿಯಾಗಿ ಬರುತ್ತಿಲ್ಲ. ಕಳೆದ ತಿಂಗಳ ವೇತನ ಇನ್ನೂ ಬಂದಿಲ್ಲ. ಎಷ್ಟೋ ಜನ ಉಪನ್ಯಾಸಕರು ಇಲ್ಲಿಗೆ ಬಂದಿಲ್ಲ. ಯಾಕೆಂದರೆ ಅವರತ್ರ ಬರಲು ದುಡ್ಡಿಲ್ಲ. 25-30 ಜನ ಉಪನ್ಯಾಸಕರು ಅಮರಣಾಂತ ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ. ಕನಿಷ್ಠ ಪಕ್ಷ ಅವರನ್ನು ನೋಡಲೂ ಯಾರೂ ಬಂದಿಲ್ಲ. ಹಾಗಾದರೆ ನಮ್ಮ ಜೀವಕ್ಕೆ ಬೆಲೆ ಇಲ್ಲವೇ? ದೇಶದ ಭವಿಷ್ಯ ರೂಪಿಸುವ ನಮ್ಮ ಭವಿಷ್ಯಕ್ಕೆ ಭದ್ರತೆಯಿಲ್ಲ ಎಂದು ಅಳಲು ತೋಡಿಕೊಂಡರು.

ಸಿದ್ದರಾಮಯ್ಯನವರು ನಿರುದ್ಯೋಗ ಭಾಗ್ಯ ಕೊಡಲಿ 

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಗದಗದ ಅತಿಥಿ ಉಪನ್ಯಾಸಕಿ ಡಾ. ಸುಜಾತ ಎಸ್ ಬರಗೂರು ಮಾತನಾಡಿ, ಉನ್ನತ ಶಿಕ್ಷಣ ಸಚಿವರು ನಮಗೆ ನಾಲ್ಕು ಭರವಸೆಗಳನ್ನು ಕೊಟ್ಟಿದ್ದಾರೆ. ಈ ಪೈಕಿ ನಾವು ನಿವೃತ್ತಿ ಹೊಂದಿದ ಬಳಿಕ ಐದು ಲಕ್ಷ ರೂಪಾಯಿ ಕೊಡೋದು ಒಂದು. ಸಚಿವರು ಹೇಳಿದಂತೆ ನಾವು ಕನಿಷ್ಠ 10 ವರ್ಷಗಳ ಕಾಲ ಕೆಲಸ ಮಾಡಿದ ಬಳಿಕ ವರ್ಷಕ್ಕೆ 50 ಸಾವಿರದಂತೆ 10 ವರ್ಷ ದುಡ್ಡು ಸಿಗಲಿದೆ. ಈ ನಿಯಮ ಒಪ್ಪಿಕೊಂಡರೆ ಈಗಾಗಲೇ 40-45 ವರ್ಷ ಸೇವೆ ಸಲ್ಲಿಸಿದವರಿಗೆ ಯಾವ ಲಾಭವೂ ಇಲ್ಲ. ಪ್ರಸ್ತುತ 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರು ಕೂಡ 10 ವರ್ಷ ಪೂರೈಸಿದ ಬಳಿಕವಷ್ಟೇ ಈ ಸೌಲಭ್ಯ ಸಿಗಲಿದೆ. ಇದರಿಂದ ಎಲ್ಲರಿಗೆ ಸಮಾನ ನ್ಯಾಯ ಸಿಗುವುದಿಲ್ಲ ಎಂದರು.

ಪರೀಕ್ಷೆ ಬರೆಯುವ ಬರೆಯುವ ವೇಳೆ ಕೃಪಾಂಕ ಕೊಡುವ ಭರವಸೆಯನ್ನೂ ಸಚಿವರು ನೀಡಿದ್ದಾರೆ. ವಯೋಮಿತಿ ಮೀರಿದವರಿಗೆ ಪರೀಕ್ಷೆ ಬರೆಯಲು ಅವಕಾಶವೇ ಇಲ್ಲ. ಇನ್ನೆಲ್ಲಿಂದ ಕೃಪಾಂಕ? ಸಚಿವರು ಕೊಟ್ಟ ನಾಲ್ಕೂ ಭರವಸೆಗಳು ಯಾವುದೇ ಅತಿಥಿ ಉಪನ್ಯಾಸಕರಿಗೆ ನ್ಯಾಯ ಕೊಡುವುದಿಲ್ಲ. ಈ ಕಾರಣಕ್ಕೆ ನಾವು ಅದನ್ನು ತಿರಸ್ಕರಿಸಿದ್ದೇವೆ. ಮಹಿಳೆಯರಿಗೆ ಹಲವು ಗ್ಯಾರಂಟಿಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರು ಸೇವಾ ಭದ್ರತೆಯ ಗ್ಯಾರಂಟಿಯನ್ನೂ ಕೊಡಲಿ. ಅದು ಆಗುವುದಿಲ್ಲ ಎಂದರೆ ನಿರುದ್ಯೋಗ ಭಾಗ್ಯ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನವರಿ 1ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಕೈಗೊಂಡ ಅತಿಥಿ ಉಪನ್ಯಾಸಕರು, ಸುಮಾರು 80 ಕಿ.ಮೀ ನಡೆದು ಜನವರಿ 3ರಂದು ಬೆಂಗಳೂರು ತಲುಪಿದ್ದಾರೆ. ಈ ನಡುವೆ ಪೊಲೀಸರು ಅವರನ್ನು ತಡೆದ ಪ್ರಸಂಗವೂ ನಡೆದಿದೆ. ಜನವರಿ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಧರಣಿ ಕುಳಿತಿದ್ದಾರೆ. ಈ ಪೈಕಿ ಸುಮಾರು 25-30 ಜನರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ ಲೋಕ ಅಖಾಡ: ಮತ್ತೆ ಬಂಗಾರಪ್ಪ-ಯಡಿಯೂರಪ್ಪ ಕುಟುಂಬ ಪ್ರತಿಷ್ಠೆಯ ಕದನ ಕುತೂಹಲ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...