Homeಮುಖಪುಟಗುಜರಾತ್‌ ಚುನಾವಣೆ: ಇನ್‌ಸ್ಟಾದಲ್ಲಿ ಪೋಸ್ಟ್‌ ಹಾಕಿದ್ದ ಐಎಎಸ್ ಅಧಿಕಾರಿ ಅಮಾನತು

ಗುಜರಾತ್‌ ಚುನಾವಣೆ: ಇನ್‌ಸ್ಟಾದಲ್ಲಿ ಪೋಸ್ಟ್‌ ಹಾಕಿದ್ದ ಐಎಎಸ್ ಅಧಿಕಾರಿ ಅಮಾನತು

- Advertisement -
- Advertisement -

ಗುಜರಾತ್ ಚುನಾವಣಾ ಕರ್ತವ್ಯಕ್ಕೆ ನಿಯೋಜಿತವಾಗಿರುವ ಅಧಿಕಾರಿಯೊಬ್ಬರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮಾಡಿರುವ ಪೋಸ್ಟ್‌ಗಳ ಕಾರಣಕ್ಕಾಗಿ ಅಮಾನತಿಗೆ ಒಳಗಾಗಿದ್ದಾರೆ.

ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಅಭಿಷೇಕ್ ಸಿಂಗ್ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಕಾರಣಕ್ಕಾಗಿ ಚುನಾವಣಾ ಆಯೋಗವು ಅವರನ್ನು ಕರ್ತವ್ಯದಿಂದ ತೆರವು ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಭಿಷೇಕ್ ಸಿಂಗ್ ಅವರು “ಜನರಲ್ ಅಬ್ಸರ್ವರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ತಮ್ಮ ಅಧಿಕೃತ ಸ್ಥಾನವನ್ನು ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ” ಎಂದು ಚುನಾವಣಾ ಆಯೋಗದ ಆದೇಶ ತಿಳಿಸಿದೆ.

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ಚುನಾವಣೆಗೆ ಮುಂಚಿತವಾಗಿ, ಉತ್ತರ ಪ್ರದೇಶ ಕೇಡರ್ ಅಧಿಕಾರಿ ಅಭಿಷೇಕ್ ಸಿಂಗ್ ಅವರನ್ನು ಅಹಮದಾಬಾದ್‌ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ (ಬಾಪುನಗರ ಮತ್ತು ಅಸರ್ವಾ) ಸಾಮಾನ್ಯ ವೀಕ್ಷಕರನ್ನಾಗಿ ನೇಮಿಸಲಾಗಿತ್ತು.

 

View this post on Instagram

 

A post shared by Abhishek Singh (@abhishek_as_it_is)

ಸಾಮಾಜಿಕ ಮಾಧ್ಯಮದಲ್ಲಿ ಅಭಿಷೇಕ್ ಎಸ್. ಐಎಎಸ್ ಎಂದು ಗುರುತಿಸಿಕೊಂಡಿರುವ ಅಧಿಕಾರಿಯು, ಇನ್‌ಸ್ಟಾಗ್ರಾಮ್‌ನಲ್ಲಿ ಎರಡು ಫೋಟೋಗಳನ್ನು ಹಂಚಿಕೊಂಡಿದ್ದರು. ಬಿಕಾನ್‌ ಇರುವ ಅಧಿಕೃತ ಕಾರಿಗೆ ‘ವೀಕ್ಷಕ’ ಎಂಬ ಬೋರ್ಡ್ ನೇತು ಹಾಕಲಾಗಿದ್ದು, ಅದರ ಪಕ್ಕದಲ್ಲಿ ಅಧಿಕಾರಿ ನಿಂತಿರುವುದನ್ನು ಒಂದು ಫೋಟೋದಲ್ಲಿ ಕಾಣಬಹುದು.

“ಗುಜರಾತ್ ಚುನಾವಣೆಗೆ ವೀಕ್ಷಕನಾಗಿ ಸೇರ್ಪಡೆಗೊಂಡಿದ್ದೇನೆ” ಎಂದು ಶೀರ್ಷಿಕೆಯನ್ನು ನೀಡಲಾಗಿದೆ. ಮತ್ತೊಂದು ಫೋಟೋದಲ್ಲಿ ಅಭಿಷೇಕ್ ಅವರೊಂದಿಗೆ ಇನ್ನೂ ಮೂವರು ಅಧಿಕಾರಿಗಳು ಮತ್ತು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ಇರುವುದನ್ನು ಕಾಣಬಹುದು.

ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಅಭಿಷೇಕ್ ಅವರು ತಮ್ಮನ್ನು “ಸಾರ್ವಜನಿಕ ಸೇವಕ, ನಟ, ಸಾಮಾಜಿಕ ಉದ್ಯಮಿ ಮತ್ತು ಪಟ್ಟುಬಿಡದ ಆಶಾವಾದಿ” ಎಂದು ವಿವರಿಸಿಕೊಂಡಿದ್ದಾರೆ.

ಈ ಫೋಟೋಗಳನ್ನು ಟ್ವಿಟರ್‌ನಲ್ಲಿಯೂ ಅವರು ಹಂಚಿಕೊಂಡಿದ್ದಾರೆ.

“ಚುನಾವಣಾ ಆಯೋಗವು ಅಧಿಕಾರಿಯ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಅವರನ್ನು ಸಾಮಾನ್ಯ ವೀಕ್ಷಕ ಹುದ್ದೆಯಿಂದ ತಕ್ಷಣವೇ ತೆರೆವು ಮಾಡಲಾಗಿದೆ. ಮುಂದಿನ ಆದೇಶದವರೆಗೆ ಯಾವುದೇ ಚುನಾವಣಾ ಸಂಬಂಧಿತ ಕರ್ತವ್ಯದಿಂದ ಅವರನ್ನು ಹೊರಗಿಡಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಭಿಷೇಕ್, ಚುನಾವಣಾ ಆಯೋಗದ ನಿರ್ಧಾರವನ್ನು ಒಪ್ಪಿಕೊಂಡಿರುವುದಾಗಿಯೂ ಹೇಳಿದ್ದಾರೆ.

“ಗೌರವಾನ್ವಿತ ಚುನಾವಣಾ ಆಯೋಗದ ನಿರ್ಧಾರವನ್ನು ಎಲ್ಲಾ ನಮ್ರತೆಯಿಂದ ಸ್ವೀಕರಿಸುತ್ತೇನೆ. ಈ ಪೋಸ್ಟ್‌ನಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಒಬ್ಬ ಸಾರ್ವಜನಿಕ ಸೇವಕ ತನ್ನ ಕರ್ತವ್ಯದ ಕುರಿತು ಸಾರ್ವಜನಿಕರಿಗೆ ತಿಳಿಸುವ ವಿಷಯ ಇದಾಗಿದೆ. ಆದರೆ ಪ್ರಚಾರ ಅಥವಾ ಸ್ಟಂಟ್ ಅಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

ಅಧಿಕಾರಿಯು ತಕ್ಷಣವೇ ಕ್ಷೇತ್ರವನ್ನು ತೊರೆಯಬೇಕು. ಇವರ ನಂತರದ ಅಧಿಕಾರಿ ಕೆಲಸಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಆದೇಶಿಸಲಾಯಿತು. ಅಭಿಷೇಕ್‌ ಅವರ ಪೋಸ್ಟ್‌ಗಳಲ್ಲಿ ಕಾಣಿಸಿಕೊಂಡಿದ್ದ ಕಾರು ಸೇರಿದಂತೆ ಗುಜರಾತ್‌ನಲ್ಲಿ ಅವರಿಗೆ ಒದಗಿಸಲಾದ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಸಹ ಕಸಿದುಕೊಳ್ಳಲಾಗಿದೆ.

ಅಭಿಷೇಕ್ ಅವರ ಸ್ಥಾನಕ್ಕೆ ಮತ್ತೊಬ್ಬ ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಕ್ರಿಶನ್ ಬಾಜ್‌ಪೇಯ್ ಅವರನ್ನು ನೇಮಿಸಲಾಗಿದೆ.

ಗುಜರಾತ್‌ನಲ್ಲಿ ಹೊಸ ಸರ್ಕಾರ ರಚನೆಗಾಗಿ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...