Homeಮುಖಪುಟಗುಜರಾತ್‌| ಪ್ರಮುಖ ದಿನಪತ್ರಿಕೆ ಮಾಲೀಕರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ

ಗುಜರಾತ್‌| ಪ್ರಮುಖ ದಿನಪತ್ರಿಕೆ ಮಾಲೀಕರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ

- Advertisement -
- Advertisement -

ಆರ್ಥಿಕ ವಂಚನೆ ಆರೋಪದ ಮೇಲೆ ಪ್ರಮುಖ ಗುಜರಾತಿ ದಿನಪತ್ರಿಕೆ ಗುಜರಾತ್ ಸಮಾಚಾರ್‌ನ ಮಾಲೀಕರಲ್ಲಿ ಒಬ್ಬರನ್ನು ಜಾರಿ ನಿರ್ದೇಶನಾಲಯ ಗುರುವಾರ ತಡರಾತ್ರಿ ಬಂಧಿಸಿದೆ. ಆರೋಪಗಳ ವಿವರಗಳು ಇನ್ನೂ ಸಂಪೂರ್ಣವಾಗಿ ತಿಳಿದಿಲ್ಲ. ಆದರೆ, ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಅವರನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದು ಕುಟುಂಬ ಹೇಳಿಕೊಂಡಿದೆ.

ದಿನಪತ್ರಿಕೆಯ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರನ್ನು ಶುಕ್ರವಾರ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. “ಹೌದು, ಮಾಹಿತಿ ಸರಿಯಾಗಿದೆ. ಬಾಹುಬಲಿಭಾಯ್ ಅವರನ್ನು ಹಳೆಯ ಪ್ರಕರಣದಲ್ಲಿ ಬಂಧಿಸಲಾಗಿದೆ. ಆರೋಪಗಳ ಬಗ್ಗೆ ನಮಗೆ ಇನ್ನೂ ಹೆಚ್ಚಿನ ವಿವರಗಳಿಲ್ಲ.. ನಮ್ಮನ್ನು ಗುರಿಯಾಗಿಸಲಾಗುತ್ತಿದೆ” ಎಂದು ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಶ್ರೇಯಂಶ್ ಶಾ ಡಿಎಚ್‌ಗೆ ತಿಳಿಸಿದ್ದಾರೆ. ಇಡಿಯಿಂದ ಪ್ರತಿಕ್ರಿಯೆ ಪಡೆಯುವ ಪ್ರಯತ್ನಗಳು ಸಹ ಯಾವುದೇ ಫಲ ನೀಡಲಿಲ್ಲ ಎಂದು ಹೇಳಿದ್ದಾರೆ.

ಅತಿದೊಡ್ಡ ಪ್ರಸಾರವಾಗುವ ಸ್ಥಳೀಯ ಪತ್ರಿಕೆಗಳಲ್ಲಿ ಒಂದಾದ ಗುಜರಾತ್ ಸಮಾಚಾರ್ ಅನ್ನು 1932 ರಲ್ಲಿ ಸ್ಥಾಪಿಸಲಾಯಿತು. ಇದನ್ನು ಬಾಹುಬಲಿ ಶಾ ಮತ್ತು ಅವರ ಸಹೋದರ ಶ್ರೇಯಂಶ್ ಶಾ ಜಂಟಿಯಾಗಿ ನಡೆಸುತ್ತಿದ್ದಾರೆ.

“ಆದಾಯ ತೆರಿಗೆ ಇಲಾಖೆ ನಡೆಸಿದ ಕಾರ್ಯಾಚರಣೆಯ ಕೆಲವೇ ಗಂಟೆಗಳಲ್ಲಿ ಇಡಿ ಬಾಹುಬಲಿ ಶಾ ಅವರನ್ನು ಬಂಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ವಿರುದ್ಧ ಪತ್ರಿಕೆಯಲ್ಲಿ ಬಂದಿರುವ ಟೀಕಾತ್ಮಕ ಬರಹವೇ ಅವರ ಬಂಧನಕ್ಕೆ ನಿಜವಾದ ಕಾರಣ” ಎಂದು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಶಕ್ತಿಸಿನ್ಹ ಗೋಹಿಲ್ ಹೇಳಿದ್ದಾರೆ.

ಬಾಹುಬಲಿ ಶಾ ಅವರನ್ನು ಬಂಧಿಸಲಾಗಿದೆ ಎಂದು ದೃಢಪಡಿಸಿದ ಶಾ ಕುಟುಂಬದೊಂದಿಗೆ ಮಾತನಾಡಿರುವುದಾಗಿ ಗೋಹಿಲ್ ಡಿಎಚ್‌ಗೆ ತಿಳಿಸಿದ್ದಾರೆ. ಶಾ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ನಂತರ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿಂದ ರಾತ್ರಿ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

