Homeಮುಖಪುಟಗುಜರಾತ್ ವಿಧಾನಸಭೆ ಚುನಾವಣೆ | ಚರ್ಚೆ ಹುಟ್ಟುಹಾಕಿದ ಚುನಾವಣಾ ಆಯೋಗದ ನಡೆ!

ಗುಜರಾತ್ ವಿಧಾನಸಭೆ ಚುನಾವಣೆ | ಚರ್ಚೆ ಹುಟ್ಟುಹಾಕಿದ ಚುನಾವಣಾ ಆಯೋಗದ ನಡೆ!

- Advertisement -
- Advertisement -

ಚುನಾವಣಾ ಆಯೋಗವು ಶುಕ್ರವಾರದಂದು ಹಿಮಾಚಲ ಪ್ರದೇಶಕ್ಕೆ ಚುನಾವಣೆಯನ್ನು ಘೋಷಿಸಿದೆ. ಆದರೆ ಗುಜರಾತ್‌‌ಗೆ ಚುನಾವಣೆ ಘೋಷಣೆ ಮಾಡದೆ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಚುನಾವಣಾ ಆಯೋಗವು ಎರಡು ರಾಜ್ಯಗಳ ಚುನಾವಣೆಯನ್ನು ಕೂಡಾ ಇಂದು ಘೋಷಣೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿತ್ತು.

ಎರಡೂ ರಾಜ್ಯದ ವಿಧಾನಸಭೆಗಳ ಅವಧಿ ಕೆಲವೇ ತಿಂಗಳ ವ್ಯಾಪ್ತಿಯಲ್ಲಿ ಕೊನೆಗೊಳ್ಳುವುದರಿಂದ ಗುಜರಾತ್ ಚುನಾವಣೆಯನ್ನು ಇಂದು ಘೋಷಿಸದಿರುವುದು ಚರ್ಚೆಯನ್ನು ಹುಟ್ಟುಹಾಕಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಎಲ್ಲಾ ರಾಜ್ಯಗಳ ಚುನಾವಣೆಗಳನ್ನು ಒಟ್ಟಿಗೆ ಘೋಷಿಸಲಾಗುತ್ತದೆ ಮತ್ತು ಫಲಿತಾಂಶಗಳನ್ನು ಒಂದೇ ದಿನಾಂಕದಂದು ಪ್ರಕಟ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌‌, ಚುನಾವಣೆ ದಿನಾಂಕ ಘೋಷಿಸುವಲ್ಲಿ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

“ಎರಡು ರಾಜ್ಯಗಳ ಅಸೆಂಬ್ಲಿಗಳ ಅಂತ್ಯದ ನಡುವೆ 40 ದಿನಗಳ ಅಂತರವಿದೆ. ನಿಯಮಗಳ ಪ್ರಕಾರ, ಒಂದು ಫಲಿತಾಂಶವು ಇನ್ನೊಂದರ ಮೇಲೆ ಪರಿಣಾಮ ಬೀರದಂತೆ ಕನಿಷ್ಠ 30 ದಿನಗಳು ಇರಬೇಕು” ಎಂದು ಅವರು ಹೇಳಿದ್ದಾರೆ.

ಗುಜರಾತ್ ವಿಧಾನಸಭೆಯ ಅವಧಿ ಫೆಬ್ರವರಿಯಲ್ಲಿ ಮತ್ತು ಹಿಮಾಚಲ ಪ್ರದೇಶದ ಅವಧಿಯು ಜನವರಿಯಲ್ಲಿ ಕೊನೆಗೊಳ್ಳುತ್ತದೆ. ಚುನಾವಣೆಗೆ ಸಜ್ಜಾಗಿರುವ ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

“ಹಿಮಾಚಲ ಪ್ರದೇಶದಲ್ಲಿ ಹವಾಮಾನದಂತಹ ಹಲವಾರು ಅಂಶಗಳಿವೆ. ಹಿಮವು ಪ್ರಾರಂಭವಾಗುವ ಮೊದಲು ರಾಜ್ಯದ ಚುನಾವಣೆಗಳನ್ನು ನಡೆಸಲು ನಾವು ಬಯಸಿದ್ದೇವೆ. ಆಯೋಗವು ವಿವಿಧ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಿದೆ” ಎಂದು ಅವರು ವಿವರಿಸಿದ್ದಾರೆ. ಹಿಮಾಚಲ ಪ್ರದೇಶಕ್ಕೆ ಚುನಾವಣಾ ನೀತಿ ಸಂಹಿತೆಯು 70 ರ ಬದಲಾಗಿ 57 ದಿನಗಳ ಕಾಲ ಅನ್ವಯಿಸುತ್ತದೆ ಎಂದು ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಬಿಜೆಪಿಗೆ ಮೋದಿ ಬಿಟ್ಟರೆ ಗತಿಯಿಲ್ಲ!

