Homeಮುಖಪುಟಗುಜರಾತ್ ಚುನಾವಣೆ: ಹಾರ್ದಿಕ್ ಪಟೇಲ್‌, ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್

ಗುಜರಾತ್ ಚುನಾವಣೆ: ಹಾರ್ದಿಕ್ ಪಟೇಲ್‌, ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್

- Advertisement -
- Advertisement -

ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ನಡೆಯುವ ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಒಟ್ಟು 182 ಕ್ಷೇತ್ರಗಳಲ್ಲಿ 160 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಅದರಲ್ಲಿ ಪಾಟೀದಾರ್ ಮೀಸಲಾತಿ ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಮತ್ತು ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ರಿವಾಬ ಜಡೇಜಾ ಕೂಡ ಸೇರಿದ್ದಾರೆ.

ವಿರಾಮ್‌ಗ್ರಾಮ್‌ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಹಾರ್ದಿಕ್ ಪಟೇಲ್ ಇತ್ತೀಚಿಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. 2019ರಲ್ಲಿಯೇ ಬಿಜೆಪಿ ಸೇರಿದ್ದ ರಿವಾಬ ಜಡೇಜಾ ಜಾಮ್‌ನಗರದಿಂದ ಸ್ಪರ್ಧಿಸಲಿದ್ದಾರೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಘಾಟ್ಲೊಡಿಯ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಬಿಜೆಪಿಯು ಹಾಲಿ 38 ಶಾಸಕರಿಗೆ ಟಿಕೆಟ್ ನೀಡದೆ ಹೊಸಬರಿಗೆ ಮಣೆ ಹಾಕಿದೆ. ಅದರಲ್ಲಿ ಇತ್ತೀಚಿಗೆ ಮೊರ್ಬಿ ತೂಗು ಸೇತುವೆ ದುರಂತ ಸಂಭವಿಸಿದ ಕ್ಷೇತ್ರದ ಶಾಸಕನಿಗೂ ಕೂಡ ಟಿಕೆಟ್ ನಿರಾಕರಿಸಲಾಗಿದೆ. ಅಲ್ಲದೆ ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದ 7 ಜನರಿಗೆ ಬಿಜೆಪಿ ಟಿಕೆಟ್ ನೀಡಿದೆ.

27 ವರ್ಷಗಳಿಂದ ಸತತವಾಗಿ ಗುಜರಾತ್‌ನಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಹಲವು ಹಿರಿಯ ನಾಯಕರಿಗೆ ಟಿಕೆಟ್ ನಿರಾಕರಿಸಿದೆ. ಮಾಜಿ ಸಿಎಂ ವಿಜಯ್ ರೂಪಾಣಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಬಹುಮತಕ್ಕೆ 93 ಸ್ಥಾನಗಳ ಅಗತ್ಯವಿದೆ. 2017ರ ಕಳೆದ ಚುನಾವಣೆಯಲ್ಲಿ ಬಿಜೆಪಿ 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಅಧಿಕಾರ ಹಿಡಿದಿತ್ತು. ಕಾಂಗ್ರೆಸ್ 77 ಸ್ಥಾನ ಪಡೆದಿತ್ತು.

ಇದನ್ನೂ ಓದಿ: ‘ನನ್ನ ಫೋನ್ ಕದ್ದಾಲಿಸಲಾಗಿದ್ದು, ಖಾಸಗಿತನ ಉಲ್ಲಂಘನೆಯಾಗಿದೆ’: ತೆಲಂಗಾಣ ಗವರ್ನರ್‌‌ ಗಂಭೀರ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

0
ಔಷಧೀಯ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಒಪ್ಪಿಕೊಂಡ ಹಿನ್ನೆಲೆ, ವಕೀಲರೊಬ್ಬರು ಈ ಲಸಿಕೆಯ ಅಡ್ಡ ಪರಿಣಾಮಗಳು ಮತ್ತು ಅಪಾಯದ ಅಂಶಗಳನ್ನು ಪರೀಕ್ಷಿಸಲು ವೈದ್ಯಕೀಯ...