Homeಮುಖಪುಟಗುಜರಾತ್ | ಬಿಜೆಪಿ ಕೌನ್ಸಿಲರ್‌ನಿಂದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ, ಬ್ಲಾಕ್ ಮೇಲ್

ಗುಜರಾತ್ | ಬಿಜೆಪಿ ಕೌನ್ಸಿಲರ್‌ನಿಂದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ, ಬ್ಲಾಕ್ ಮೇಲ್

- Advertisement -
- Advertisement -

ಬಿಜೆಪಿಯ ಕೌನ್ಸಿಲರ್ ಒಬ್ಬ ವಿವಾಹಿತ ಮಹಿಳೆಯೊಬ್ಬರಿಗೆ ವೋಟರ್ ಸ್ಲಿಪ್ ನೀಡುತ್ತೇನೆ ಎಂದು ಅವರ ನಂಬರ್ ಪಡೆದು, ನಂತರ ಅವರನ್ನು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್‌ನ ಆನಂದ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಮುನ್ಸಿಪಾಲಿಟಿಯ ವಾರ್ಡ್ ನಂ. 6ರ ಬಿಜೆಪಿ ಕೌನ್ಸಿಲರ್ ದೀಪು ಗೋರ್ಧನ್‌ಭಾಯ್ ಪ್ರಜಾಪತಿ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಗುಜರಾತ್

ವೋಟರ್ ಸ್ಲಿಪ್ ನೀಡುವ ನೆಪದಲ್ಲಿ ಆರು ತಿಂಗಳ ಹಿಂದೆ ಅರೋಪಿ ಪ್ರಜಾಪತಿ ತನ್ನ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ನಂತರ ಫೋನ್ ಸಂಭಾಷಣೆಗಳ ರೆಕಾರ್ಡಿಂಗ್‌ ಇಟ್ಟು ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ. ಆನಂದ್ ಟೌನ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗುತ್ತಿದ್ದಂತೆ  ನಂತರ, ಪ್ರಜಾಪತಿ ನಾಪತ್ತೆಯಾಗಿನೆ. ಗುಜರಾತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪೊಲೀಸರು ಆತನ ಸಹಚರರನ್ನು ವಿಚಾರಣೆಗೆ ಒಳಪಡಿಸಿದ್ದು, ಅವರಲ್ಲಿ ಕೆಲವರು ಸಂತ್ರಸ್ತೆಯ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ಕೌನ್ಸಿಲರ್ ದೀಪುಭಾಯ್ ಗೋರ್ಧನಭಾಯ್ ಪ್ರಜಾಪತಿ ತನ್ನ ವೈಯಕ್ತಿಕ ಸಂಪರ್ಕ ವಿವರಗಳನ್ನು ಪಡೆಯಲು ಮತದಾರರ ಸಂಬಂಧಿತ ವಿಚಾರಣೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆನಂದ್ ನಗರದ ಸಂತ್ರಸ್ತ ವಿವಾಹಿತ ಮಹಿಳೆ ಆರೋಪಿಸಿದ್ದಾರೆ.

ಮಧ್ಯರಾತ್ರಿಯ ಸುಮಾರಿಗೆ, ಪ್ರಜಾಪತಿ ಮಹಿಳೆಯ ಮನೆಗೆ ತೆರಳಿ ಅವರ ಕುಟುಂಬಕ್ಕೆ ಬೆದರಿಕೆ ಹಾಕಿ ಅತ್ಯಾಚಾರವೆಸಗಿದ್ದಾಗಿ ಮಹಿಳೆ ಆರೋಪಿಸಿದ್ದಾರೆ. ಪತಿ ಮತ್ತು ಮಕ್ಕಳ ಬಗ್ಗೆಗಿನ ಭೀತಿಯಿಂದ ಮಹಿಳೆ ಆರಂಭದಲ್ಲಿ ಘಟನೆಯ ಬಗ್ಗೆ ಮೌನವಾಗಿದ್ದರು ಎಂದು ವರದಿ ಹೇಳಿದೆ. ರಾತ್ರಿ 10 ಗಂಟೆ ಸುಮಾರಿಗೆ ಮಹಿಳೆಯ ಪತಿ ಮತ್ತು ಮಕ್ಕಳು ಐಸ್ ಕ್ರೀಮ್ ಖರೀದಿಸಲು ಹೊರಟಿದ್ದಾಗ ಪ್ರಜಾಪತಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಘಟನೆಯ ವೇಳೆ ಪತಿ ಹಿಂತಿರುಗಿ ಪ್ರಜಾಪತಿಯನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದು, ಗಲಾಟೆಗೆ ಕಾರಣವಾಗಿತ್ತು. ಈ ವೇಳೆ ನೆರೆಹೊರೆಯವರು ಸ್ಥಳಕ್ಕಾಗಮಿಸಿದ್ದರು. ನಂತರ ಪ್ರಜಾಪತಿಯ ಸಹೋದರರು ಮತ್ತು ಸಹಚರರು ಕೋಲು ಮತ್ತು ಪೈಪ್‌ಗಳಿಂದ ಸಂತ್ರಸ್ತೆಯ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ. ಹಿಂಸಾತ್ಮಕ ಘರ್ಷಣೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದೆ.

“ನಾವು ಸಂತ್ರಸ್ತೆಯ ದೂರನ್ನು ದಾಖಲಿಸಿಕೊಂಡಿದ್ದೇವೆ ಮತ್ತು ತನಿಖೆಯನ್ನು ಪ್ರಾರಂಭಿಸಿದ್ದೇವೆ. ಪ್ರಮುಖ ಆರೋಪಿ ದೀಪು ಪ್ರಜಾಪತಿ ತಲೆಮರೆಸಿಕೊಂಡಿದ್ದು, ಗಲಾಟೆಯಲ್ಲಿ ಭಾಗಿಯಾಗಿದ್ದ ಆತನ ಇಬ್ಬರು ಸಹಚರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ” ಎಂದು ಆನಂದ್ ಟೌನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ವಿ.ಡಿ. ಝಾಲಾ ಹೇಳಿದ್ದಾರೆ.

ಅದಾಗ್ಯೂ, ಆರೋಪ ಕೇಳಿಬಂದ ಕೂಡಲೇ ಪ್ರಜಾಪತಿಯನ್ನು ಬಿಜೆಪಿ ಅಮಾನತು ಮಾಡಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...