Homeಮುಖಪುಟಗುಜರಾತ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವ ಟಿಕೆಟ್ ವಂಚಿತರು!

ಗುಜರಾತ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವ ಟಿಕೆಟ್ ವಂಚಿತರು!

- Advertisement -
- Advertisement -

ಸತತ 27 ವರ್ಷಗಳಿಂದ ಗುಜರಾತ್‌ನಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷಕ್ಕೆ ಈ ಬಾರಿಯ ಚುನಾವಣೆಯಲ್ಲಿ ಬಂಡಾಯದ ಬಿಸಿ ಜೋರಾಗಿದೆ. 38 ಹಾಲಿ ಬಿಜೆಪಿ ಶಾಸಕರಿಗೆ ಅದು ಟಿಕೆಟ್ ನಿರಾಕರಿಸಿರಿವುದರಿಂದ ಬಂಡಾಯವೆದ್ದಿರುವ ಹಲವು ಶಾಸಕರು ಸಂಧಾನಕ್ಕೆ ಒಪ್ಪದೇ ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಗಾಂಧಿನಗರದ ಬಿಜೆಪಿ ಕಚೇರಿ ಕಮಲಂ ಎದರು ಬಿಜೆಪಿ ಪಕ್ಷದ ಕಾರ್ಯಕರ್ತರು ತಮ್ಮ ನಾಯಕರಿಗೆ ಟಿಕೆಟ್ ನೀಡದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ಗೃಹ ಸಚಿವ ಹರ್ಷ ಸಂಘ್ವಿ ನಾಲ್ವರು ಬಂಡಾಯ ಶಾಸಕರ ಜೊತೆ ಸಂಧಾನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜವಾಗಿಲ್ಲ.

20 ವರ್ಷಗಳ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಒತ್ತಾಯದ ಮೇರೆಗೆ ಬಿಜೆಪಿಗೆ ಸೇರಿದ್ದೆ ಎಂದು ಹೇಳಿಕೊಂಡಿರುವ ಆರು ಬಾರಿ ಶಾಸಕರಾಗಿರುವ ಟಿಕೆಟ್ ವಂಚಿತ ಮಧುಭಾಯಿ ಶ್ರೀವಾಸ್ತವ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಅತೃಪ್ತರ ಬಂಡಾಯ ಶಮನಗೊಳಿಸಲು ಗುಜರಾತ್‌ಗೆ ತೆರಳಿರುವ ಗೃಹ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರೊಂದಿಗೆ 5 ಗಂಟೆಗಳ ಸುದೀರ್ಘ ಸಭೆ ನಡೆಸಿದ್ದಾರೆ. ಬಂಡಾಯವೆದ್ದಿರುವವರು ಬಹಳ ವರ್ಷಗಳಿಂದ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರೊಂದಿಗೆ ಪ್ರೀತಿ ಮತ್ತು ಸಹಾನುಭೂತಿಯಿಂದ ಅವರೊಂದಿಗೆ ವ್ಯವಹರಿಸಿ ಎಂದು ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ.

ಇದೇ ರೀತಿಯ ಬಂಡಾಯವನ್ನು ಬಿಜೆಪಿ ಹಿಮಾಚಲ ಪ್ರದೇಶದಲ್ಲಿಯೂ ಸಹ ಅನುಭವಿಸಿತ್ತು. ಅಲ್ಲಿನ 68 ವಿಧಾನಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಫೋನ್ ಕರೆ ಮಾಡಿ ಮಾತನಾಡಿದರೂ ಸಹ ಒಬ್ಬ ಬಂಡಾಯಗಾರನನ್ನು ಸಹ ಮನವೊಲಿಸಲು ಸಾಧ್ಯವಾಗಿರಲಿಲ್ಲ.

