Homeಮುಖಪುಟಗುಜರಾತ್ ಸಂಪುಟ ಪುನರ್‌ ರಚನೆ : ಸಿಎಂ ಪಟೇಲ್ ಹೊರತುಪಡಿಸಿ ಎಲ್ಲ ಸಚಿವರು ರಾಜೀನಾಮೆ

ಗುಜರಾತ್ ಸಂಪುಟ ಪುನರ್‌ ರಚನೆ : ಸಿಎಂ ಪಟೇಲ್ ಹೊರತುಪಡಿಸಿ ಎಲ್ಲ ಸಚಿವರು ರಾಜೀನಾಮೆ

- Advertisement -
- Advertisement -

ಸಂಪುಟ ಪುನರ್‌ ರಚನೆಗೆ ಮುಂದಾಗಿರುವ ಗುಜರಾತ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೊರತುಪಡಿಸಿ ಎಲ್ಲಾ ಸಚಿವರು ತಮ್ಮ ಸ್ಥಾನಗಳಿಗೆ ಗುರುವಾರ (ಅ.16) ಸಂಜೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಿಎಂ ಭೂಪೇಂದ್ರ ಪಟೇಲ್ ಅವರು ಇಂದು ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ಹೊಸ ಸಚಿವರ ಪಟ್ಟಿಯನ್ನು ಸಲ್ಲಿಸುವ ನಿರೀಕ್ಷೆಯಿದ್ದು, ನಾಳೆ (ಶುಕ್ರವಾರ) ಬೆಳಿಗ್ಗೆ 11:30ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೂ ಮುನ್ನ ಗಾಂಧಿನಗರಕ್ಕೆ ಆಗಮಿಸಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -