Homeಮುಖಪುಟಗುಜರಾತ್: ಜಾಮೀನಿನ ಮೇಲೆ ಹೊರಬಂದವನಿಂದ 70 ವರ್ಷದ ಸಂತ್ರಸ್ತೆ ಮೇಲೆ ಮತ್ತೆ ಅತ್ಯಾಚಾರ

ಗುಜರಾತ್: ಜಾಮೀನಿನ ಮೇಲೆ ಹೊರಬಂದವನಿಂದ 70 ವರ್ಷದ ಸಂತ್ರಸ್ತೆ ಮೇಲೆ ಮತ್ತೆ ಅತ್ಯಾಚಾರ

- Advertisement -
- Advertisement -

‘ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ 35 ವರ್ಷದ ವ್ಯಕ್ತಿಯೊಬ್ಬ, 70 ವರ್ಷದ ಸಂತ್ರಸ್ತೆ ಮೇಲೆ ಮತ್ತೆ ಅತ್ಯಾಚಾರವೆಸಗಿದ್ದಾನೆ’ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದು, ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ಆರೋಪಿ ಶೈಲೇಶ್ ರಾಥೋಡ್ ಡಿಸೆಂಬರ್ 15 ಮತ್ತು ಡಿಸೆಂಬರ್ 22 ರಂದು ಜಮೀನಿನಲ್ಲಿದ್ದ ವೃದ್ಧೆಯ ಗುಡಿಸಲಿನಲ್ಲಿ ಅಪರಾಧ ಎಸಗಿದ್ದಾನೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎಲ್ ಚೌಧರಿ ತಿಳಿಸಿದ್ದಾರೆ.

ಈ ವಿಷಯವನ್ನು ಬಹಿರಂಗಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ.

ಮಹಿಳೆ ಪೊಲೀಸರನ್ನು ಸಂಪರ್ಕಿಸಿದ ನಂತರ ಅಮೋದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಹಿಡಿಯಲು ಅಪರಾಧ ವಿಭಾಗ, ವಿಶೇಷ ಕಾರ್ಯಾಚರಣೆ ತಂಡ ಮತ್ತು ಪೊಲೀಸರ ತಂಡಗಳನ್ನು ರಚಿಸಲಾಗಿದೆ.

ಸುಮಾರು 18 ತಿಂಗಳ ಹಿಂದೆ ಇದೇ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶೈಲೇಶ್ ರಾಥೋಡ್ ಅವರನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಜಾಮೀನಿನ ಮೇಲೆ ಹೊರಗಿರುವಾಗ ಮತ್ತೊಮ್ಮೆ ಅಪರಾಧ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚೆಗೆ, ಭರೂಚ್ ಜಿಲ್ಲೆಯಲ್ಲಿ ವಲಸೆ ಕಾರ್ಮಿಕನ 11 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಲಾಯಿತು. ಲೈಂಗಿಕ ದೌರ್ಜನ್ಯದ ವೇಳೆ ತನ್ನ ಆಂತರಿಕ ಅಂಗಗಳಿಗೆ ಗಾಯಗಳಿಂದ ಬಳಲುತ್ತಿದ್ದ ಸಂತ್ರಸ್ತೆ ಸುಮಾರು ಒಂದು ವಾರದ ನಂತರ ಸಾವನ್ನಪ್ಪಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ; ಸಂಸತ್ತಿನಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆ | ಅಸಾದುದ್ದೀನ್ ಓವೈಸಿಗೆ ಬರೇಲಿ ನ್ಯಾಯಾಲಯದಿಂದ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...