ಗುಜರಾತ್ ಚುನಾವಣೆಯು ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. ನರೇಂದ್ರ ಮೋದಿ, ಅಮಿತ್ ಶಾ, ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿಯವರ ತವರು ರಾಜ್ಯವಾದ ಕಾರಣಕ್ಕೂ ಈ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

1995ರವರೆಗೆ ಗುಜರಾತ್ ರಾಜ್ಯವನ್ನು ಕಾಂಗ್ರೆಸ್, ಸಂಸ್ಥಾ ಕಾಂಗ್ರೆಸ್ ಮತ್ತು ಜನತಾದಳ ಪಕ್ಷಗಳು ಆಳಿದ್ದರೆ 1995ರಿಂದೀಚೆಗೆ ನಡೆದ 6 ಚುನಾವಣೆಗಳಲ್ಲಿ ಬಿಜೆಪಿ ಸತತವಾಗಿ ಗೆದ್ದು ಅಧಿಕಾರದಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆಯೆ ಅಧಿಕಾರಕ್ಕಾಗಿ ಪೈಪೋಟಿ ನಡೆಯುತ್ತಿತ್ತು. ಆದರೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಆಪ್ ಕೂಡ ಬಿರುಸಿನ ಪೈಪೋಟಿ ನೀಡಲು ಮುಂದಾಗಿದೆ. ಅದಕ್ಕೆ ಇಂಬು ಕೊಡುವಂತೆ ಕೆಲ ಸಮೀಕ್ಷೆಗಳು ಈ ಬಾರಿಯೂ ಬಿಜೆಪಿ ಬಹುಮತ ಸಾಧಿಸಲಿದ್ದು, ಆಪ್ ಎರಡನೇ ಸ್ಥಾನ ಪಡೆಯುತ್ತದೆ ಮತ್ತು ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡುತ್ತದೆ ಎಂದು ಭವಿಷ್ಯ ನುಡಿದಿವೆ. ಹಾಗಾಗಿ ಗುಜರಾತ್ ಚುನಾವಣೆ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

2017ರ ಚುನಾವಣಾ ಮೆಲುಕು

182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಸರಳ ಬಹುಮತಕ್ಕೆ 93 ಸ್ಥಾನಗಳ ಅಗತ್ಯವಿದೆ. 2017ರ ಕೊನೆಯ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ 99 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಂಡಿತು. ಅದು 2012ರ ಚುನಾವಣೆಗೆ ಹೋಲಿಸಿಕೊಂಡರೆ 16 ಸೀಟುಗಳನ್ನು ಕಳೆದುಕೊಂಡರೂ ಆಡಳಿತ ವಿರೋಧಿ ಅಲೆಯ ನಡುವೆಯೂ ಸತತ ಆರನೇ ಬಾರಿಗೆ ಅಧಿಕಾರ ದಕ್ಕಿಸಿಕೊಂಡಿದ್ದು ದಾಖಲೆಯೇ ಸರಿ. ಕಾಂಗ್ರೆಸ್ ಅಧಿಕಾರದ ಹತ್ತಿರಕ್ಕೆ ಬಂದು (77 ಸ್ಥಾನಗಳು) ಎಡವಿತು. ಅದು 16 ಹೆಚ್ಚುವರಿ ಸೀಟುಗಳನ್ನು ಗೆದ್ದುಕೊಂಡರೂ ಸಹ ಸರಳ ಬಹುಮತ ತಲುಪಲು ಸಾಧ್ಯವಾಗಲಿಲ್ಲ.

2017ರ ಚುನಾವಣೆಯ ಸಮಯದಲ್ಲಿ ಊನಾ ದಲಿತ ಚಳವಳಿಯ ನಾಯಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದರೆ, ಪಾಟೀದಾರ್ ಮೀಸಲಾತಿಗಾಗಿನ ಹೋರಾಟಗಾರ ಹಾರ್ದಿಕ್ ಪಟೇಲ್ ಮತ್ತು ಹಿಂದುಳಿದ ವರ್ಗದ ಯುವ ನಾಯಕ ಅಲ್ಪೇಶ್ ಠಾಕೂರ್ ಕಾಂಗ್ರೆಸ್ ಸೇರಿದ್ದರು. ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ವಿರುದ್ಧ ಸೂರತ್‌ನ ವ್ಯಾಪಾರಿ ಸಮುದಾಯದಲ್ಲಿ ಆಕ್ರೋಶವಿತ್ತು. ಆದರೂ ಕಾಂಗ್ರೆಸ್ ಗೆಲ್ಲಲಾಗಲಿಲ್ಲ. ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ನರೇಂದ್ರ ಮೋದಿಯವರನ್ನು ನೀಚ ಮನುಷ್ಯ ಎಂದು ಕರೆದಿದ್ದುದು ಕಾಂಗ್ರೆಸ್‌ಗೆ ಮುಳುವಾಯಿತು ಎಂಬ ವಿಶ್ಲೇಷಣೆಗಳು ಕೇಳಿಬಂದಿದ್ದವು.

