Homeದಲಿತ್ ಫೈಲ್ಸ್ಗುಜರಾತ್‌: ದಲಿತ ಬಾಲಕ ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ್ರು...

ಗುಜರಾತ್‌: ದಲಿತ ಬಾಲಕ ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ್ರು…

- Advertisement -
- Advertisement -

ಕ್ರಿಕೆಟ್ ಆಡುತ್ತಿದ್ದಾಗ ದಲಿತ ಬಾಲಕ ಚೆಂಡನ್ನು ಮುಟ್ಟಿದ ವಿಚಾರವಾಗಿ ಜಗಳವಾಗಿ ದಲಿತ ವ್ಯಕ್ತಿಯೊಬ್ಬರ ಹೆಬ್ಬರಳನ್ನೇ ಕತ್ತರಿಸಿರುವ ಘಟನೆ ಗುಜರಾತ್‌ನ ಪಟಾನ್ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಾಕೋಶಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಾಲೆಯ ಆಟದ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಆ ವೇಳೆ ದಲಿತ ಬಾಲಕ (ಹೆಬ್ಬೆರಳು ಕಳೆದುಕೊಂಡ ವ್ಯಕ್ತಿಯ ಸಹೋದರನ ಪುತ್ರ) ಕ್ರಿಕೆಟ್ ಬಾಲನ್ನು ಎತ್ತಿಕೊಟ್ಟಿದ್ದನು. ಈ ವಿಚಾರವಾಗಿ ಜಗಳವಾಗಿ ಬಾಲಕನ ಚಿಕ್ಕಪ್ಪನ ಮೇಲೆ ಸವರ್ಣೀಯ ಜಾತಿಯ ಗುಂಪು ಹಲ್ಲೆ ನಡೆಸಿದೆ. ನಂತರ ಅವರ ಹೆಬ್ಬರಳನ್ನು ಕತ್ತರಿಸಿ ವಿಕೃತಿ ಮೆರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

“ಗ್ರಾಮದ ಶಾಲೆಯ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದ್ದಾಗ ಚೆಂಡನ್ನು ಎತ್ತಿಕೊಂಡ ಬಾಲಕನಿಗೆ ಜಾತಿವಾದಿಗಳು ಬೆದರಿಕೆ ಹಾಕಿದ್ದರು. ಕೋಪಗೊಂಡು ಪ್ರತಿಕ್ರಿಯೆ ನೀಡಿದ್ದರು” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ದಲಿತ ಸಮುದಾಯದ ಜನರನ್ನು ಅವಮಾನಿಸುವ ಮತ್ತು ಬೆದರಿಸುವ ಉದ್ದೇಶದಿಂದ ಇವರು ಜಾತಿ ನಿಂದನೆಗಳನ್ನು ಮಾಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಯ ವೇಳೆ ಬಾಲಕನ ಚಿಕ್ಕಪ್ಪ ಧೀರಜ್ ಪರ್ಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಸಂಜೆ ವೇಳೆಗೆ ಈ ಘಟನೆ ಮತ್ತೊಂದು ತಿರುವು ಪಡೆಯಿತು. ಏಳು ಜನರ ಗುಂಪು ಹರಿತವಾದ ಆಯುಧಗಳಿಂದ ಶಸ್ತ್ರಸಜ್ಜಿತವಾಗಿ ಬಂದು ಧೀರಜ್ ಮತ್ತು ಅವರ ಮತ್ತೊಬ್ಬ ಸಹೋದರ ಕೀರ್ತಿ ಮೇಲೆ ಹಲ್ಲೆ ನಡೆಸಿತು ಎಂದು ಪೊಲೀಸರು ವಿವರಿಸಿದ್ದಾರೆ.

ಕೀರ್ತಿ ಅವರ ಹೆಬ್ಬೆರಳನ್ನು ಆರೋಪಿಯೊಬ್ಬ ಕತ್ತರಿಸಿ ಗಂಭೀರವಾಗಿ ಗಾಯಗೊಳಿಸಿದನು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 326 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಆಯುಧಗಳಿಂದ ಗಂಭೀರ ಗಾಯವನ್ನು ಉಂಟುಮಾಡುವುದು), 506 (ಕ್ರಿಮಿನಲ್ ಬೆದರಿಕೆ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಹಾಗೂ ‘ಎಸ್‌ಸಿ ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ಯ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಆರೋಪಿಗಳನ್ನು ಬಂಧಿಸುವ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ನಡೆದಿದ್ದ ಮತ್ತೊಂದು ಘಟನೆ

ಉತ್ತಮ ಬಟ್ಟೆ ಮತ್ತು ಕೂಲಿಂಗ್ ಗ್ಲಾಸ್‌ ಧರಿಸಿದ ಕಾರಣಕ್ಕಾಗಿ ಸವರ್ಣೀಯ ಜಾತಿಯ ಗುಂಪೊಂದು ದಲಿತ ವ್ಯಕ್ತಿಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದ ಘಟನೆ ಗುಜರಾತ್‌ನ ಬನಸ್ಕಾಂತ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಇತ್ತೀಚೆಗೆ ನಡೆದಿತ್ತು.

ಸಂತ್ರಸ್ತ ವ್ಯಕ್ತಿ ಜಿಗರ್ ಶೆಖಾಲಿಯಾ ಅವರು ನೀಡಿದ ದೂರಿನ ಆಧಾರದ ಮೇಲೆ ಏಳು ಜನರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿತ್ತು. ಒಳ್ಳೆಯ ಬಟ್ಟೆ ಮತ್ತು ಕನ್ನಡಕ ಧರಿಸಿದ್ದಕ್ಕಾಗಿ ಅಸಮಾಧಾನಗೊಂಡ ಸವರ್ಣೀಯ ಗುಂಪು, ಜಿಗರ್‌ ಮತ್ತು ಆತನ ತಾಯಿಗೆ ಹೊಡೆದಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Very very unfortunate things happened deliberately again & again , shameful to this hatred society,that to our self boosted , uneducated,dishonest,PM modiji homeland

LEAVE A REPLY

Please enter your comment!
Please enter your name here

- Advertisment -

Must Read

ಮಥುರಾ ಭೂ ವಿವಾದ: ಫೆಬ್ರವರಿ 29ರಂದು ಅಲಹಾಬಾದ್ ಹೈಕೋರ್ಟಿನಲ್ಲಿ ವಿಚಾರಣೆ

0
ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ಹೂಡಿರುವ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಮುಂದಿನ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಫೆಬ್ರವರಿ 29ಕ್ಕೆ ನಿಗದಿಪಡಿಸಿದೆ. ಶಾಹಿ ಈದ್ಗಾ ಇಂತೇಜಾಮಿಯಾ ಸಮಿತಿಯು ಕತ್ರ...