Homeಮುಖಪುಟಗುಜರಾತ್ ಫಲಿತಾಂಶ: ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿಗೆ ಅಲ್ಪ ಹಿನ್ನಡೆ

ಗುಜರಾತ್ ಫಲಿತಾಂಶ: ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿಗೆ ಅಲ್ಪ ಹಿನ್ನಡೆ

- Advertisement -
- Advertisement -

ತೀವ್ರ ಕೂತುಹಲ ಕೆರಳಿಸಿದ್ದ ಗುಜರಾತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ವಡ್ಗಾಮ್ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದ ಯುವ ದಲಿತ ಹೋರಾಟಗಾರ ಈ ಬಾರಿ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷದ ಟಿಕೆಟ್‌ನಡಿ ಸ್ಪರ್ಧಿಸಿದ್ದಾರೆ. ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ 2,000 ಮತಗಳಷ್ಟು ಹಿನ್ನಡೆ ಅನುಭವಿಸಿದ್ದ ಅವರು ಸದ್ಯ 1,192 ಮತಗಳ ಅಂತರದಿಂದ ಹಿನ್ನಡೆ ಅನುಭವಿಸುತ್ತಿದ್ದಾರೆ.

9ನೇ ಸುತ್ತಿನ ಮತ ಎಣಿಕೆ ಮುಗಿದಾಗ ಜಿಗ್ನೇಶ್ ಮೇವಾನಿ 36,901 ಮತಗಳನ್ನು ಪಡೆದಿದ್ದರೆ ಬಿಜೆಪಿ ಅಭ್ಯರ್ಥಿ ಮನಿಬಾಯ್ ವಘೇಲ 38,093 ಮತಗಳನ್ನು ಪಡೆದು ಅಲ್ಪ ಮುನ್ನಡೆ ಸಾಧಿಸಿದ್ದಾರೆ.

ಪ.ಜಾ ಮೀಸಲು ಕ್ಷೇತ್ರವಾದ ವಡ್ಗಾಮ್‌ನಲ್ಲಿ ಜಿಗ್ನೇಶ್ ಮೇವಾನಿಯವರಿಗೆ ಬಿಜೆಪಿ ಅಭ್ಯರ್ಥಿ ಮನಿಬಾಯ್ ವಘೇಲ ತುರುಸಿನ ಸ್ಪರ್ಧೆ ನೀಡುತ್ತಿದ್ದಾರೆ.  ವಘೇಲ 2012ರಲ್ಲಿ ಕಾಂಗ್ರೆಸ್ ಪಕ್ಷದಿಂದ ಈ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದರು. ಆದರೆ 2017ರಲ್ಲಿ ಜಿಗ್ನೇಶ್ ಮೇವಾನಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆಗ ಕಾಂಗ್ರೆಸ್ ಪಕ್ಷವು ಅವರಿಗೆ ಬೆಂಬಲ ಸೂಚಿಸಿ ತಮ್ಮ ಪಕ್ಷದ ಅಭ್ಯರ್ಥಿ ಹಾಕದೆ ಜಿಗ್ನೇಸ್ ಗೆಲುವಿಗೆ ಸಹಕರಿಸಿತ್ತು.

ಆದರೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ವಘೇಲ 2021ರಲ್ಲಿ ಬಿಜೆಪಿ ಪಕ್ಷ ಸೇರಿದ್ದರು. ಅವರು ಈ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಡಿ ಸ್ಪರ್ಧಿಸಿದ್ದಾರೆ.

ವಕೀಲರಾಗಿ, ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಜಿಗ್ನೇಶ್ ಮೇವಾನಿ ದಲಿತರಿಗೆ ಭೂಮಿ ದೊರಕಿಸಿಕೊಡಲು ಹೋರಾಡುತ್ತಿದ್ದರು. ಆದರೆ ಊನಾದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಅವರು ನಡೆಸಿದ ಬೃಹತ್ ಹೋರಾಟದ ಮೂಲಕ ಅವರು ದೇಶದ ಗಮನ ಸೆಳೆದಿದ್ದರು.

ಸದ್ಯಕ್ಕೆ ಗುಜರಾತ್‌ನ ಒಟ್ಟು 182 ಕ್ಷೇತ್ರಗಳ ಪೈಕಿ ಬಿಜೆಪಿಯು 154 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸತತ 7ನೇ ಬಾರಿಗೆ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ.

ಇದನ್ನೂ ಓದಿ: ಹಿಮಾಚಲಪ್ರದೇಶ: ಸರ್ಕಾರ ರಚಿಸುವತ್ತ ಕಾಂಗ್ರೆಸ್ ದಾಪುಗಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...