Homeಮುಖಪುಟಗುಜರಾತ್ | ನಕಲಿ ಟೋಲ್‌ ಪ್ಲಾಝಾ, ಆಸ್ಪತ್ರೆ ಬಳಿಕ ನಕಲಿ ಕೋರ್ಟ್ ಪತ್ತೆ

ಗುಜರಾತ್ | ನಕಲಿ ಟೋಲ್‌ ಪ್ಲಾಝಾ, ಆಸ್ಪತ್ರೆ ಬಳಿಕ ನಕಲಿ ಕೋರ್ಟ್ ಪತ್ತೆ

- Advertisement -
- Advertisement -

ತನ್ನ ಕಚೇರಿಯಲ್ಲೇ ನಕಲಿ ನ್ಯಾಯಾಲಯ ಸ್ಥಾಪಿಸಿ, ಅದರಲ್ಲಿ ನ್ಯಾಯಾಧೀಶನಂತೆ ನಟಿಸಿ ನೈಜ ನ್ಯಾಯಾಲಯದಂತೆ ಆದೇಶವನ್ನೂ ಹೊರಡಿಸಿದ ವ್ಯಕ್ತಿಯೊಬ್ಬನನ್ನು ಗುಜರಾತ್‌ನ ಗಾಂಧಿನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಮೋರಿಸ್ ಸ್ಯಾಮ್ಯುಯೆಲ್ ಕ್ರಿಶ್ಚಿಯನ್ ಬಂಧಿತ ಆರೋಪಿ. ಈತ 2019ರಲ್ಲಿ ಸರ್ಕಾರಿ ಭೂಮಿಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ಕಕ್ಷಿದಾರನ ಪರವಾಗಿ ಆದೇಶ ನೀಡಿದ ಆರೋಪವಿದೆ. ಕಳೆದ ಐದು ವರ್ಷಗಳಿಂದ ನಕಲಿ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿದು ಬಂದಿದೆ.

ಸ್ಯಾಮ್ಯುಯೆಲ್ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಭೂ ವಿವಾದದ ಪ್ರಕರಣಗಳು ಬಾಕಿ ಇರುವ ಜನರನ್ನು ಬಲೆಗೆ ಬೀಳಿಸುತ್ತಿದ್ದ. ತನ್ನ ಕಕ್ಷಿದಾರರಿಂದ ಅವರ ಪ್ರಕರಣವನ್ನು ಪರಿಹರಿಸಲು ಶುಲ್ಕವಾಗಿ ನಿರ್ದಿಷ್ಟ ಮೊತ್ತವನ್ನು ತೆಗೆದುಕೊಳ್ಳುತ್ತಿದ್ದ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸ್ಯಾಮ್ಯುಯೆಲ್ ಮೊದಲು ನ್ಯಾಯಾಲಯದಿಂದ ನೇಮಕಗೊಂಡ ಅಧಿಕೃತ ಮಧ್ಯಸ್ಥಗಾರನಾಗಿ ತನ್ನನ್ನು ತಾನು ಗುರುತಿಸಿಕೊಳ್ಳುತ್ತಿದ್ದ. ನ್ಯಾಯಾಲಯದಂತೆ ವಿನ್ಯಾಸಗೊಳಿಸಲಾಗಿರುವ ಗಾಂಧಿನಗರದ ತನ್ನ ಕಚೇರಿಗೆ ಗ್ರಾಹಕರನ್ನು ಕರೆಸಿಕೊಳ್ಳುತ್ತಿದ್ದ. ನ್ಯಾಯಮಂಡಳಿಯ ಮುಖ್ಯಸ್ಥರಂತೆ ಅನುಕೂಲಕರ ಆದೇಶಗಳನ್ನು ನೀಡುತ್ತಿದ್ದ ಎಂದು ವರದಿಯಾಗಿದೆ.

ಆರ್ಬಿಟ್ರಲ್ ಟ್ರಿಬ್ಯೂನಲ್ ನ್ಯಾಯಾಲಯದ ನ್ಯಾಯಾಧೀಶನಂತೆ ನಟಿಸುವ ಮೂಲಕ ಜನರನ್ನು ವಂಚಿಸಿದ ಆರೋಪದ ಮೇಲೆ ಅಹ್ಮದಾಬಾದ್ ನಗರ ಪೊಲೀಸರು ಸ್ಯಾಮ್ಯುಯೆಲ್‌ನನ್ನು ಬಂಧಿಸಿದ್ದಾರೆ.