“ಸತ್ಯದ ಪರವಾಗಿ ನಿಲ್ಲಲು ಶಿಕ್ಷೆ ನೀಡುವುದು ಬಿಜೆಪಿ ಸರ್ಕಾರದ ಧ್ಯೇಯವಾಗಿದೆ. ಪ್ರಮುಖ ಗುಜರಾತಿ ಪತ್ರಿಕೆ ಗುಜರಾತ್ ಸಮಾಚಾರ್ ಯಾವಾಗಲೂ ಅಧಿಕಾರದ ವಿರುದ್ಧ ಎದ್ದು ನಿಂತಿದೆ, ಅದು ಯಾರೇ ಆಗಿರಲಿ. ಆದರೂ, ಇತ್ತೀಚಿನ ಭಾರತ – ಪಾಕಿಸ್ತಾನದಲ್ಲಿ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿಗೆ ಕನ್ನಡಿ ತೋರಿಸುವುದರಿಂದ ಮೋದಿ ತಮ್ಮ ನೆಚ್ಚಿನ ಟೂಲ್ ಕಿಟ್, ಅವರ ಬೇಟೆಗಾರರನ್ನು ಬಿಡುಗಡೆ ಮಾಡಿದ್ದಾರೆ. ಆದಾಯ ತೆರಿಗೆ (ಐಟಿ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಗುಜರಾತ್ ಸಮಾಚಾರ್ ಮತ್ತು ಅದರ ದೂರದರ್ಶನ ಚಾನೆಲ್ ಜಿಎಸ್‌ಟಿವಿ ಮತ್ತು ಇತರ ವ್ಯವಹಾರ ಸಂಸ್ಥೆಗಳ ಮೇಲೆ ದಾಳಿ ಮಾಡಿದೆ” ಎಂದು ಗೋಹಿಲ್ ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಬಾಹುಬಲಿಭಾಯಿ ಆರೋಗ್ಯ ಸಮಸ್ಯೆಗಳಿರುವ ಹಿರಿಯ ನಾಗರಿಕ. ಮೋದಿ ಸರ್ಕಾರದ ಈ ಅತಿರೇಕವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಮಾಧ್ಯಮಗಳು ತಮ್ಮ ಕೆಲಸವನ್ನು ನಿರ್ದಯವಾಗಿ ಗುರಿಯಾಗಿಸಲಾಗುತ್ತಿದೆ. ಪ್ರತಿಯೊಂದು ಮಾಧ್ಯಮವು ಗೋಡಿ ಅಲ್ಲ ಮತ್ತು ತಮ್ಮ ಆತ್ಮವನ್ನು ಮಾರಲು ಸಿದ್ಧವಾಗಿಲ್ಲ ಎಂದು ಬಿಜೆಪಿ ತಿಳಿದಿರಬೇಕು” ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಕುಟುಂಬ ನಡೆಸುವ ಪತ್ರಿಕೆಯ ಮೇಲೆ ಎರಡು ದಿನಗಳ ಹಿಂದೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದರು. ನಂತರ, ಇಡಿ ಪತ್ರಿಕೆಯ ಆವರಣ ಮತ್ತು ಅದಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆಯೂ ದಾಳಿ ನಡೆಸಿತು. ಇತ್ತೀಚೆಗೆ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪತ್ರಿಕೆಯ ಎಕ್ಸ್ ಖಾತೆಯನ್ನು ಸರ್ಕಾರವು ನಿರ್ಬಂಧಿಸಿದೆ; ಖಾತೆಯನ್ನು ಅಮಾನತುಗೊಳಿಸಲಾಗಿದೆ.

ಗುಜರಾತ್ ಸಮಾಚಾರ್ ಸುದ್ದಿ ವಾಹಿನಿಯಲ್ಲಿ ಚರ್ಚಾ ಕಾರ್ಯಕ್ರಮವನ್ನು ನಡೆಸುತ್ತಿರುವ ಆಮ್ ಆದ್ಮಿ ಪಕ್ಷದ ಗುಜರಾತ್ ಅಧ್ಯಕ್ಷ ಇಸುದನ್ ಗಧ್ವಿ, ಐ-ಟಿ ಮತ್ತು ಇಡಿ ನಡೆಸಿದ ದಾಳಿಗಳನ್ನು ಟೀಕಿಸಿ, ಪತ್ರಿಕೆಯು ನಿರ್ಭೀತ ಪತ್ರಿಕೋದ್ಯಮವನ್ನು ಅನುಸರಿಸದಂತೆ ‘ಬೆದರಿಸುವ’ ಪ್ರಯತ್ನವಾಗಿದೆ ಎಂದು ಆರೋಪಿಸಿದರು.

“ತುರ್ತು ಪರಿಸ್ಥಿತಿಯ ಸಮಯದಲ್ಲಿ, ಗುಜರಾತ್ ಸಮಾಚಾರ್ ಕಚೇರಿಯನ್ನು ಸುಟ್ಟುಹಾಕಲಾಯಿತು. ಆದರೆ, ಆಗಲೂ ಪತ್ರಿಕೆ ಸತ್ಯವನ್ನು ವರದಿ ಮಾಡುವುದನ್ನು ನಿಲ್ಲಿಸಲಿಲ್ಲ” ಎಂದು ಗಧ್ವಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ರಾತ್ರೋರಾತ್ರಿ ಪರಿವರ್ತನೆ ನಿರೀಕ್ಷಿಸುವುದು ಅವಾಸ್ತವಿಕ: ಫಾರೂಕ್ ಅಬ್ದುಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...