Homeಮುಖಪುಟಗುಜರಾತ್: 'ಮೋದಿ ಹಠಾವೋ, ದೇಶ್‌ ಬಚಾವೋ' ಪೋಸ್ಟರ್ ಅಂಟಿಸಿದ್ದಕ್ಕೆ 8 ಜನರ ಬಂಧನ

ಗುಜರಾತ್: ‘ಮೋದಿ ಹಠಾವೋ, ದೇಶ್‌ ಬಚಾವೋ’ ಪೋಸ್ಟರ್ ಅಂಟಿಸಿದ್ದಕ್ಕೆ 8 ಜನರ ಬಂಧನ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಮ್ ಆದ್ಮಿ ಪಕ್ಷವು ಗುರುವಾರ ರಾಷ್ಟ್ರವ್ಯಾಪಿ ಪೋಸ್ಟರ್ ಅಭಿಯಾನ ಆರಂಭಿಸಿದೆ. ಅದರ ಭಾಗವಾಗಿ ಗುಜರಾತ್‌ನ ಅಹಮದಾಬಾದ್‌ ನಗರದ ವಿವಿಧ ಪುದೇಶಗಳಲ್ಲಿ, “ಮೋದಿ ಹಠಾವೋ, ದೇಶ್ ಬಚಾವೋ” ಎಂಬ ಪೋಸ್ಟರ್‌ಗಳನ್ನು ಅಂಟಿಸಿದ್ದಕ್ಕಾಗಿ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಖ್ಯೆ ANI ವರದಿ ಮಾಡಿದೆ.

ಆಮ್ ಆದ್ಮಿ ಪಕ್ಷವು ಪ್ರಧಾನಿ ಮೋದಿ ವಿರುದ್ಧ ರಾಷ್ಟ್ರವ್ಯಾಪಿ ಪೋಸ್ಟರ್ ಅಭಿಯಾನ ಆರಂಭಿಸಿದ ಕೇವಲ ಒಂದು ದಿನದ ನಂತರ ಈ ಬಂಧನಗಳು ನಡೆದಿವೆ.

ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಹಾಗೂ ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಹಮದಾಬಾದ್ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಟೀಕಿಸುವ ಪೋಸ್ಟರ್ ವಿಚಾರ: ದೆಹಲಿಯಲ್ಲಿ 100 ಎಫ್‌ಐಆರ್‌ ದಾಖಲು, 6 ಜನರ ಬಂಧನ

ಆಮ್‌ ಆದ್ಮಿ ಪಕ್ಷವು ”ಮೋದಿ ಹಠಾವೋ, ದೇಶ್‌ ಬಚಾವೋ” ಎನ್ನುವ ಪೋಸ್ಟರ್‌ ಅಭಿಯಾನವನ್ನು ಗುರುವಾರದಂದು ದೇಶದಾದ್ಯಂತ ಹಮ್ಮಿಕೊಂಡಿತ್ತು. 22 ರಾಜ್ಯಗಳಲ್ಲಿ ಈ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ ಎಂದು ಆಪ್ ದೆಹಲಿ ಘಟಕದ ಸಂಚಾಲಕ ಸಚಿವ ಗೋಪಾಲ್‌ ರೈ ತಿಳಿಸಿದ್ದರು.

ರೈತರಿಗೆ ನೀಡಿದ್ದ ಭರವಸೆಯನ್ನು ಕೇಂದ್ರ ಈವರೆಗೂ ಈಡೇರಿಸಿಲ್ಲ. ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲಿಗೆ ಬಿಜೆಪಿಯು ಪ್ರಜಾಪ್ರಭುತ್ವವನ್ನೇ ನಾಶಪಡಿಸಲು ಮುಂದಾಗಿದೆ. ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂಬ ಸಂದೇಶವನ್ನು ದೇಶದಾದ್ಯಂತ ಜನರಿಗೆ ತಿಳಿಸುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ  ಎಂದು ಅವರು ತಿಳಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳನ್ನು ಗೌರವಿಸುವುದಿಲ್ಲ, ಬದಲಿಗೆ ಅಧಿಕಾರದಲ್ಲಿ ಇದ್ದೇವೆ ಎಂದು ದಮನಕಾರಿ ನಡೆ ಅನುಸರಿಸುತ್ತಿದ್ದಾರೆ. ಈ ಪ್ರವೃತ್ತಿಯು ಭಾರತದ ಪ್ರಜಾತಂತ್ರ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಒಡ್ಡುವ ಬೆದರಿಕೆಯಾಗಿದೆ. ಜೊತೆಗೆ, ಕೇಂದ್ರ ತನಿಖಾ ಸಂಸ್ಥೆಗಳ ಸ್ವತಂತ್ರ ಅಸ್ತಿತ್ವ ಹಾಗೂ ನ್ಯಾಯಾಂಗ ಪ್ರಕ್ರಿಯೆ ಕುರಿತು ಇರುವ ನಂಬಿಕೆಯನ್ನು ಕೇಂದ್ರ ಸರ್ಕಾರವು ಹಾಳುಗೆಡುವುತ್ತಿದೆ ಎಂದು ಅವರು ದೂರಿದ್ದರು.

ದೇಶದಾದ್ಯಂತ ಇರುವ ವಿಶ್ವವಿದ್ಯಾಲಯಗಳಲ್ಲಿ ಏಪ್ರಿಲ್‌ 10ರಂದು ಇದೇ ರೀತಿಯ ಪೋಸ್ಟರ್‌ಗಳನ್ನು ಅಂಟಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಸಚಿವ ಗೋಪಾಲ್‌ ರೈ ಹೇಳಿದ್ದರು.

ಇದನ್ನೂ ಓದಿ: ಆಂಧ್ರದಲ್ಲಿಯೂ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗಿದೆ: ಸುಳ್ಳು ಹೇಳಿದ ಬೊಮ್ಮಾಯಿ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...