ಸಿಟಿ ಸಿವಿಲ್ ನ್ಯಾಯಾಲಯದ ರಿಜಿಸ್ಟ್ರಾರ್ ಹಾರ್ದಿಕ್ ದೇಸಾಯಿ ದೂರಿನಂತೆ ಕಾರಂಜ್ ಪೊಲೀಸ್ ಠಾಣೆಯಲ್ಲಿ ಸ್ಯಾಮ್ಯುಯೆಲ್ ಕ್ರಿಶ್ಚಿಯನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 170 ಮತ್ತು 419ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2019ರಲ್ಲಿ ಸ್ಯಾಮ್ಯುಯೆಲ್ ನಕಲಿ ನ್ಯಾಯಾಲಯ ಸೃಷ್ಟಿಸಿ ತನ್ನ ಗ್ರಾಹಕರ ಪರವಾಗಿ ಆದೇಶ ಹೊರಡಿಸಿದ್ದ. ಈ ಪ್ರಕರಣವು ಜಿಲ್ಲಾಧಿಕಾರಿಗಳ ಅಧೀನದಲ್ಲಿರುವ ಸರ್ಕಾರಿ ಜಮೀನಿಗೆ ಸಂಬಂಧಿಸಿತ್ತು. ಪಾಲ್ಡಿ ಪ್ರದೇಶದಲ್ಲಿನ ಈ ಜಮೀನನ್ನು ತನ್ನ ಕಕ್ಷಿದಾರನಿಗೆ ಆರೋಪಿ ನೀಡಿದ್ದ. ಸ್ಯಾಮ್ಯುಯೆಲ್ ಸರ್ಕಾರದಿಂದ ನೇಮಿತ ‘ಅಧಿಕೃತ ಮಧ್ಯಸ್ಥಗಾರ’ ಎಂದು ಹೇಳಿಕೊಂಡು ನ್ಯಾಯಾಲಯದ ಕಲಾಪ ಆರಂಭಿಸಿ ತನ್ನ ಕಕ್ಷಿದಾರನ ಪರವಾಗಿ ಆದೇಶವನ್ನು ಹೊರಡಿಸಿದ್ದ.

ತನ್ನ ಆದೇಶವನ್ನು ಜಾರಿಗೆ ತರಲು ಸ್ಯಾಮ್ಯುಯೆಲ್ ಮತ್ತೋರ್ವ ವಕೀಲನ ಮೂಲಕ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾನೆ ಮತ್ತು ಆದೇಶದ ಪ್ರತಿಯನ್ನೂ ಈ ವೇಳೆ ಲಗತ್ತಿಸಿದ್ದಾನೆ. ಆದರೆ, ನ್ಯಾಯಾಲಯದ ರಿಜಿಸ್ಟ್ರಾರ್ ಹಾರ್ದಿಕ್ ದೇಸಾಯಿ ಇದು ನಕಲಿ ಆದೇಶ ಎಂದು ಪತ್ತೆ ಹಚ್ಚಿ ಕಾರಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಯಾಮ್ಯುಯೆಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 170 (ಸಾರ್ವಜನಿಕ ಸೇವಕನಾಗಿ ಯಾವುದೇ ಕಚೇರಿಯನ್ನು ಹೊಂದಿರುವಂತೆ ನಟಿಸುವುದು) ಮತ್ತು 419 (ವ್ಯಕ್ತಿಯಿಂದ ವಂಚನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಡಿಸೆಂಬರ್ 2023ರಲ್ಲಿ ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ ನಕಲಿ ಟೋಲ್ ಫ್ಲಾಝಾ ಸ್ಥಾಪಿಸಿ ವಾಹನ ಚಾಲಕರಿಂದ ಹಣ ಪಡೆಯುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಆ ಬಳಿಕ ನಕಲಿ ಸರ್ಕಾರಿ ಕಚೇರಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ಕಳೆದ ಜುಲೈನಲ್ಲಿ ಅಹಮದಾಬಾದ್‌ ಜಿಲ್ಲೆಯ ಭವ್ಲಾ ತಾಲೂಕಿನ ಕೇರಳ ಎಂಬ ಗ್ರಾಮದಲ್ಲಿ ನಕಲಿ ಆಸ್ಪತ್ರೆಯೂ ಪತ್ತೆಯಾಗಿತ್ತು.

ಇದನ್ನೂ ಓದಿ : ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ | ಅಸ್ಸಾಂ ಶಾಸಕ ಅಖಿಲ್ ಗೊಗೋಯ್ ವಿರುದ್ಧ ಯುಎಪಿಎ ಅಡಿಯಲ್ಲಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...