Homeಮುಖಪುಟಗುಜರಾತ್‌: 2036ರ ಒಲಂಪಿಕ್ಸ್‌ ಆಯೋಜನೆ ಕನಸು ಕಂಡ ಬಿಜೆಪಿ ಪ್ರಣಾಳಿಕೆ

ಗುಜರಾತ್‌: 2036ರ ಒಲಂಪಿಕ್ಸ್‌ ಆಯೋಜನೆ ಕನಸು ಕಂಡ ಬಿಜೆಪಿ ಪ್ರಣಾಳಿಕೆ

- Advertisement -
- Advertisement -

ಡಿಸೆಂಬರ್ 1 ಮತ್ತು 5ರಂದು ಗುಜರಾತ್ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಡಿಸೆಂಬರ್ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಇದರ ನಡುವೆ ಡಿಸೆಂಬರ್ 4ರಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ (ಎಂಸಿಡಿ) ಚುನಾವಣೆ ನಡೆಯಲಿದ್ದು, ಡಿಸೆಂಬರ್ 7ರಂದು ಫಲಿತಾಂಶ ಪ್ರಕಟವಾಗಲಿದೆ. ಪ್ರಸ್ತುತ ಗುಜರಾತ್ ಮತ್ತು ದೆಹಲಿಯ ಮೂರು ಎಂಸಿಡಿಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

ಗುಜರಾತ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಗುಜರಾತ್ ಮತ್ತು ದೆಹಲಿ ಎಂಸಿಡಿಗಳಲ್ಲಿ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೆ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿದೆ. ಗುಜರಾತ್ ರಾಜ್ಯವು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯವೂ ಹೌದು.

ಗುಜರಾತ್‌ನಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ತೀವ್ರ ಪೈಪೋಟಿ ನೀಡುತ್ತಿವೆ. ಬಿಜೆಪಿಯ ಸ್ಟಾರ್ ಪ್ರಚಾರಕ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಮೂರು ರಾಜಕೀಯ ಪಕ್ಷಗಳ ಹಲವಾರು ನಾಯಕರು ಈಗಾಗಲೇ ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಪ್ರಸ್ತುತ ‘ಭಾರತ್ ಜೋಡೋ ಯಾತ್ರೆ’ಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು, ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮುಂಬರುವ ವಿಧಾನಸಭಾ ಚುನಾವಣೆಗಾಗಿ ಗುಜರಾತ್‌ನಲ್ಲಿ ಪ್ರಚಾರ ನಡೆಸಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಶನಿವಾರ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದನ್ನು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ಸಿಆರ್ ಪಾಟೀಲ್ ಬಿಡುಗಡೆ ಮಾಡಿದ್ದಾರೆ.

ಜೆ.ಪಿ.ನಡ್ಡಾ ಮಾತನಾಡಿ, “ಬಿಜೆಪಿಯು ‘ಗುಜರಾತ್ ಒಲಿಂಪಿಕ್ಸ್ ಮಿಷನ್’ ಪ್ರಾರಂಭಿಸುತ್ತದೆ. 2036ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸುವ ಗುರಿಯೊಂದಿಗೆ ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯವನ್ನು ರೂಪಿಸಲಾಗುತ್ತದೆ” ಎಂದು ಘೋಷಿಸಿದ್ದಾರೆ.