ಹಿಮಾಚಲ ಪ್ರದೇಶದಲ್ಲಿ ಮತದಾನ ಮತ್ತು ಫಲಿತಾಂಶಗಳ ನಡುವಿನ ಅಸಾಧಾರಣವಾದ ದೀರ್ಘ ಅಂತರದ ಬಗ್ಗೆ ಹಲವಾರು ರಾಜಕೀಯ ವಿಶ್ಲೇಷಕರು ಪ್ರಶ್ನಿಸಿದ್ದಾರೆ. ಅಲ್ಲಿ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಸುಮಾರು ಒಂದು ತಿಂಗಳ ನಂತರ ಅಂದರೆ ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಹಿಮಾಚಲ ಪ್ರದೇಶದ ಚುನಾವಣೆ ಮತ್ತು ಫಲಿತಾಂಶದ ದಿನಗಳ ಅಂತರದ ಹಿನ್ನಲೆಯಲ್ಲಿ, ಗುಜರಾತ್‌ ಚುನಾವಣೆಯನ್ನು ಕೂಡಾ ಶೀಘ್ರದಲ್ಲೇ ಘೋಷಿಸಲು ಚುನಾವಣಾ ಆಯೋಗವು ತಯಾರಾಗಿದೆ ಎಂಬ ಮಾತುಗಳು ಕೂಡಾ ಕೇಳಿಬರುತ್ತಿವೆ. ಆದರೆ ಗುಜರಾತ್‌ ಚುನಾವಣೆಯನ್ನು ಯಾಕೆ ಘೋಷಣೆ ಮಾಡಿಲ್ಲ ಎಂಬುವುದನ್ನು ಹೇಳಿಲ್ಲವಾದ್ದರಿಂದ ರಾಜಕೀಯವಾಗಿ ಭಾರಿ ಊಹಾಪೋಹಗಳೂ ಎದ್ದಿವೆ.

2017 ರಲ್ಲಿ ಕೂಡಾ ಎರಡು ರಾಜ್ಯಗಳಲ್ಲಿ ಪ್ರತ್ಯೇಕವಾಗಿ ಚುನಾವಣೆಗಳನ್ನು ಘೋಷಿಸಲಾಯಿತ್ತು, ಆದರೆ ಡಿಸೆಂಬರ್‌ನಲ್ಲಿ ಒಂದೇ ದಿನದಲ್ಲಿ ಫಲಿತಾಂಶಗಳನ್ನು ಘೋಷಿಸಲಾಯಿತು. ಕಳೆದ ಭಾರಿ ಗುಜರಾತ್‌ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿದೆ.

ಇದನ್ನೂ ಓದಿ: ಗುಜರಾತ್‌: ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಯುವಕರಿಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸರು

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿ ವಿರುದ್ಧ ಭಾಗಶಃ ಎಲ್ಲಾ ಸಮುದಾಯದಿಂದ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಈ ಬಾರಿ ಆಡಳಿತ ಪಕ್ಷಕ್ಕೆ ಕಾಂಗ್ರೆಸ್‌ ಮಾತ್ರವಲ್ಲದೆ, ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಕೂಡಾ ಸವಾಲಾಗಿ ಪರಿಣಮಿಸಲಿದೆ ಎಂದು ವಿಶ್ಲೇಷಿಸಲಾಗಿದೆ. ಪಂಜಾಬ್‌ನಲ್ಲಿ ತನ್ನ ಭಾರಿ ಗೆಲುವಿನ ನಂತರ ಎಎಪಿ ಗುಜರಾತ್‌ನಲ್ಲಿ ಕೂಡಾ ಆಕ್ರಮಣಕಾರಿಯಾಗಿ ಪ್ರಚಾರ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...