Homeಮುಖಪುಟಡ್ರಗ್ಸ್ ಪ್ರಕರಣ: ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ...

ಡ್ರಗ್ಸ್ ಪ್ರಕರಣ: ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ಕೋರ್ಟ್

- Advertisement -
- Advertisement -

1996ರಲ್ಲಿ ವಕೀಲರೊಬ್ಬರನ್ನು ಬಂಧಿಸಲು ಡ್ರಗ್ಸ್ ಇಟ್ಟಿದ ಪ್ರಕರಣದಲ್ಲಿ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಪಾಲನ್‌ಪುರದ ಸೆಷನ್ಸ್ ನ್ಯಾಯಾಲಯವು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಈಗಾಗಲೇ ಕಸ್ಟಡಿ ಸಾವಿನ ಪ್ರಕರಣದಲ್ಲಿ ಜೈಲು ಸೇರಿರುವ ಭಟ್, 1996ರಲ್ಲಿ ರಾಜಸ್ಥಾನ ಮೂಲದ ವಕೀಲರು ತಂಗಿದ್ದ ಪಾಲನ್ಪುರದ ಹೋಟೆಲ್ ಕೊಠಡಿಯಿಂದ ಡ್ರಗ್ಸ್ ವಶಪಡಿಸಿಕೊಂಡಿದ್ದ ಸುಳ್ಳು ಪ್ರಕರಣದಲ್ಲಿ ವಕೀಲರನ್ನು ಸಿಲುಕಿಸಿದ್ದರು ಎನ್ನಲಾಗಿದೆ.

2015ರಲ್ಲಿ ಐಪಿಎಸ್ ಸೇವೆಯಿಂದ ವಜಾಗೊಂಡ ಭಟ್ ಅವರು, ಆ ಸಮಯದಲ್ಲಿ ಬನಸ್ಕಾಂತ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜೆ ಎನ್ ಠಕ್ಕರ್ ಅವರು ಬುಧವಾರ ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳಡಿ ಭಟ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದರು. ಗುರುವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ.

ಈಗಾಗಲೇ ಜೈಲಿನಲ್ಲಿರುವ ಸಂಜೀವ್ ಭಟ್ :

1990ರಲ್ಲಿ ಜಾಮ್‌ನಗರದಲ್ಲಿ ಸಂಭವಿಸಿದ್ದ ಗಲಭೆಯ ವೇಳೆ 150 ಜನರನ್ನು ಸಂಜೀವ್ ಭಟ್ ನೇತೃತ್ವದಲ್ಲಿ ಪೊಲೀಸರು ಬಂಧಿಸಿದ್ದರು. ಆ ವೇಳೆ ಸಂಜೀವ್ ಭಟ್ ಜಾಮ್‌ನಗರದ ಹೆಚ್ಚುವರಿ ಪೊಲೀಸ್‌ ಸೂಪರಿಂಟೆಂಡೆಂಟ್‌ ಆಗಿದ್ದರು. ಸಂಜೀವ್‌ ಭಟ್‌ನಿಂದ ಬಂಧನಕ್ಕೆ ಒಳಗಾಗಿದ್ದ ಪ್ರಭುದಾಸ್ ವೈಷ್ಣಾನಿ ಎಂಬ ವ್ಯಕ್ತಿ ಕೆಲ ದಿನಗಳ ನಂತರ ಮೂತ್ರಪಿಂಡ ವೈಫಲ್ಯದಿಂದ ಮೃತಪಟ್ಟಿದ್ದರು. ಕಸ್ಟಡಿಯಲ್ಲಿ ಸಂಜೀವ್ ಭಟ್ ಚಿತ್ರ ಹಿಂಸೆ ನೀಡಿರುವುದೇ ವೈಷ್ಣಾನಿ ಅವರ ಸಾವಿಗೆ ಕಾರಣ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದರು. ವೈಷ್ಣಾನಿ ಸಾವಿನ ಪ್ರಕರಣದಲ್ಲಿ ಭಟ್ ಪ್ರಸ್ತುತ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಸಂಜೀವ್ ಭಟ್, 2002ರ ಗುಜರಾತ್ ಗಲಭೆಯಲ್ಲಿ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿ ಗಮನ ಸೆಳೆದಿದ್ದರು.

ಇದನ್ನೂ ಓದಿ : ಅಣ್ಣಾಮಲೈ ನಾಮಪತ್ರ ತಿರಸ್ಕರಿಸುವಂತೆ ಡಿಎಂಕೆ, ಎಐಡಿಎಂಕೆಯಿಂದ ಚು. ಆಯೋಗಕ್ಕೆ ಮನವಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...