Homeಮುಖಪುಟಟ್ರಂಪ್ ಆಗಮನಕ್ಕೆ ತಯಾರಿ : ಸ್ಲಂಗಳಿಗೆ ಅಡ್ಡವಾಗಿ ಗೋಡೆ ಕಟ್ಟುತ್ತಿರುವ ಗುಜರಾತ್ ಸರ್ಕಾರ!!

ಟ್ರಂಪ್ ಆಗಮನಕ್ಕೆ ತಯಾರಿ : ಸ್ಲಂಗಳಿಗೆ ಅಡ್ಡವಾಗಿ ಗೋಡೆ ಕಟ್ಟುತ್ತಿರುವ ಗುಜರಾತ್ ಸರ್ಕಾರ!!

ಏರ್ಪೋರ್ಟ್ ದಾರಿಯನ್ನು ಸುಂದರೀಕರಣಗೊಳಿಸುತ್ತಿದ್ದೇವೆ ಎನ್ನುತ್ತಿರು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್

- Advertisement -
- Advertisement -

ಫೆಬ್ರವರಿ 24ಕ್ಕೆ ಗುಜರಾತ್‌ಗೆ ಅಮೆರಿಕದ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೊತೆರಾದ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ಅಂದು ಹೌಡಿ ಟ್ರಂಪ್‌ ಕಾರ್ಯಕ್ರಮ ನಡೆಯಲಿದೆ. ಹಾಗಾಗಿ ಅದರ ಸುತ್ತ ಇರುವ ಸ್ಲಂಗಳನ್ನು ಮರೆಮಾಚಿ, ಸೌಂದರ್ಯಗೊಳಿಸುವಿಕೆಯ ಭಾಗವಾಗಿ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗಾಂಧಿನಗರಕ್ಕೆ ಹೋಗುವ ಅರ್ಧ ಕಿಲೋಮೀಟರ್ ನಷ್ಟು ಉದ್ದದ ಹಾಗೂ ಆರರಿಂದ ಏಳು ಅಡಿ ಎತ್ತರದ ಗೋಡೆಯನ್ನು ಅಹಮದಾಬಾದ್ ಸ್ಥಳೀಯ ಸಂಸ್ಥೆ ನಿರ್ಮಿಸುತ್ತಿದೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದಿರಾ ಸೇತುವೆಗೆ ಸಂಪರ್ಕಿಸುವ ರಸ್ತೆಯ ಉದ್ದಕ್ಕೂ ಈ ಗೋಡೆಯನ್ನು ಸುಂದರೀಕರಣದ ಹೆಸರಲ್ಲಿ ನಿರ್ಮಿಸುತ್ತಿದೆ. ಆದರೆ ಇದು ಟ್ರಂಪ್‌ ಬರುತ್ತಿರುವ ಹಿನ್ನೆಲೆಯಲ್ಲಿ ಕೊಳೆಗೇರಿ ಪ್ರದೇಶವನ್ನು ಮರೆಮಾಚಲು ಮಾಡುತ್ತಿರುವ ಕೆಲಸ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಇಲ್ಲಿ ಫೆಬ್ರವರಿ 24 ರಂದು ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಯುವ ಸಾಧ್ಯತೆಯಿದೆ.

“ಕೊಳೆಗೇರಿ ಪ್ರದೇಶದಲ್ಲಿ 600 ಮೀಟರ್ ವಿಸ್ತಾರದಲ್ಲಿ 6-7 ಅಡಿ ಎತ್ತರದ ಗೋಡೆಯನ್ನು ನಿರ್ಮಿಸಲಾಗುತ್ತಿದೆ. ಇದರ ನಂತರ ಪ್ಲಾಂಟೇಶನ್ ಡ್ರೈವ್ ನಡೆಯಲಿದೆ” ಎಂದು ಹೆಸರು ಹೇಳಲು ಇಚ್ಚಿಸದ ಎಎಂಸಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ತನ್ನ ವರದಿಯಲ್ಲಿ ತಿಳೀಸಿದೆ.

2017 ರಲ್ಲಿ ನಡೆದ 12 ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್ ಪ್ರಧಾನಿ ಶಿಂಜೊ ಅಬೆ ಮತ್ತು ಅವರ ಪತ್ನಿ ಅಕಿ ಅಬೆ ಅವರ ಎರಡು ದಿನಗಳ ಗುಜರಾತ್ ಪ್ರವಾಸದ ಸಂದರ್ಭದಲ್ಲಿ ಕೂಡಾ ಇದೇ ರೀತಿಯ ಸುಂದರೀಕರಣವನ್ನು ಮಾಡಲಾಗಿತ್ತು.

ನರೆಂದ್ರ ಮೋದಿಯವರು 2013-14ರ ಅವಧಿಯಲ್ಲಿ ದೇಶಾದ್ಯಂತ ಗುಜರಾತ್‌ ಮಾಡೆಲ್‌ ಕುರಿತು ಮಾತನಾಡಿದ್ದರು. ಮಾಧ್ಯಮಗಳು ಸಹ ಅದನ್ನು ಪ್ರಸಾರ ಮಾಡಿದ್ದವು. ಆದರೆ ಆನಂತರ ಅದರ ಬಗ್ಗೆ ಸುದ್ದಿಯೇ ಇಲ್ಲವಾಯಿತು. ಈಗ ಸ್ಲಂಗಳನ್ನು ಮರೆಮಾಚುತ್ತಿರುವುದು ಸಹ ತಮ್ಮ ಸುಳ್ಳುಗಳನ್ನು ಮುಚ್ಚಿಕೊಳ್ಳಲ್ಲಿಕ್ಕೆ ಆಗಿದೆ ಎಂಬ ಆರೋಪ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...