ಗುಜರಾತ್ ನಗರಗಳಲ್ಲಿ ಬಿಜೆಪಿ ಪ್ರಾಬಲ್ಯ- ಗ್ರಾಮೀಣದಲ್ಲಿ ಕಾಂಗ್ರೆಸ್ ಹಿಡಿತ

ಗುಜರಾತ್ ಹೆಚ್ಚು ನಗರೀಕೃತ ರಾಜ್ಯವಾಗಿದೆ. ರಾಜ್ಯದಲ್ಲಿ ಶೇ.43ರಷ್ಟು ನಗರನಿವಾಸಿಗಳು ಎಂದು 2011ರ ಜನಗಣತಿ ಹೇಳುತ್ತದೆ. ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 84 ಕ್ಷೇತ್ರಗಳು ನಗರ, ಪಟ್ಟಣ ಪ್ರದೇಶಗಳಲ್ಲಿದ್ದರೆ, ಉಳಿದ 98 ಕ್ಷೇತ್ರಗಳು ಗ್ರಾಮೀಣ ಭಾಗದಲ್ಲಿವೆ. ಇತ್ತೀಚಿನ ಚುನಾವಣೆಗಳಲ್ಲಿ ನಗರ ಭಾಗದಲ್ಲಿ ಬಿಜೆಪಿ ಹಿಡಿತವಿದ್ದರೆ ಕಾಂಗ್ರೆಸ್ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯ ಸಾಧಿಸಿದೆ.

2017ರ ಚುನಾವಣೆಯನ್ನು ನೋಡುವುದಾದರೆ ನಗರಗಳಲ್ಲಿನ 84 ಕ್ಷೇತ್ರಗಳಲ್ಲಿ ಬಿಜೆಪಿ 63 ಅನ್ನು ಗೆದ್ದುಕೊಂಡಿತ್ತು. ಆದರೆ ಗ್ರಾಮೀಣ ಭಾಗದಲ್ಲಿನ 98 ಕ್ಷೇತ್ರಗಳಲ್ಲಿ 36 ಸ್ಥಾನಗಳಿಗೆ ಸೀಮಿತಗೊಂಡಿತ್ತು. ಅದೇ ರೀತಿ ಕಾಂಗ್ರೆಸ್ ಪಕ್ಷವು ನಗರ ಭಾಗದಲ್ಲಿ ಕೇವಲ 20 ಸ್ಥಾನಗಳಲ್ಲಿ ಗೆಲುವು ಕಂಡರೆ, ಗ್ರಾಮೀಣ ಭಾಗದಲ್ಲಿ 57 ಕ್ಷೇತ್ರಗಳಲ್ಲಿ ಪ್ರಾಬಲ್ಯ ಮೆರೆದಿತ್ತು.

ಆಪ್ ಪ್ರವೇಶದಿಂದ ಯಾರಿಗೆ ಲಾಭ?

2017ರ ಚುನಾವಣೆಯಲ್ಲಿ ಆಪ್ ಗುಜರಾತ್‌ನಲ್ಲಿ ಗಮನ ಸೆಳೆಯಲು ವಿಫಲವಾಗಿತ್ತು. ಆದರೆ ದೆಹಲಿ ನಂತರ ಪಂಜಾಬ್‌ನಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಆಮ್ ಆದ್ಮಿ ಪಕ್ಷ ಸದ್ಯ ಗುಜರಾತ್ ಮೇಲೆ ಹೆಚ್ಚು ಗಮನ ಹರಿಸಿದೆ. ದೊಡ್ಡದೊಡ್ಡ ರ‍್ಯಾಲಿಗಳನ್ನು ನಡೆಸುತ್ತಿದ್ದು ಈಗಾಗಲೇ 118 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಾಧ್ಯಮಗಳು ಸಹ ಆಪ್ ಪಕ್ಷಕ್ಕೆ ಸಾಕಷ್ಟು ಪ್ರಚಾರ ನೀಡಿವೆ. ಕೆಲ ಸರ್ವೆಗಳು ಆಪ್ 22% ಮತಗಳೊಂದಿಗೆ ಕಾಂಗ್ರೆಸ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದು ಮುಖ್ಯ ವಿರೋಧ ಪಕ್ಷವಾಗಲಿದೆ ಎಂದಿವೆ. ಹಾಗಾಗಿ ಆಪ್ ಮೇಲೆ ಎಲ್ಲರ ಕಣ್ಣಿದೆ.

ಮಧ್ಯಮ ವರ್ಗ ಮತ್ತು ನಗರ ಕೇಂದ್ರಿತವಾದ ಆಮ್ ಆದ್ಮಿ ಪಕ್ಷವು ಬಿಜೆಪಿ ಮತಬ್ಯಾಂಕ್‌ಗೆ ಕೈಹಾಕಲಿದೆ ಎಂದು ಗುಜರಾತ್ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. “ಆಪ್‌ಗೆ ಗ್ರಾಮೀಣ ಭಾಗದಲ್ಲಿ ಯಾವುದೇ ನೆಲೆಯಿಲ್ಲ. ಅದು ಏನಿದ್ದರೂ ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಗೆಲ್ಲಲಾಗದ ನಗರ ಮತ್ತು ಅರೆ ನಗರದ 66 ಕ್ಷೇತ್ರಗಳಲ್ಲಿ ಬಿಜೆಪಿಗೆ ತಲೆನೋವಾಗಲಿದೆ. ಆಡಳಿತ ವಿರೋಧಿ ಅಲೆ ಗಗನಕ್ಕೇರಿದ್ದು ಜನರು ಬಿಜೆಪಿಯ ದುರಾಡಳಿತದಿಂದ ಬಸವಳಿದಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ಪರೇಶ್ ಧಾನನಿ ಹೇಳಿದ್ದಾರೆ. ಆಪ್ ನಗರ ಪ್ರದೇಶಗಳಲ್ಲಿ ಒಂದಷ್ಟು ಮತ ಗಳಿಸುತ್ತದೆಯೇ ಹೊರತು ಅದು ಅಸೆಂಬ್ಲಿ ಸೀಟುಗಳನ್ನು ಗೆಲ್ಲುವುದಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿ ಅಭಿಪ್ರಾಯ ಪಡುತ್ತಾರೆ.

2017ರ ಚುನಾವಣೆಯಲ್ಲಿ ಬಿಜೆಪಿ 49.1% ಮತ ಗಳಿಸಿದರೆ ಕಾಂಗ್ರೆಸ್ 41.4% ಮತ ಗಳಿಸಿತ್ತು. ಆಪ್ ಕೇವಲ 0.10% ಮತಗಳನ್ನಷ್ಟೆ ಗಳಿಸಿತ್ತು. ಅದು ಈ ಬಾರಿ ತನ್ನ ಮತ ಪ್ರಮಾಣವನ್ನು ಎಷ್ಟು ಹೆಚ್ಚಿಸಿಕೊಳ್ಳುತ್ತದೆ ಎನ್ನುವುದರ ಮೇಲೆ ಗುಜರಾತ್‌ನಲ್ಲಿ ಯಾರು ಬಹುಮತ ಗಳಿಸುತ್ತಾರೆ ಎನ್ನುವುದು ನಿರ್ಧಾರವಾಗಲಿದೆ.

ಇದನ್ನೂ ಓದಿ; ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...