Homeದಲಿತ್ ಫೈಲ್ಸ್ಗುಜರಾತ್: ದಲಿತ ಯುವಕನಿಗೆ ನಡುರಸ್ತೆಯಲ್ಲಿ ಮಾರಣಾಂತಿಕ ಥಳಿತ- ಐವರು ಸವರ್ಣೀಯರ ಬಂಧನ

ಗುಜರಾತ್: ದಲಿತ ಯುವಕನಿಗೆ ನಡುರಸ್ತೆಯಲ್ಲಿ ಮಾರಣಾಂತಿಕ ಥಳಿತ- ಐವರು ಸವರ್ಣೀಯರ ಬಂಧನ

- Advertisement -
- Advertisement -

ಹುಡುಗಿಯೊಂದಿಗೆ ಮಾತನಾಡುತ್ತಿದ್ದ ದಲಿತ ಯುವಕನಿಗೆ ನಡುರಸ್ತೆಯಲ್ಲಿ 7 ಜನ ಸವರ್ಣೀಯರು ಬೆಲ್ಟ್‌ಗಳಿಂದ ಮತ್ತು ಬಡಿಗೆಗಳಿಂದ ಮಾರಣಾಂತಿಕವಾಗಿ ಥಳಿಸಿರುವ ಅಮಾನುಷ ಘಟನೆ ಗುಜರಾತ್‌ನ ವಡೋದರದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಥಳಿಸುವ ವಿಡಿಯೋ ವೈರಲ್ ಆಗಿದ್ದು, ಅದರ ಆಧಾರದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಭಾಯ್ಲಿ ಗ್ರಾಮದ ನಿವಾಸಿ ಅಲ್ಪೇಶ್ ಪರ್ಮಾರ್ ಎಂಬ ದಲಿತ ಯುವಕ ವಡೋದರದ ಸೇವಾಸಿ ಕಾಲುವೆ ರಸ್ತೆಯಲ್ಲಿ ಹುಡುಗಿಯೊಂದಿಗೆ ಮಾತನಾಡುತ್ತಿದ್ದಾಗ ಏಳು ಜನರು ವಿನಾಕಾರಣ ಹಲ್ಲೆ ನಡೆಸಿದ್ದಾರೆ. ಜಾತಿನಿಂದನೆ ಮಾಡಿ, ಬೆಲ್ಟ್‌ಗಳಿಂದ ಮನಬಂದಂತೆ ತಳಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅದೇ ಗ್ರಾಮದ ಸವರ್ಣೀಯ ಹುಡುಗನೊಬ್ಬನ ಇನ್ಸ್ಟಗ್ರಾಂ ಖಾತೆಯಲ್ಲಿ ನಾನು ಕಮೆಂಟ್ ಮಾಡಿದ ಏಕೈಕ ಕಾರಣಕ್ಕಾಗಿ ನನ್ನ ಮೇಲೆ ಹಲ್ಲೆ ನಡೆಸಿದರು. ಅಲ್ಲದೆ ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದಲ್ಲದೆ ಪೊಲೀಸ್ ದೂರು ನೀಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಆದರೆ ಆ ವಿಡಿಯೋ ಎಲ್ಲೆಡೆ ವೈರಲ್ ಆದ ನಂತರ ನಮ್ಮ ಮನೆಯವರು ದೂರು ನೀಡಲು ಧೈರ್ಯ ತುಂಬಿದರು ಎಂದು ಸಂತ್ರಸ್ತ ಯುವಕ ಅಲ್ಪೇಶ್ ಪರ್ಮಾರ್ ತಿಳಿಸಿದ್ದಾರೆ.

ತನ್ನ ಮೇಲೆ ಹಲ್ಲೆ ನಡೆಸಿದ ವಿಡಿಯೋವನ್ನು “ನಮ್ಮ ಲೈವ್‌ನಲ್ಲಿ ನೆಗೆಟಿವ್ ಕಮೆಂಟ್ ಮಾಡುವವರಿಗೆ ಇದೇ ಗತಿ” ಎಂಬ ಎಚ್ಚರಿಕೆಯೊಂದಿಗೆ ಆರೋಪಿಗಳು ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಕೊನೆಯಲ್ಲಿ ‘ಜೈ ರಜಪೂತಾನ’ ಎಂದು ತಮ್ಮ ಜಾತಿಸೂಚಕವನ್ನು ಉಲ್ಲೇಖಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾವು ಏಳು ಆರೋಪಿಗಳ ಪೈಕಿ ನಾಲ್ವರನ್ನು ಬಂಧಿಸಿದ್ದೇವೆ. ಅವರಲ್ಲಿ ಇಬ್ಬರು ರಜಪೂತರು ಮತ್ತು ಇಬ್ಬರು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದವರು. ದಾಳಿಯ ಹಿಂದಿನ ನಿಖರವಾದ ಕಾರಣವನ್ನು ತನಿಖೆ ಮಾಡುತ್ತಿದ್ದೇವೆ. ಆರೋಪಿಗಳ ವಿರುದ್ಧ ಹಲವು IPC ಸೆಕ್ಷನ್‌ಗಳ ಅಡಿಯಲ್ಲಿ ಗಲಭೆ, ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಸಕ ಜಿಗ್ನೇಶ್ ಮೇವಾನಿ ಖಂಡನೆ

ದಲಿತ ಯುವಕನ ಮೇಲಿನ ಅಮಾನುಷ ಹಲ್ಲೆಯನ್ನು ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಖಂಡಿಸಿದ್ದಾರೆ. “ಉನಾ ಘಟನೆಯ ಸಮಯದಲ್ಲಿ, “ನೀವು ಕೊಲ್ಲಲು ಬಯಸಿದರೆ, ನನ್ನನ್ನು ಕೊಲ್ಲಿ, ನನ್ನ ದಲಿತ ಸಹೋದರರನ್ನಲ್ಲ” ಎಂದು ಮೋದಿಜಿ ಹೇಳಿದ್ದರು. ಆದರೆ ಅಂತಹ ಘಟನೆಗಳು ಮತ್ತೆ ಸಂಭವಿಸದಂತೆ ತಡೆಯಲು ಸರ್ಕಾರ ಮುಂದಾಗಲಿಲ್ಲ. ಅದರ ಫಲಿತಾಂಶವಾಗಿ ನಿನ್ನೆ ವಡೋದರಾ ಜಿಲ್ಲೆಯಲ್ಲಿ ದಲಿತ ಯುವಕನನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಪ್ರಯತ್ನ ನಡೆದಿದೆ. ಗುಜರಾತಿನಲ್ಲಿ ಗೂಂಡಾರಾಜ್ ಆಳ್ವಿಕೆ ನಡೆಯುತ್ತಿದೆ” ಎಂದು ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಶವಸಂಸ್ಕಾರ ತಡೆದ ಸವರ್ಣೀಯರು – ರಸ್ತೆಯಲ್ಲಿ ಶವ ಇಟ್ಟು 5 ಗಂಟೆ ಕಾದ ದಲಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಜಾತಿ ರೋಗಿಷ್ಟ ನಾಯಿಗಳಿಗೆ, ಆ ಪಡಪಾಯಿಗೆ ಹಲ್ಲೆ ಮಾಡಿದ ರೀತಿಯಲ್ಲೇ ಸಾರ್ವಜನಿಕವಾಗಿ ದಲಿತರು ಒಗ್ಗೂಡಿ ಮಾಡಬೇಕು,ಆಗಲೇ ಈ ರೋಗಪೀಡಿತ ಜಾತಿವಾದಿ ನಾಯಿಗಳಿಗೆ ಅರಿವಾಗೋದು.

  2. RSS AND BHAJARANGADAL ORGANIZATIONS WERE ONLY A SPECTATOR THEY SHOUT WHEN EVER THEY FACE TROUBLE FROM OTHER RELIGION THEY CAME TO S.C. PEOPLE FOR PROTEST THE INCIDENT S.C.S ARE HINDUS WHY HINDUS ARE THEMSELVES BEATEN TO DEATH IT IS THE BIRTH PLACE OF MAHATMA GANDHIS&SARDAR VALLABHBHAI PATEL AND ALSO PRESENT PRIME MINISTER OF THIS COUNTRY,ARE THEY NOT ABLE TO PROTECT THE LIFE OF DALITHS BY PUTTING PRESSURE ON LAW AND ORDER PROTECTORS IF NOT WHAT IS USE OF KEEPING SUCH AUTHORITY IN THE STATE LIKE GUJARAT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...