“ಬಿಜೆಪಿ ಗುಜರಾತ್‌ನಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ ಹೆಣ್ಣುಮಕ್ಕಳಿಗೆ ಕೆಜಿಯಿಂದ ಪಿಜಿವರೆಗೆ ಉಚಿತ ಶಿಕ್ಷಣವನ್ನು ನೀಡಲಾಗುವುದು. ಸಮಾಜ ವಿರೋಧಿ ಕೃತ್ಯಗಳ ರೂಪದಲ್ಲಿ ಸಾರ್ವಜನಿಕ ಆಸ್ತಿಯನ್ನು ಹಾನಿ ಮಾಡುವ ವ್ಯಕ್ತಿಗಳ ವಿರುದ್ಧ ಪಕ್ಷವು ಕ್ರಮ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಇದರ ನಡುವೆ ದೆಹಲಿಯಲ್ಲಿ ಬಿಜೆಪಿ ಮತ್ತು ಎಎಪಿ ನಡುವೆ ವಾಕ್ ಸಮರ ನಡೆದಿದೆ. ಚುನಾವಣಾ ಪೂರ್ವದಲ್ಲಿ ಕೇಜ್ರಿವಾಲ್ ಪಕ್ಷದವರು ಕಸದ ಸಮಸ್ಯೆಗಳು ಮತ್ತು ಕಳಪೆ ನೈರ್ಮಲ್ಯದ ಬಗ್ಗೆ ಗಮನಹರಿಸಿದ್ದಾರೆ. 15 ವರ್ಷಗಳಿಂದ ಎಂಸಿಡಿಗಳನ್ನು ಆಳುತ್ತಿರುವ ಬಿಜೆಪಿ, “ಕಸದ ಸಮಸ್ಯೆ, ಕೊಳೆಗೇರಿ ನಿವಾಸಿಗಳಿಗೆ ವಸತಿ” ಸೇರಿದಂತೆ 12 ಅಂಶಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿರಿ: ರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದು ಸುಳ್ಳು, ಅವರು ಕೇಳಿದಷ್ಟು ಸಂಭಾವನೆ ಕೊಡಲಾಗುತ್ತಿಲ್ಲವಷ್ಟೆ: ಕನ್ನಡ ನಿರ್ದೇಶಕರು ಹೇಳಿದ್ದೇನು?

ಗುಜರಾತ್ ವಿಧಾನಸಭೆ ಚುನಾವಣೆ ಡಿಸೆಂಬರ್ 1 ಮತ್ತು 5 ರಂದು ನಿಗದಿಯಾಗಿದೆ. ಗುಜರಾತ್ ವಿಧಾನಸಭೆಯ 182 ಸ್ಥಾನಗಳಿಗೆ ಒಟ್ಟು 1,621 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಹಂತದ ಮತದಾನದಲ್ಲಿ 89 ಕ್ಷೇತ್ರಗಳಿಗೆ 788 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಹಂತ-2ರಲ್ಲಿ 93 ಸ್ಥಾನಗಳಿಗೆ ಒಟ್ಟು 833 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆ ಡಿಸೆಂಬರ್ 8 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿದೆ.

ದೆಹಲಿ ಎಂಸಿಡಿಗಳ ಚುನಾವಣೆಯನ್ನು ಡಿಸೆಂಬರ್ 4 ರಂದು ನಿಗದಿಪಡಿಸಲಾಗಿದೆ. ಫಲಿತಾಂಶಗಳ ಪ್ರಕಟಣೆಯು ಡಿಸೆಂಬರ್ 7 ರಂದು ನಡೆಯಲಿದೆ. ಒಟ್ಟು ನಾಮನಿರ್ದೇಶನಗಳಲ್ಲಿ 507 ಸ್ವತಂತ್ರ ಅಭ್ಯರ್ಥಿಗಳು ಇದ್ದಾರೆ. 492 ಅಭ್ಯರ್ಥಿಗಳು ಎಎಪಿಯಿಂದ ಸ್ಪರ್ಧಿಸಿದ್ದಾರೆ. ಬಿಜೆಪಿ 423 ಅಭ್ಯರ್ಥಿಗಳನ್ನು ಸಲ್ಲಿಸಿದ್ದು, ಕಾಂಗ್ರೆಸ್‌ನಿಂದ 334, ಬಹುಜನ ಸಮಾಜ ಪಕ್ಷದಿಂದ (ಬಿಎಸ್‌ಪಿ) 149, ಜೆಡಿಯುನಿಂದ 31, ಎಐಎಂಐಎಂನಿಂದ 20 ಮತ್ತು ಸಿಪಿಐ(ಎಂ) ನಿಂದ 9 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...