14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಬಾಲಕಿಯ ಕತ್ತು ಹಿಸುಕಿ ಕೊಂದಿರುವ ಘಟನೆ ಗುಜರಾತ್‌ನ ಭರೂಚ್ ಜಿಲ್ಲೆಯ ಅಮೋದ್ ಪಟ್ಟಣದ ಬಳಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಸೋಮವಾರ ಸಂಜೆ ಸಂತ್ರಸ್ತೆಯ ಶವ ಪತ್ತೆಯಾಗಿದೆ ಎಂದು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭರೂಚ್ ಸಿವಿಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕತ್ತು ಹಿಸುಕಿ ಕೊಲ್ಲುವ ಮುನ್ನ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ
ಸೋಮವಾರ ಮಧ್ಯಾಹ್ನ ಉರುವಲು ಸಂಗ್ರಹಿಸಲೆಂದು ಮನೆಯಿಂದ ಹೊರಟಿದ್ದ ಬಾಲಕಿ ಸಂಜೆಯವರೆಗೂ ವಾಪಸ್ ಬಂದಿರಲಿಲ್ಲ. ನಂತರ ಬಾಲಕಿಯು ಹತ್ತಿ ಬೆಳೆಯುವ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
“ಅಪರಿಚಿತ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಆರೋಪಿಗಳ ಪತ್ತೆಗೆ ಸ್ಥಳೀಯ ಅಪರಾಧ ವಿಭಾಗ, ವಿಶೇಷ ಕಾರ್ಯಾಚರಣೆ ತಂಡ ಮತ್ತು ಇತರರಿಂದ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು


