Homeಮುಖಪುಟಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

- Advertisement -
- Advertisement -

ಗುಜರಾತ್‌ನ ಮೊರ್ಬಿಯಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಶತಮಾನದಷ್ಟು ಹಳೆಯದಾದ ತೂಗು ಸೇತುವೆ ಕುಸಿದು ಅಪಾರ ಸಾವು- ನೋವುಗಳು ಸಂಭವಿಸಿದವು. ಈ ಘಟನೆಯಲ್ಲಿ ನೀರಿನಲ್ಲಿ ಮುಳುಗಿದವರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು ಗಮನ ಸೆಳೆದಿದ್ದಾರೆ. ಸುಮಾರು 80ಕ್ಕೂ ಹೆಚ್ಚು ಜನರನ್ನು ಉಳಿಸಿದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಜನರನ್ನು ಕಾಪಾಡಿದ ಹುಸೇನ್ ಮೆಹಬೂಬ್ ಪಠಾಣ್, ತೌಫೀಕ್, ಸದ್ದಾಂ ಮತ್ತು ನಯೀಮ್ ಅವರಿಗೆ ಪ್ರಶಂಸೆಗಳು ವ್ಯಕ್ತವಾಗುತ್ತಿವೆ.

ಮುರಿದುಬಿದ್ದ ಸೇತುವೆಯಲ್ಲಿ ಸಾವು ಬದುಕಿನ ಜೊತೆ ಹೋರಾಡುತ್ತಿರುವ ಜನರನ್ನು ರಕ್ಷಿಸಲು ಹುಸೇನ್‌ಗೆ ಸಂಜೆ 6 ಗಂಟೆ ಸುಮಾರಿಗೆ ಕರೆ ಬಂತು. ಪರಿಣಿತ ಈಜುಗಾರನಾಗಿದ್ದ ಹುಸೇನ್ ಸ್ಥಳಕ್ಕೆ ಧಾವಿಸಿ ತನ್ನ ಸುರಕ್ಷತೆಯ ಬಗ್ಗೆ ಚಿಂತಿಸದೆ ಸುಮಾರು 50 ಜನರನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸಲು ಸಹಾಯ ಮಾಡಿದನು ಎಂದು ‘ಇಂಡಿಯಾ ಟುಮಾರೋ’ ಸುದ್ದಿ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹುಸೇನ್ ಪಠಾಣ್ ಸುಮಾರು 50 ಜೀವಗಳನ್ನು ಉಳಿಸಿದ್ದಾರೆ. “ಸಂಜೆ 6 ಗಂಟೆ ಸುಮಾರಿಗೆ ನನಗೆ ಕರೆ ಬಂತು, ಸೇತುವೆ ಕುಸಿದಿದೆ. ಜನರು ಮುಳುಗುತ್ತಿದ್ದಾರೆ ಎಂಬ ಮಾಹಿತಿ ಬಂತು. ನಾನು ಪರಿಣಿತ ಈಜುಗಾರನಾಗಿದ್ದೇನೆ. ನೀರಿಗೆ ಹಾರಿ ಸಣ್ಣ ಮಕ್ಕಳು, ಗರ್ಭಿಣಿಯರು ಮತ್ತು ಇತರರು ಸೇರಿದಂತೆ ಸುಮಾರು 50 ಜನರನ್ನು ಉಳಿಸಿದೆ. ಸೇತುವೆಯ ಮೇಲೆ ಸುಮಾರು 700 ಜನರಿದ್ದರು ಎಂದು ನಾನು ಕೇಳಿದೆ. ಈ ಸೇತುವೆ ಬಳಿ ಹೋಗಿ ಸುಮಾರು ಏಳು ತಿಂಗಳಾಗಿತ್ತು. ಸಾಧ್ಯವಾದಷ್ಟು ಜೀವಗಳನ್ನು ಉಳಿಸಲು ನಾನು ನನ್ನ ಕೈಲಾದಷ್ಟು ಪ್ರಯತ್ನ ಮಾಡಿದ್ದೇನೆ” ಎಂದು ಹುಸೇನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮತ್ತೋರ್ವ ಮುಸ್ಲಿಂ ಯುವಕ ಸದ್ದಾಂ, “ನನಗೆ ಈಜು ಗೊತ್ತಿಲ್ಲ, ಆದ್ದರಿಂದ ನಾನು ಯಾರನ್ನೂ ಮುಳುಗದಂತೆ ರಕ್ಷಿಸಲಿಲ್ಲ, ಆದರೆ ನಾನು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಇತರರಿಗೆ ಸಹಾಯ ಮಾಡಿದೆ” ಎಂದು ಹೇಳಿದ್ದಾರೆ.

“ನಾವು 15 ಮೀನುಗಾರರ ಪರಿಣಿತ ತಂಡವನ್ನು ಹೊಂದಿದ್ದೇವೆ. ಎಲ್ಲಾ ಉತ್ತಮ ಈಜುಗಾರರಾಗಿದ್ದಾರೆ. ಮೋರ್ಬಿಯಲ್ಲಿರುವ ಮಿಯಾನಾ ಸಮುದಾಯದವರು ನಾವು. ಅಂತಹ ಯಾವುದೇ ದುರಂತ ಸಂಭವಿಸಿದಾಗ ನಾವು ಜೀವಗಳನ್ನು ಉಳಿಸಲು ಧಾವಿಸುತ್ತೇವೆ. ಸೇತುವೆ ಕುಸಿದ ನಂತರ ನಮ್ಮ ಸಮುದಾಯವು, ಮಚ್ಚು ನದಿಯಲ್ಲಿ ಮುಳುಗುತ್ತಿದ್ದ ಸುಮಾರು 80 ಜನರನ್ನು ರಕ್ಷಿಸಿದೆ” ಎಂದು ಸಮುದಾಯದ ವಯಸ್ಸಾದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ತನ್ನ ಸ್ನೇಹಿತರ ಜೊತೆ ಸೇರಿ ಹಲವಾರು ಜೀವಗಳನ್ನು ಉಳಿಸಿದ ನಯೀಮ್ ಶೇಖ್, “ಒಬ್ಬ ವ್ಯಕ್ತಿಯ ಜೀವವನ್ನು ಉಳಿಸುವ ಪ್ರಯತ್ನದಲ್ಲಿ ನನ್ನ ಸ್ನೇಹಿತರೊಬ್ಬರು ಸಾವನ್ನಪ್ಪಿದ್ದಾರೆ” ಎಂದಿದ್ದಾರೆ. ನಾನು ಮತ್ತು ನನ್ನ ಸ್ನೇಹಿತರು ಸೇರಿ 50 ರಿಂದ 60 ಜನರನ್ನು ಉಳಿಸಿದ್ದೇವೆ ಎಂದು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಅಪಘಾತದ ವೇಳೆ ಸೇತುವೆ ಮೇಲೆ 400-500 ಮಂದಿ ಇದ್ದರು. ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆಗೆ ಸಿಲುಕಿದ್ದರು. ಆದರೆ ಈ ಸಂತ್ರಸ್ತರಲ್ಲಿ ಹಲವಾರು ಜನರ ಪ್ರಾಣ ಉಳಿಸಿದ ಕೆಲವರು ಇದ್ದಾರೆ. ಅವರಲ್ಲಿ ಒಬ್ಬರು ನಯೀಮ್ ಶೇಖ್. ಇತರರ ಜೀವಗಳನ್ನು ಉಳಿಸಲು ತನ್ನ ಪ್ರಾಣವನ್ನೂ ಅಪಾಯಕ್ಕೆ ತಳ್ಳಿದ್ದರು.

ಇದನ್ನೂ ಓದಿರಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಮುಸ್ಲಿಂ ಯುವಕರ ಸಾಹಸಗಾಥೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. “ಇದು ದ್ವೇಷದ ವ್ಯಾಪಾರಿಗಳಿಗೆ ಸೂಕ್ತವಾದ ಪ್ರತ್ಯುತ್ತರ! ಮಾನವೀಯತೆಯು ಎಲ್ಲಾ ಧರ್ಮಗಳನ್ನು ಮೀರಿದೆ” ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

ದೇವ್ ದೇಸಾಯಿ ಎಂಬವರು ಟ್ವೀಟ್ ಮಾಡಿ, “ಇಬ್ಬರು ದೇವತೆಗಳು. ತೌಫೀಕ್ ಭಾಯಿ ಮತ್ತು ಹುಸೇನ್ ಪಠಾಣ್. ತೌಫೀಕ್ ಭಾಯ್ ಆಸ್ಪತ್ರೆಗೆ 35 ಜನರನ್ನು ಆಸ್ಪತ್ರೆಗೆ ಕರೆದೊಯ್ದರೆ, ಈಜುಗಾರ ಹುಸೇನ್ ಪಠಾಣ್ ಈಜುವ ಮೂಲಕ 50 ಜೀವಗಳನ್ನು ಉಳಿಸಿದರು” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...