Homeದಲಿತ್ ಫೈಲ್ಸ್ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

- Advertisement -
- Advertisement -

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮೇ 10 ರಂದು ಗ್ರಾಮದ ಡೈರಿಯ ಬಳಿ ನಡೆದ ಈ ಘಟನೆಯು, ಸಮಾಜದಲ್ಲಿ ದಲಿತರ ಒಳಗೊಳ್ಳುವಿಕೆ ಮತ್ತು ಸಮಾನತೆಗೆ ಪ್ರತಿರೋಧದ ಮತ್ತೊಂದು ನಿದರ್ಶನವಾಗಿದೆ. ಹೆಚ್ಚಿನ ಭಾರತೀಯ ವಿವಾಹದ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವುದು ವಾಡಿಕೆಯಾಗಿದೆ. ಆದರೆ, ಈ ಸಂಪ್ರದಾಯ ಪಾಲಿಸುವ ದಲಿತ ಕುಟುಂಬಗಳನ್ನು ಪದೇ ಪದೇ ಗುರಿಯಾಗಿಸಿಕೊಳ್ಳಲಾಗುತ್ತಿದೆ.

ದಲಿತ ಸಮುದಾಯಕ್ಕೆ ಸೇರಿದ ವರ ಮಾಯಾಂಕ್ ರಾವತ್ ಅವರ ಸಹೋದರ ಭಾವಿಕ್ ರಾವತ್ ಮಾತನಾಡಿ, “ದರ್ಬಾರ್ ಸಮುದಾಯದ ತುವ್ರಾಜ್‌ಸಿನ್ಹ್ ಚೌಹಾಣ್ ಮತ್ತು ನಿಕುಲ್ಸಿನ್ಹ್ ಚೌಹಾಣ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. “ಆರೋಪಿಗಳು ಜಾತಿ ನಿಂದನೆ ಮಾಡಿ ವರನಿಗೆ ಹಲ್ಲೆ ಮಾಡಿ ನಿಂದಿಸಿದ್ದಾರೆ, ಮೆರವಣಿಗೆಗಾಗಿ ಕುದುರೆ ಹತ್ತುವುದು ದರ್ಬಾರ್‌ನ ಹಕ್ಕು ಮಾತ್ರ ಎಂದು ಹೇಳಿರುವುದಾಗಿ” ವರದಿಯಾಗಿದೆ.

ಆರೋಪಿಗಳು ಕುಟುಂಬಕ್ಕೆ ಬರಾತ್ ಮುಂದುವರಿಸದಂತೆ ಬೆದರಿಕೆ ಹಾಕಿದರು. ಇದರಿಂದಾಗಿ ಆತನ ಸಂಬಂಧಿಕರು ಮದುವೆ ಸಮಾರಂಭಕ್ಕೆ ಅಹಮದಾಬಾದ್‌ಗೆ ಹೋಗುವುದನ್ನು ತಪ್ಪಿಸಬೇಕಾಯಿತು.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿಗಳಾದ ತುವ್ರಜ್‌ಸಿನ್ಹ್ ಮತ್ತು ನಿಕುಲ್ಸಿನ್ಹ್ ವಿರುದ್ಧ ಲಾಡೋಲ್ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಕೌಶಿಕ್ ಅವರ ಪ್ರಕಾರ, ಸಾಂವಿಧಾನಿಕ ರಕ್ಷಣೆಗಳ ಹೊರತಾಗಿಯೂ ದಲಿತರು ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂಬುದನ್ನು ಈ ದಾಳಿ ಸಾಬೀತುಪಡಿಸುತ್ತದೆ ಎಂದಿದ್ದಾರೆ.

ದಲಿತರ ಮದುವೆ ಮೆರವಣಿಗೆಗಳ ಮೇಲೆ ನಿರಂತರ ದಾಳಿ

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ದಲಿತ ವರರು ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವುದನ್ನು ವಿರೋಧಿಸಿ ಪ್ರಬಲ ಜಾತಿ ಜನರು ಹಲ್ಲೆ, ನಿಂದನೆ ಅಥವಾ ಸಾಮಾಜಿಕ ಬಹಿಷ್ಕಾರ ಹಾಕುವ ಘಟನೆಗಳು ಇತ್ತೀಚಿನ ವರ್ಷಗಳಲ್ಲಿ ವರದಿಯಾಗುತ್ತಲೇ ಇವೆ. ಇದು ಸಮಾಜದಲ್ಲಿ ಇಂದಿಗೂ ಬೇರೂರಿರುವ ಜಾತೀಯತೆ ಮತ್ತು ತಾರತಮ್ಯವನ್ನು ಎತ್ತಿ ತೋರಿಸುತ್ತದೆ.

ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿವೆ. ಮೆಹ್ಸಾನಾ ಜಿಲ್ಲೆಯ ಘಟನೆಯಲ್ಲದೆ, ಇತ್ತೀಚೆಗೆ ಇತರ ಭಾಗಗಳಲ್ಲೂ ಇಂತಹ ಘಟನೆಗಳು ನಡೆದಿವೆ. ಗಾಂಧಿನಗರ ಜಿಲ್ಲೆಯಲ್ಲಿ ನಡೆದ ಮದುವೆ ಮೆರವಣಿಗೆಯೊಂದರಲ್ಲಿ ದಲಿತ ವರನೊಬ್ಬ ಕುದುರೆ ಏರಿದ್ದಕ್ಕಾಗಿ ಪ್ರಬಲಜಾತಿ ಯುವಕರ ಗುಂಪೊಂದು ಆತನನ್ನು ಕೆಳಗಿಳಿಸಿ, ಹಲ್ಲೆ ನಡೆಸಿತ್ತು. ವರನಿಗೆ ರಕ್ಷಣೆ ನೀಡಲು ಪೊಲೀಸರು ಹರಸಾಹಸ ಪಡಬೇಕಾಯಿತು.

    ಬನಸ್ಕಾಂತ ಜಿಲ್ಲೆಯಲ್ಲಿ ಸಹ ದಲಿತ ವರ ಕುದುರೆ ಸವಾರಿ ಮಾಡಬಾರದು ಎಂದು ಗ್ರಾಮದ ಮೇಲ್ಜಾತಿಯ ಮುಖಂಡರು ಫತ್ವಾ ಹೊರಡಿಸಿದ್ದರು. ಇದನ್ನು ಮೀರಿ ಮೆರವಣಿಗೆ ನಡೆಸಿದಾಗ ಕಲ್ಲು ತೂರಾಟ ನಡೆಸಲಾಗಿತ್ತು. ನಂತರ ಇಡೀ ಗ್ರಾಮಕ್ಕೆ ಪೊಲೀಸ್ ಬಂದೋಬಸ್ತ್ ಒದಗಿಸಬೇಕಾಯಿತು.

    ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಸಹ ಇಂತಹ ಪ್ರಕರಣಗಳು ನಡೆದಿವೆ. ಛತ್ತರ್‌ಪುರ್ ಜಿಲ್ಲೆಯ ದಲಿತ ಯುವಕನೊಬ್ಬ ಮದುವೆ ದಿನ ಕುದುರೆ ಸವಾರಿ ಮಾಡಿದ್ದಕ್ಕಾಗಿ ಮೇಲ್ಜಾತಿ ಪುರುಷರ ಗುಂಪೊಂದು ಆತನ ಮನೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿತ್ತು.

      ಬುಂದೇಲ್‌ಖಂಡ್ ಪ್ರದೇಶದ ಒಂದು ಹಳ್ಳಿಯಲ್ಲಿ ದಲಿತ ವರನ ಮೆರವಣಿಗೆಗೆ ಕಲ್ಲು ತೂರಾಟ ನಡೆಸಿದ ನಂತರ, ವರನಿಗೆ ಹೆಲ್ಮೆಟ್ ಹಾಕಿಸಿ ಸುಮಾರು 100 ಕ್ಕೂ ಹೆಚ್ಚು ಪೊಲೀಸರ ಕಾವಲಿನಲ್ಲಿ ಮದುವೆ ಮೆರವಣಿಗೆಯನ್ನು ಪೂರ್ಣಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

      ರಾಜಸ್ಥಾನದ ಭಿಲ್ವಾರಾ ಮತ್ತು ಜಲೋರ್ ಜಿಲ್ಲೆಗಳಲ್ಲಿ ಸಹ ಇಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜಸ್ಥಾನದ ಗ್ರಾಮೀಣ ಭಾಗಗಳಲ್ಲಿ ಮದುವೆ ಮೆರವಣಿಗೆ ವೇಳೆ ಇಂತಹ ಸಂಘರ್ಷಗಳು ಹೆಚ್ಚಾಗಿ ನಡೆಯುತ್ತವೆ.

        ಭಿಲ್ವಾರಾ ಜಿಲ್ಲೆಯಲ್ಲಿ ದಲಿತ ವರ ಕುದುರೆ ಏರಿದ್ದನ್ನು ವಿರೋಧಿಸಿ ಮದುವೆ ಮೆರವಣಿಗೆಯನ್ನು ತಡೆದು ನಿಲ್ಲಿಸಲಾಯಿತು. ವರನ ಕಡೆಯವರ ಮೇಲೆ ಲಾಠಿ ಹಾಗೂ ಕಲ್ಲುಗಳಿಂದ ಹಲ್ಲೆ ನಡೆಸಲಾಯಿತು. ಈ ಘಟನೆಯ ನಂತರ ಗ್ರಾಮದ ಹಲವರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

        ಜಲೋರ್ ಜಿಲ್ಲೆಯ ಪ್ರಬ ಜಾತಿ ಧಾರ್ಮಿಕ ಸ್ಥಳದ ಮುಂದೆ ದಲಿತ ವರ ಕುದುರೆ ಸವಾರಿ ಮಾಡಿಕೊಂಡು ಹೋಗಬಾರದು ಎಂದು ಮೆರವಣಿಗೆಯನ್ನು ತಡೆದ ಘಟನೆ ನಡೆದಿತ್ತು.

        ಉತ್ತರ ಪ್ರದೇಶದ ಕಸ್ಗಂಜ್ ಮತ್ತು ಆಗ್ರಾ ಜಿಲ್ಲೆಗಳಲ್ಲಿ ಸಹ ಇದೇ ಮಾದರಿಯ ಪ್ರಕರಣಗಳು ನಡೆದಿವೆ. ಕಸ್ಗಂಜ್ ಜಿಲ್ಲೆಯ ದಲಿತ ವರನೊಬ್ಬ ತಾನು ಮದುವೆಯಲ್ಲಿ ಕುದುರೆ ಸವಾರಿ ಮಾಡಬೇಕು, ಮೆರವಣಿಗೆಯು ಮೇಲ್ಜಾತಿಯವರು ವಾಸಿಸುವ ರಸ್ತೆಯ ಮೂಲಕ ಸಾಗಬೇಕು ಎಂದು ಅಲಹಾಬಾದ್ ಹೈಕೋರ್ಟ್ ಮತ್ತು ಜಿಲ್ಲಾಡಳಿತದ ಮೊರೆ ಹೋಗಬೇಕಾಯಿತು. ತೀವ್ರ ಪ್ರತಿರೋಧದ ನಡುವೆಯೂ, ಭಾರಿ ಪೊಲೀಸ್ ಭದ್ರತೆಯೊಂದಿಗೆ ಆ ಮೆರವಣಿಗೆ ನಡೆದಿತ್ತು.

          ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

          LEAVE A REPLY

          Please enter your comment!
          Please enter your name here

          - Advertisment -

          ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

          ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

          ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

          ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

          ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

          ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

          ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

          ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

          ‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

          ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

          ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

          ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

          ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

          ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

          ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

          ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

          ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

          ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

          ‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

          ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...