Homeಮುಖಪುಟವಡೋದರಾ ದೋಣಿ ದುರಂತ; ವಿಹಾರಕ್ಕೆ ತೆರಳಿದ್ದ ಶಾಲಾ ವಿದ್ಯಾರ್ಥಿಗಳು ಬಲಿ

ವಡೋದರಾ ದೋಣಿ ದುರಂತ; ವಿಹಾರಕ್ಕೆ ತೆರಳಿದ್ದ ಶಾಲಾ ವಿದ್ಯಾರ್ಥಿಗಳು ಬಲಿ

- Advertisement -
- Advertisement -

ಗುಜರಾತಿನ ವಡೋದರಾದ ಹರ್ನಿ ಸರೋವರದಲ್ಲಿ ದೋಣಿ ಮುಳುಗಿ ವಿಹಾರಕ್ಕೆ ತೆರಳಿದ್ದ 12 ಮಕ್ಕಳು ಹಾಗೂ ಇಬ್ಬರು ಶಿಕ್ಷಕರು ಸೇರಿದಂತೆ ಒಟ್ಟು 14 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಭವಿಸಿದೆ. ದೋಣಿಯಲ್ಲಿ ಖಾಸಗಿ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು, ಅವರಲ್ಲಿ ಯಾರೂ ಲೈಫ್ ಜಾಕೆಟ್‌ಗಳನ್ನು ಧರಿಸಿರಲಿಲ್ಲ ಎಂದು ವರದಿಯಾಗಿದೆ. ಘಟನೆಯ ನಂತರ ಅಗ್ನಿಶಾಮಕ ದಳ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದೆ.

’ವಿಹಾರಕ್ಕೆಂದು ಇಲ್ಲಿಗೆ ಬಂದಿದ್ದ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಹರ್ನಿ ಸರೋವರದಲ್ಲಿ ಮುಳುಗಿದೆ. ಅಗ್ನಿಶಾಮಕ ದಳವು ಇದುವರೆಗೆ ಏಳು ವಿದ್ಯಾರ್ಥಿಗಳನ್ನು ರಕ್ಷಿಸಿದೆ, ನಾಪತ್ತೆಯಾದವರಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವಡೋದರದ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಾರ್ಥ್ ಬ್ರಹ್ಮಭಟ್ ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಕುಟುಂಬಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಮೋದಿ ಘೋಷಿಸಿದ್ದಾರೆ.

ತಮ್ಮ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ, ವಡೋದರಾಗೆ ತೆರಳುವುದಾಗಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ರಾಜ್ಯ ಸರ್ಕಾರವು ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಮತ್ತು ಗಾಯಾಳುಗಳ ಕುಟುಂಬಕ್ಕೆ 50 ಸಾವಿರ ರೂಪಾಯಿ ಪರಿಹಾರ ನೀಡಲಿದೆ ಎಂದು ಅವರು ಹೇಳಿದರು.

’ಪ್ರಸ್ತುತ, ತುರ್ತು ಮತ್ತು ಚಿಕಿತ್ಸಾ ಕಾರ್ಯಾಚರಣೆಗಳು ವ್ಯವಸ್ಥೆಯ ಮೂಲಕ ನಡೆಯುತ್ತಿವೆ. ನಾವೆಲ್ಲರೂ ಹೆಚ್ಚು ಹೆಚ್ಚು ಜೀವಗಳನ್ನು ಉಳಿಸಬಹುದೆಂದು ಭಾವಿಸುತ್ತೇವೆ ಮತ್ತು ಪ್ರಾರ್ಥಿಸುತ್ತೇವೆ’ ಎಂದು ಸಿಎಂ ಹೇಳಿದ್ದಾರೆ. ವಡೋದರಾ ಶಾಸಕ ಶೈಲೇಶ್ ಮೆಹ್ತಾ ಮಾತನಾಡಿ, ’ಇದು ಬೋಟ್ ಗುತ್ತಿಗೆದಾರರ ತಪ್ಪು, ದೋಣಿಯಲ್ಲಿ ಅದರ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರಿದ್ದರು, ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರವನ್ನು ಕೋರಲಾಗುವುದು’ ಎಂದರು.

ಇದನ್ನೂ ಓದಿ; Fact Check: ರಾಮ ಮಂದಿರ ಉದ್ಘಾಟನೆಯಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ಕೇರಳ ಸರ್ಕಾರ ನಿರ್ಧರಿಸಿದೆಯಾ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ...